ಪಾಣೆಮಂಗಳೂರು : ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Team Udayavani, May 7, 2022, 10:11 PM IST
ಬಂಟ್ವಾಳ : ಪಾಣೆಮಂಗಳೂರು ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಶನಿವಾರ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯ ವಯಸ್ಸು 60-65 ವರ್ಷ ಎಂದು ಅಂದಾಜಿಸಲಾಗಿದ್ದು, ಬಿಳಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪಂಚೆ ಧರಿಸಿರುತ್ತಾರೆ. ಮೃತರ ಕುರಿತು ಮಾಹಿತಿ ಸಿಕ್ಕರೆ ಬಂಟ್ವಾಳ ನಗರ ಪೊಲೀಸ್ ಠಾಣೆ ಅಥವಾ ದೂ. ಸಂಖ್ಯೆ 08255-232111, 9480805367ಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
ಅಪರಿಚಿತ ವ್ಯಕ್ತಿ ಸಾವು
ಮಂಗಳೂರು : ನಗರದ ಹಂಪನಕಟ್ಟೆಯಲ್ಲಿ ಅಂಗಡಿ ಎದುರು ಸುಮಾರು 69 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮೇ 6ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.
5.7 ಅಡಿ ಎತ್ತರವಿದ್ದು 4 ಇಂಚು ಉದ್ದದ ಬಿಳಿ ಕಪ್ಪು ತಲೆಕೂದಲು, ಬಡಕಲು ಶರೀರ, 2 ಇಂಚು ಉದ್ದದ ಕಪ್ಪು ಬಿಳಿ ಗಡ್ಡ ಹೊಂದಿದ್ದು ಕೇಸರಿ ಬಿಳಿ ಚೌಕುಳಿಯಿರುವ ಉದ್ದ ತೋಳಿನ ಶರ್ಟ್, ಕಪ್ಪು ಪಂಚೆ ಧರಿಸಿದ್ದಾರೆ. ಎಡ ಕೆನ್ನೆಯ ಮೇಲೆ ಕಪ್ಪು ಮಚ್ಚೆ ಇದೆ. ವಾರಸುದಾರರು ಇದ್ದರೆ ಮಂಗಳೂರು ಉತ್ತರ ಪೊಲೀಸ್ ಠಾಣೆ (0824-2220516) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ವಿಟ್ಲ : ಸಾರ್ವಜನಿಕ ಸ್ಥಳದಲ್ಲೇ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಯತ್ನ ; ಮಹಿಳೆ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
RTO ಅಧಿಕಾರಿ ಮನೆ ಮೇಲೆ ದಾಳಿ: ಆದಾಯಕ್ಕಿಂತ 650 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ಪತ್ತೆ!
ಶಾಸಕ ರಾಜುಗೌಡ ವಿರುದ್ದ ಪ್ರತಿಭಟನೆ
ಲಿಂಗಾಯತ ಮತ ಬೇಟೆ ನಾಚಿಗೆಗೇಡಿನ ಸಂಗತಿ: ಕೈ ನಾಯಕರಿಗೆ ಬಿಜೆಪಿ ಟಾಂಗ್
ವಿಜಯಪುರ ಪಾಲಿಕೆ ವಾರ್ಡ್ ಮೀಸಲು ಬದಲಾವಣೆಗೆ 92 ಆಕ್ಷೇಪಣೆ : ಜಿಲ್ಲಾಧಿಕಾರಿ
ವಿಟ್ಲ-ಕಬಕ ರಸ್ತೆ ಸ್ಥಿತಿ ಶೋಚನೀಯ : ರಸ್ತೆ ವಿಸ್ತರಣೆಯೂ ಆಗಲಿಲ್ಲ, ಮರುಡಾಮರು ಕಾಣಲೇ ಇಲ್ಲ