ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ವಂಚನೆ: ಓರ್ವನ ಬಂಧನ

Team Udayavani, Jul 22, 2019, 9:58 AM IST

ಪುತ್ತೂರು: ಬ್ಯಾಂಕಿನಲ್ಲಿ ಚಿನ್ನದ ಲೇಪನ ಮಾಡಿದ ಆಭರಣವನ್ನು ಅಡವಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಲಾಡು ಗ್ರಾಮದ ಬಂಗಾರಡ್ಕ ನಿವಾಸಿ ಗಣೇಶ್‌ ಆಚಾರ್ಯ ಎಂಬಾತನನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕೊಂದರ ನಿತ್ಯ ಠೇವಣಿ ಸಂಗ್ರಾಹಕನಾಗಿರುವ ಗಣೇಶ್‌ ಆಚಾರ್ಯ ನಗರದ ಫೆಡರಲ್‌ ಬ್ಯಾಂಕಿನಲ್ಲಿ ಅಡಮಾನದ ಸಾಲ ಪಡೆದುಕೊಂಡಿದ್ದರು. ಇತ್ತೀಚೆಗೆ ಅಡವಿಟ್ಟ ಆಭರಣಕ್ಕೆ ಸಂಬಂಧಿಸಿ ಹಣ ಮರುಪಾವತಿ ತಡವಾಗು ತ್ತಿರುವುದರಿಂದ ಅನುಮಾನಗೊಂಡ ಬ್ಯಾಂಕ್‌ ಸಿಬಂದಿ ಆಭರಣವನ್ನು ಮರು ಪರಿಶೀಲನೆ ನಡೆಸಿದಾಗ ಅದು ನಕಲಿಯಾಗಿದ್ದುದು ಪತ್ತೆಯಾಗಿದೆ.

ಬ್ಯಾಂಕ್‌ ಮ್ಯಾನೇಜರ್‌ ತರುಣ್‌ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ