ಅಡಿಕೆ ನಳ್ಳಿ ರಾಶಿ ಹಾಕಿ ರೈತರ ಪ್ರತಿಭಟನೆ 

Team Udayavani, Sep 5, 2018, 11:52 AM IST

5-september-8.jpg

ಬಂಟ್ವಾಳ: ರೈತರನ್ನು ಅವಮಾನ ಮಾಡುವ ಪ್ರವೃತ್ತಿಯನ್ನು ಅಧಿಕಾರಿ ವರ್ಗ ಬಿಡಬೇಕು. ಜನಸಾಮಾನ್ಯನೊಬ್ಬ ಯಾವುದೇ ಅರ್ಜಿ ತಂದು ಕೊಟ್ಟರೂ ತಾ| ಆಡಳಿತ ಅದರಲ್ಲೂ ತಹಶೀಲ್ದಾರ್‌ ಸ್ವೀಕರಿಸಬೇಕು. ಅರ್ಜಿ ತಿರಸ್ಕಾರ ಸಲ್ಲದು. ಅಡಿಕೆ ಸಹಿತ ಇತರ ಕೃಷಿ ಬೆಳೆಗಾರರು ಇಂದು ಕೊಳೆರೋಗ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿದ್ದು, ರಾಜ್ಯ ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಹೇಳಿದರು.

ಅವರು ಸೆ. 4ರಂದು ತಾ| ಕಚೇರಿ ಎದುರು ನೂರಾರು ರೈತರು ಕೊಳೆರೋಗದಿಂದ ಉದುರಿದ ಅಡಿಕೆ ನಳ್ಳಿಯನ್ನು ಸುರಿದು ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಅಡಿಕೆ ಬೆಳೆಗಾರ ರೈತರ ಸಮಸ್ಯೆಯ ಬಗ್ಗೆ ಸರಕಾರವು ಕಣ್ಣು ತೆರೆಯುವಂತೆ ಮಾಡಲು ಈ ಪ್ರತಿಭಟನೆ ಹಮ್ಮಿಕೊಂಡಿದ್ದಾಗಿ ತಿಳಿಸಿದರು. ರೈತರು ಒಟ್ಟಾಗಿ ಸರಕಾರದ ಧೋರಣೆಗಳ ವಿರುದ್ಧ ಪ್ರತಿಭಟನೆ ಮಾಡಬೇಕು. ಆವಶ್ಯಕತೆ ಪೂರೈಸಲು ನಿರಂತರ ಮನವಿ ಸಲ್ಲಿಕೆ ಮಾಡಬೇಕು ಎಂದರು.

ಸರಕಾರ ಅಡಿಕೆ ಬೆಳೆಗಾರರ ಕೃಷಿ ನಷ್ಟದ ಬಗ್ಗೆ ಸಮೀಕ್ಷೆಗಾಗಿ ಅರ್ಜಿ ಆಹ್ವಾನಿಸಿದೆ. ಪರಿಹಾರದ ಬಗ್ಗೆ ಇನ್ನಷ್ಟೆ ನಿರ್ಧಾರ ಆಗಬೇಕು. ರೈತರಿಗೆ ಪ್ರತೀ ಎಕ್ರೆ ಅಡಿಕೆ ಫಸಲು ನಷ್ಟಕ್ಕೆ ಕನಿಷ್ಠ 2 ಲಕ್ಷ ರೂ. ಪರಿಹಾರ ನೀಡಬೇಕು. ಪ್ರಸ್ತುತ ಎರಡೂವರೆ ಎಕ್ರೆಗೆ (ಹೆಕ್ಟೇರ್‌) 18 ಸಾವಿರ ರೂ. ನಷ್ಟ ಪರಿಹಾರ ನೀಡುವ ಪ್ರಸ್ತಾವವು 1 ಎಕ್ರೆಗೆ ಒಂದು ದಿನದಲ್ಲಿ ಮೈಲುತುತ್ತು ಸಿಂಪಡಣೆಗೆ ಒದಗುವ ವೆಚ್ಚದಂತಾಗುವುದು ಎಂದರು. ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಶಾಸ್ತ್ರಿ ಮಾತನಾಡಿ, ಸರಕಾರ ರೈತರ ಸಾಲ ಮನ್ನಾ ಬಗ್ಗೆ ಘೋಷಿಸಿದ್ದರೂ ಶರ್ತ ಒಡ್ಡುವ ಮೂಲಕ ವಂಚನೆ ದಾರಿಗೆ ಇಳಿದಿದೆ. 

ಸಿಎಂ ಬಳಿಗೆ ನಿಯೋಗ
ರೈತರ ನಿಯೋಗವನ್ನು ರಾಜ್ಯ ಮುಖ್ಯ ಮಂತ್ರಿಗಳ ಬಳಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ರೈತರಿಗೆ ನಷ್ಟದ ಮೊತ್ತವು ಮೌಲ್ಯಯುತವಾಗಿ ಸಿಗುವಂತೆ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಪ್ರಾಕೃತಿಕ ವಿಕೋಪದಲ್ಲಿ ನಷ್ಟದ ಪರಿಹಾರ ನೀಡಲು ಸೂಚನೆ ನೀಡಲಾಗಿತ್ತು. ತಹಶೀಲ್ದಾರ್‌ ಅರ್ಜಿ ಸ್ವೀಕರಿಸಲೇಬೇಕು.
– ರಾಜೇಶ್‌ ನಾೖಕ್‌
    ಶಾಸಕರು

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.