ಕೋಮು ಸಾಮರಸ್ಯಕ್ಕೆ  ವಿದ್ಯಾರ್ಥಿಗಳಿಂದ ‘ಬಣ್ಣ’


Team Udayavani, May 24, 2018, 10:23 AM IST

24-may-2.jpg

ಉಳ್ಳಾಲ: ಧರ್ಮದ ಹೆಸರಿನಲ್ಲಿ ಅಲ್ಲಲ್ಲಿ ಸಾಮರಸ್ಯ ಕದಡುವ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇನ್ನೊಂದೆಡೆ ರಾಜಕೀಯವಾಗಿಯೂ ಧರ್ಮಗಳು ಬೆರೆತು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸ್ಥಳೀಯ ಯುವಕರ ತಂಡದೊಂದಿಗೆ ಸೇರಿಕೊಂಡು ಯುವ ಸಮುದಾಯದಲ್ಲಿ ಕೋಮು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ಕಿರು ಚಿತ್ರವೊಂದನ್ನು ನಿರ್ಮಿಸಿದ್ದು, ಸೋಮೇಶ್ವರ ಪಿಲಾರ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಾಗೃತಿಗಾಗಿ ‘ಬಣ್ಣ’ ಹಚ್ಚಿದ್ದಾರೆ.

‘ಸ್ಟೋರಿ ಬೋರ್ಡ್‌ ಕ್ರಿಯೇಷನ್ಸ್‌’ ಅನ್ನುವ ಲಾಂಛನದಡಿ ‘ಬಣ್ಣ’ ಅನ್ನುವ ಕಿರುಚಿತ್ರವನ್ನು ರಚಿಸಿ ಶಾಲಾ ಆರಂಭದಲ್ಲೇ ಜಾಗೃತಿ ಮೂಡಿಸಲು ಮುಂದಾಗಿದೆ. ಸೋಮೇಶ್ವರ ಪಿಲಾರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಜತೆಗೂಡಿಸಿ ಶಾಲಾ ವಠಾರದಲ್ಲೇ ಕಿರುಚಿತ್ರವನ್ನು ರಚಿಸಿದೆ. ಆರು ನಿಮಿಷಗಳ ಕಿರುಚಿತ್ರ ರಚನೆಗೆ ತಂಡ ಐದು ದಿನಗಳವರೆಗೆ ದುಡಿದಿದೆ. ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ಸಿಬಂದಿಯನ್ನು ಒಳಗೊಂಡ ತಂಡ ಕಿರುಚಿತ್ರದಲ್ಲಿ ಭಾಗಿಯಾಗಿದೆ.

ತೇಜೇಶ್‌ ಗಟ್ಟಿ ಚಿತ್ರಕಥೆ ಬರೆದಿದ್ದು, ಚಿತ್ರದಲ್ಲಿ ಸರಕಾರಿ ಶಾಲೆಯ ಅಕ್ಷತಾ ಸಾಲ್ಯಾನ್‌, ಪ್ರದ್ವಿನ್‌, ಪದ್ಮನಾಭ, ಧನುಷ್‌, ಪುನೀತ್‌ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ವಾಹಿನಿ ಪತ್ರಕರ್ತ ತೇಜೇಶ್‌ ಗಟ್ಟಿ ಚಿತ್ರಕ್ಕೆ ಕಥೆ ಬರೆದಿದ್ದು, ಕೌಶಿಕ್‌ ಕೆ.ಎಸ್‌. ಸಂಭಾಷಣೆಯ ಜತೆಗೆ ನಿರ್ದೇಶನವನ್ನು ಮಾಡಿದ್ದಾರೆ.

ಚಂದ್ರು ಭಾನಾಪುರ್‌ ನಿರ್ದೇಶನದಲ್ಲಿ ಸಹಾಯ ಮಾಡಿದ್ದಾರೆ. ನಿಖೀಲ್‌ ರಾವ್‌ ಕುಂಪಲ ಛಾಯಾಗ್ರಹಣದಲ್ಲಿ ಸಂಪೂರ್ಣ ಚಿತ್ರ ಮೂಡಿಬಂದಿದೆ. ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಅಬೂಬಕ್ಕರ್‌ ಸಿದ್ದೀಕ್‌ ಹೊತ್ತಿದ್ದು, ನಿತೀಶ್‌ ಪಿ. ಬೈಂದೂರ್‌ ಸ್ಥಿರ ಛಾಯಗ್ರಾಹಕರಾಗಿ ಚಿತ್ರದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆಯೂ ಕಿರುಚಿತ್ರ ನಿರ್ಮಿಸಿ ಯೂಟ್ಯೂಬ್‌ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಈ ತಂಡದ ನೂತನ ಕಿರುಚಿತ್ರ ‘ಬಣ್ಣ’ ಮೇ 24ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

1-sfdsf

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

ತಲಪಾಡಿ : ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ, ಆರೋಪಿ ಪರಾರಿ

ತಲಪಾಡಿ :ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ, ಆರೋಪಿಗಾಗಿ ಶೋಧಕಾರ್ಯ

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದರೆ ಬಿಗಿ ಕ್ರಮ ಖಚಿತ: ಆರ್.ಅಶೋಕ್

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದರೆ ಬಿಗಿ ಕ್ರಮ ಖಚಿತ: ಆರ್.ಅಶೋಕ್

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

1-sfdsf

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.