ಬಂಟ್ವಾಳ ಪ್ರಕರಣ: ತನಿಖೆಗೆ ನಾಲ್ಕು ವಿಶೇಷ ತಂಡ; ಆಲೋಕ್‌ ಮೋಹನ್‌


Team Udayavani, Jun 23, 2017, 4:36 PM IST

2206mlr48-adgp.jpg

ಮಂಗಳೂರು: ಕಳೆದ ಎಪ್ರಿಲ್‌ 20ರಂದು ವಿಟ್ಲ ಬಳಿಯ ಕರೋಪಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಜಲೀಲ್‌ ಕೊಲೆ ಕೃತ್ಯ, ಆ ಬಳಿಕ ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಗಳು ಹಾಗೂ ಬುಧವಾರ ಬೆಂಜನಪದವಿನಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಅಶ್ರಫ್‌ ಕಳಾಯಿ ಅವರ ಕೊಲೆ ಪ್ರಕರಣದ ವರೆಗಿನ ಎಲ್ಲ ಘಟನೆಗಳ ತನಿಖೆಗೆ ಸಂಬಂಧಿಸಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಎಡಿಜಿಪಿ ಆಲೋಕ್‌ ಮೋಹನ್‌ ತಿಳಿಸಿದರು. 

ಬಂಟ್ವಾಳ ತಾಲೂಕಿನ ಕಲ್ಲಡ್ಕ ಮತ್ತು ಇತರ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅವರು ಮಂಗಳೂರಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಎಲ್ಲ ಪ್ರಕರಣಗಳನ್ನು ಪ್ರತ್ಯೇಕ ಪ್ರತ್ಯೇಕವಾಗಿ ವಿಶೇಷ ತಂಡಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದವರು ವಿವರಿಸಿದರು.

ಸಮಗ್ರ ತನಿಖೆ
ಘಟನಾವಳಿಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲಾಗುವುದು. ದುಷ್ಕೃತ್ಯ ಎಸಗುವವರು, ಸಂಚು ರೂಪಿಸಿದವರು, ಪ್ರೋತ್ಸಾಹ ಮತ್ತು ಬೆಂಬಲ ನೀಡುವವರ ಸಹಿತ ಎಲ್ಲರನ್ನೂ ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಮುನ್ನೆಚ್ಚರಿಕೆಯ ಕ್ರಮವಾಗಿ ರೌಡಿಗಳ ಮತ್ತು ಶಂಕಿತರ ಮೇಲೆ ನಿಗಾ ಇರಿಸಲಾಗುವುದು. ಅಹಿತಕರ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಜರಗಿಸಲಾಗುವುದು. ಆರೋಪಿಗಳ ಶೀಘ್ರ ಪತ್ತೆಗೆ ರಾತ್ರಿ ಹಗಲು ಕಣ್ಗಾವಲು ಇರಿಸಲಾಗಿದೆ ಎಂದರು.

ಹೆಚ್ಚುವರಿ ಪೊಲೀಸ್‌
ಬಂದೋಬಸ್ತು ಕರ್ತವ್ಯಕ್ಕಾಗಿ ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗಿದೆ. ದಕ್ಷಿಣ ಕನ್ನಡ ಪೊಲೀಸ್‌ ವ್ಯಾಪ್ತಿಯಲ್ಲಿ 12 ಹಾಗೂ ಮಂಗಳೂರು ಕಮಿಷನರೆಟ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಅನುಕೂಲವಾಗುವಂತೆ ಪೊಲೀಸ್‌ ವ್ಯವಸ್ಥೆಯನ್ನು ಚುರುಕು ಗೊಳಿಸಲಾಗುವುದು. ಕಾನೂನು ಸುವ್ಯವಸ್ಥೆ ಹದಗೆಡಿಸಲು ಅವಕಾಶ ಕೊಡುವುದಿಲ್ಲ ಎಂದರು.

ಕಲ್ಲಡ್ಕ ಘಟನೆಯಲ್ಲಿ ಗಾಯ ಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರತ್ನಾಕರ್‌ ಅವರು ರಾತ್ರಿ ವೇಳೆ ಅಲ್ಲಿಂದ ಪೊಲೀಸರ ಅರಿವಿಗೆ ಬಾರದಂತೆ ಮಂಗಳೂರಿಗೆ ತೆರಳಿ ಚಿಕಿತ್ಸೆ ಪಡೆದಿರುವ ವಿಷಯದಲ್ಲಿ ಕಾವಲು ಪೊಲೀಸರ ಕರ್ತವ್ಯ ಲೋಪದ ಬಗ್ಗೆ ಐಜಿಪಿ ಹರಿಶೇಖರನ್‌ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವರದಿ ಇನ್ನೂ ಬಂದಿಲ್ಲ. ವರದಿ ಬಂದ ಬಳಿಕ ಕರ್ತವ್ಯ ಲೋಪ ಆಗಿದ್ದರೆ ಸಂಬಂಧ ಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ವಿವರಿಸಿದರು.

ಎಸ್‌ಪಿ ವರ್ಗಾವಣೆ, ಅಡಿಶನಲ್‌ ಎಸ್‌ಪಿಗೆ ರಜೆ ಸರಕಾರದ ನಿರ್ಧಾರ ಜಿಲ್ಲಾ ಪೊಲೀಸ್‌ ಅಧೀಕ್ಷಕ ಭೂಷಣ್‌ ಜಿ. ಬೊರಸೆ ಅವರ ವರ್ಗಾವಣೆ ಹಾಗೂ ಅಡಿಶನಲ್‌ ಎಸ್‌ಪಿ ವೇದಮೂರ್ತಿ ಅವರನ್ನು ರಜೆಯಲ್ಲಿ ತೆರಳುವಂತೆ ಕಳುಹಿಸಿರುವುದು ಸರಕಾರದ ನಿರ್ಧಾರ. ವರ್ಗಾವಣೆ ಮಾಡಲಾದ ಎಸ್‌ಪಿ ಅವರ ಸ್ಥಾನಕ್ಕೆ ಹೊಸ ಎಸ್‌ಪಿ ಬಂದು ಅಧಿಕಾರ ಸ್ವೀಕರಿಸಿದ್ದಾರೆ ಎಂದು ಎಡಿಜಿಪಿ ತಿಳಿಸಿದರು. ಯಾವುದೇ ಪೊಲೀಸ್‌ ಅಧಿಕಾರಿ ತಪು ಎಸಗಿದರೆ ಕ್ರಮ ಜರಗಿಸಲಾಗುವುದು ಎಂದು ಆಲೋಕ್‌ ಮೋಹನ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಉಪಸ್ಥಿತರಿದ್ದರು.

ಅಶ್ರಫ್‌ ರೌಡಿ ಶೀಟರ್‌ ಅಲ್ಲ
ಬುಧವಾರ ಬೆಂಜನಪದವಿನಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಶ್ರಫ್‌ ಕಳಾಯಿ ರೌಡಿ ಶೀಟರ್‌ ಆಗಿರಲಿಲ್ಲ. ಅವರ ಮೇಲೆ ಹಳೆಯ ಒಂದು ಕೇಸು ಮಾತ್ರ ಇದೆ ಎಂಬ ಮಾಹಿತಿ ಇದೆ. ಆ ಪ್ರಕರಣ ಯಾವುದೆಂದು ಪರಿಶೀಲಿಸಿ ತಿಳಿಸಲಾಗುವುದು ಎಂದು ಎಡಿಜಿಪಿ ವಿವರಿಸಿದರು.

ಅಶ್ರಫ್‌ ಕಳಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತು ಮಂಗಳೂರು ನಗರ ಪೊಲೀಸರ ಪ್ರತ್ಯೇಕ ತಂಡಗಳು ಪ್ರತ್ಯೇಕ ಪ್ರತ್ಯೇಕವಾಗಿ ತನಿಖೆ ನಡಸುತ್ತಿವೆ ಎಂದು ತಿಳಿಸಿದರು.

ಕಮಿಷನರೆಟ್‌ ವ್ಯಾಪ್ತಿಯಲ್ಲೂ ನಿಷೇಧಾಜ್ಞೆ
ಸಿಆರ್‌ಪಿಸಿ ಸೆಕ್ಷನ್‌ 144 ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಗುರುವಾರ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೂ ಅನ್ವಯಿಸಲಾಗಿದೆ. ಅದರನ್ವಯ 5ಕ್ಕಿಂತ ಹೆಚ್ಚು ಮಂದಿ ಅಕ್ರಮ ಕೂಟ ಸೇರುವುದನ್ನು ನಿರ್ಬಂಧಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯಿತಿ ಇದೆ ಎಂದು ಎಡಿಜಿಪಿ ತಿಳಿಸಿದರು.
 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.