Bantwal: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದಲೇ ಕಳ್ಳತನ!


Team Udayavani, Oct 24, 2023, 4:36 PM IST

Bantwal: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದಲೇ ಕಳ್ಳತನ!

ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸುಮಾರು 2,75,0000 ರೂ ನಗದು ಹಾಗೂ 4,96,000ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು ಎಂಟು ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ ವಿಶ್ವಾಸ ಹೊಂದಿದ್ದ. ಈ ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಮಾಲಕರಿಗೆ ಮುಳುವಾಗಿ ಪರಿಣಮಿಸಿತು.

ಅ.18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ ಮಂಗಳಾದೇವಿ, ಜಪ್ಪು ನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಆಲಿಯಲ್ಲಿ ನೀಡಿದ್ದರು.‌ ಅ ಬಳಿಕ 19 ರಂದು ಕಟ್ಟಡ ಕಾಮಗಾರಿಯ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.ಮಾಲಕರು ಮರುದಿನ (ಅ. 20) ಅಗತ್ಯ ಕೆಲಸವೊಂದರ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿಂದ ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.

ಕೆಲಸದ ಒತ್ತಡದ ನಡುವೆಯ ಅ. 23 ರಂದು ಊರಿಗೆ ವಾಪಾಸಾದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು. ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.

ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ, ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ‌ ನೋಡಿದಾಗ ಮೊಹಮ್ಮದ್ ಅವರು  ಕಪಾಟಿನಲ್ಲಿರಿಸಲಾಗಿದ್ದ ರೂ. 25 ಲಕ್ಷ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಲಾಗಿದ್ದ ರೂ 25 ಲಕ್ಷ ಹಾಗೂ ರೂ. 496,000 ಲಕ್ಷ ಮೌಲ್ಯದ 24 ಗ್ರಾಂ ತೂಕದ ಬ್ರಾಸ್ ಲೈಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ.ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್  ಹಾಗೂ ಬೆರಳಚ್ಚು  ತಜ್ಞರು,ಶ್ವಾನದಳದವರು ಆಗಮಿಸಿ  ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.