ಇವರು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ !

Team Udayavani, Aug 15, 2019, 10:03 PM IST

Shashtry-726

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳೆಂದರೆ ಧಿಮಾಕಿನಿಂದ ಮಾತನಾಡುವವರು, ತಮ್ಮ ಸ್ವಂತ ಕೆಲಸವನ್ನೂ ಇನ್ನೊಬ್ಬರಿಂದ ಮಾಡಿಸುವವರು ಎಂಬೆಲ್ಲಾ ಅಪವಾದಗಳಿವೆ. ಆದರೆ ಹಲವಾರು ಜನ ಸರಕಾರಿ ಅಧಿಕಾರಿಗಳು ಇದಕ್ಕೆ ಅಪವಾದ ಎಂಬಂತೆ ಇರುತ್ತಾರೆ. ಅಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ.

ಇತ್ತೀಚೆಗೆ ತಾಲೂಕನ್ನು ಕಾಡಿದ ಭಾರೀ ಪ್ರವಾಹದ ಕಾರಣದಿಂದ ಪಶ್ಚಿಮಘಟ್ಟದ ಮಡಿಲಲ್ಲೇ ಇರುವ ಬಂಜಾರು ಮಲೆ ಎಂಬ ಪ್ರದೇಶದ ಸಂಪರ್ಕ ಹೊರಜಗತ್ತಿನೊಂದಿಗೆ ಸಂಪೂರ್ಣ ಕಡಿತಗೊಂಡಿದೆ. ಆ ಭಾಗದಲ್ಲಿ ಹಲವಾರು ಕುಟುಂಬಗಳಿದ್ದು ಇಲ್ಲಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದಿರುವ ಕಾರಣ ಕಳೆದ ಕೆಲವು ದಿನಗಳಿಂದ ಈ ಭಾಗಕ್ಕೆ ಸಂಪರ್ಕ ಅಸಾಧ್ಯವಾಗಿತ್ತು. ಆದರೆ ಇದೀಗ ಮುರಿದ ಸೇತುವೆಯ ಸ್ಥಳದಲ್ಲಿ ತಾತ್ಕಾಲಿಕ ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದ್ದು ಇದರ ಮೂಲಕ ಆ ಭಾಗಕ್ಕೆ ಅಗತ್ಯವಿರುವ ಸಾಮಾಗ್ರಿಗಳನ್ನು ಪೂರೈಲಾಗುತ್ತಿದೆ.

ಅದೇ ರೀತಿಯಲ್ಲಿ ಗುರುವಾರದಂದು ಆಹಾರ ಸಾಮಾಗ್ರಿಗಳನ್ನು ಪೂರೈಕೆ ಮಾಡಲಾಯಿತು. ವಿಶೇಷವೆಂದರೆ ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರು ಆಹಾರ ಸಾಮಾಗ್ರಿಗಳನ್ನು ಸ್ವತಃ ತಮ್ಮ ತಲೆಯಲ್ಲಿ ಹೊತ್ತು ಸಾಗಿರುವುದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸೇತುವೆ ಭಾಗದವರೆಗೆ ಸಾಮಾಗ್ರಿಗಳನ್ನು ಟೆಂಪೋ ಮೂಲಕ ಸಾಗಿಸಲಾಯಿತಾದರೂರೂ, ಅಲ್ಲಿಂದ ಮುಂದೆ ಟೆಂಪೋ ಸಾಗದಿರುವ ಕಾರಣ ತಾತ್ಕಾಲಿಕ ಕಾಲು ಸಂಕದ ಮೂಲಕ ಈ ಎಲ್ಲಾ ಸಾಮಾಗ್ರಿಗಳನ್ನು ತಲೆಯಲ್ಲಿ ಹೊತ್ತೊಯ್ಯುವುದು ಅನಿವಾರ್ಯವಾಗಿತ್ತು. ಹೀಗಾಗಿ ಸ್ಥಳೀಯರ ಜತೆ ತಹಶೀಲ್ದಾರ್ ಕೂಡ ಆಹಾರ ಸಾಮಾಗ್ರಿಗಳನ್ನು ಸಾಗಿಸುವುದಕ್ಕೆ ನೆರವಾಗಿದ್ದಾರೆ.

ಜತೆಗೆ ತಹಶೀಲ್ದಾರ್‌ ಅವರಿಗೆ ಅವರ ವಾಹನ ಚಾಲಕ ಸಂತೋಷ್ ಕೂಡ ಸಾಥ್ ನೀಡಿ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.