ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ
Team Udayavani, Dec 5, 2022, 8:23 PM IST
ಬಂಟ್ವಾಳ: ರಾ.ಹೆ.75ರ ತುಂಬೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಆಟೋವೊಂದಕ್ಕೆ ಸೋಮವಾರ ಬೆಳಗ್ಗೆ ಯಾವುದೋ ವಾಹನವೊಂದು ಢಿಕ್ಕಿಯಾಗಿ ಪರಾರಿಯಾಗಿದ್ದು, ಘಟನೆಯಲ್ಲಿ ಆಟೋ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಘಟನೆಯಲ್ಲಿ ಆಟೋ ಚಾಲಕ ಮೂಡನಡುಗೋಡು ಗ್ರಾಮದ ದಡ್ಡಲಕಾಡು ನಿವಾಸಿ ಪುರುಷೋತ್ತಮ ಗಂಭೀರ ಗಾಯಗೊಂಡಿದ್ದು, ಆಟೋದಲ್ಲಿದ್ದ ಪ್ರಯಾಣಿಕರೊಬ್ಬರಿಗೂ ಗಾಯವಾಗಿದೆ. ಪುರುಷೋತ್ತಮ ಅವರು ಆಟೋದಲ್ಲಿ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಯಾವುದೋ ವಾಹನ ಢಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ.
ಬಳಿಕ ಢಿಕ್ಕಿ ಹೊಡೆದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ