ಕೃಷಿ ವಿಜ್ಞಾನದಲ್ಲಿ ಸಾಧನೆಗೈದ ಭಾಗ್ಯಶ್ರೀ

5 ಚಿನ್ನದ ಪದಕ ಪಡೆದ ಗ್ರಾಮೀಣ ಪ್ರದೇಶದ ಪ್ರತಿಭೆ

Team Udayavani, Apr 13, 2019, 6:00 AM IST

i-12

ಸುಳ್ಯಪದವು: ಸಾಧನೆಗೆ ಅಸಾಧ್ಯವಾಗುವುದು ಯಾವುದೂ ಇಲ್ಲ. ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಒಂದು ಉದಾಹರಣೆ ಕನ್ನಡ ಮಾಧ್ಯಮದಲ್ಲಿ ಕಲಿತು ಚಿನ್ನದ ಪದಕ ಗಳಿಸಿದ ಗ್ರಾಮೀಣ ಪ್ರದೇಶದ ಪ್ರತಿಭೆ ಭಾಗ್ಯಶ್ರೀ ಕೆ.ಎಚ್‌.

ಕನ್ನಡ ಮಾಧ್ಯಮದಲ್ಲಿ ಎಸೆಸೆಲ್ಸಿ ಶಿಕ್ಷಣ ಪಡೆದ ಈ ವಿದ್ಯಾರ್ಥಿನಿಯ ಸಾಧನೆ ಶಿಕ್ಷಣಕ್ಕೆ ಮಾಧ್ಯಮ ಮುಖ್ಯವಲ್ಲ ಎಂದು ಸಾಧಿಸಿ ತೋರಿಸಿದ್ದಾಳೆ ಈ ಚಿನ್ನದ ಹುಡುಗಿ. ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸುಳ್ಯಪದವು ಶಬರಿನಗರದ ಕೇಶವ ಗೌಡ ಮತ್ತು ರತ್ನಾ ಕೆ. ಅವರ ಪುತ್ರಿ. ಬಾಲ್ಯದಿಂದಲೇ ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಪ್ರಾಥಮಿಕ ಶಿಕ್ಷಣವನ್ನು ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿ.ಪ್ರಾ. ಶಾಲೆಯಲ್ಲಿ ಪೂರೈಸಿದ್ದರು.

ಟ್ಯೂಷನ್‌ ಪಡೆದಿಲ್ಲ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಯನ್ನು ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾದರು. ಸರ್ವೋದಯ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದು ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 96.43 ಅಂಕ ಪಡೆದು ತಾಲೂಕಿಗೆ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ಪಿಯುಸಿ ಶಿಕ್ಷಣವನ್ನು ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ವಿಜ್ಞಾನ ವಿಷಯದಲ್ಲಿ ಶಿಕ್ಷಣ ಪಡೆದು ಶೇ. 96.33 ಅಂಕ ಪಡೆದುಕೊಂಡರು. ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ದಿನಾಲೂ ಬಂದು ಹೋಗಿ ಯಾವುದೇ ಟ್ಯೂಶನ್‌ ಪಡೆಯದೇ ಅತೀ ಹೆಚ್ಚು ಅಂಕ ಪಡೆದಿರುವುದು ಆವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ.

ಬ್ಯಾಂಕ್‌ನಲ್ಲಿ ಉದ್ಯೋಗ
ಸಿಇಟಿ ಪರೀಕ್ಷೆಯಲ್ಲಿ ಹಾಸನದ ಕೃಷಿ ವಿದ್ಯಾಲಯಲ್ಲಿ ಸೀಟು ಪಡೆದು 4 ವರ್ಷದ ಸೆಮಿಸ್ಟರ್‌ನಲ್ಲಿ ಉತ್ತಮ ಅಂಕ ಪಡೆದುಕೊಂಡರು. ಮಾ. 25ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಐದು ಚಿನ್ನದ ಪದಕವನ್ನು ಪಡೆದುಕೊಂಡು ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡರು. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಂತೆ ಬ್ಯಾಂಕ್‌ ಆಫ್ ಬರೋಡಾದಲ್ಲಿ ಉದ್ಯೋಗ ಪಡೆದುಕೊಂಡರು. ಅತೀ ಚಿಕ್ಕ ಪ್ರಾಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಒಬ್ಬರು ಇಂತಂಹ ಸಾಧನೆ ಮಾಡಿದ್ದು ವಿಶಿಷ್ಟವೆನಿಸಿದೆ.

ಒತ್ತಡವಿಲ್ಲದ ಶಿಕ್ಷಣ
ಭಾಗ್ಯಶ್ರೀ ಪ್ರತಿಭೆಯನ್ನು ಎಳವೆಯಲ್ಲೇ ಗುರುತಿಸಿದ್ದೆವು. ಎಲ್ಲರಂತೆ ಶಿಕ್ಷಣವನ್ನು ಪಡೆದಿದ್ದಳು. ಯಾವುದೇ ಒತ್ತಡ ಹಾಕಲಿಲ್ಲ. ಪ್ರೋತ್ಸಾಹ, ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಸಿಕ್ಕಿ, ಸಾಧನೆ ಮಾಡಿದ್ದು ಸಂತೋಷವಾಗಿದೆ.
ಕೇಶವ ಗೌಡ, ರತ್ನಾ ಕೆ. ಭಾಗ್ಯಶ್ರೀ ತಂದೆ, ತಾಯಿ

ರೈತರ ಸೇವೆಗೆ ಸಿದ್ಧ
ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವಾಗ ಮನೆ ಕಷ್ಟವನ್ನು ನೆನೆಸಿ ಏನಾದರೂ ಸಾಧನೆ ಮಾಡುವ ಛಲ ಇಟ್ಟುಕೊಂಡು ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡಿರುವುದರಿಂದ ಒಂದು ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಮುಂದುವರಿಸಿದೆ. ಮನೆಯಲ್ಲಿ ಒಳ್ಳೆಯ ಬೆಂಬಲ, ಶಿಕ್ಷಕ ಮತ್ತು ಉಪನ್ಯಾಸಕರ ಪ್ರೋತ್ಸಾಹದಿಂದ ಗುರಿಯನ್ನು ತಲುಪಿದ್ದೇನೆ. ಕೃಷಿಯಲ್ಲಿ ಹೆಚ್ಚು ಅಸಕ್ತಿ ವಹಿಸಿ ರೈತರ ಸೇವೆಯನ್ನು ಮಾಡಲು ಸಿದ್ಧನಾಗಿದ್ದೇನೆ.
ಭಾಗ್ಯಶ್ರೀ ಕೆ.ಎಚ್‌. ಚಿನ್ನದ ಪದಕ ವಿಜೇತೆ

ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.