ಜ.8, 9: ಭಾರತ ಬಂದ್‌ ಕರಾವಳಿಯಲ್ಲೂ  ಪರಿಣಾಮ ಸಾಧ್ಯತೆ

Team Udayavani, Jan 7, 2019, 5:27 AM IST

bund.jpg

ಮಂಗಳೂರು/ಉಡುಪಿ: ಹೊಸ ವರ್ಷದ ಆರಂಭದಲ್ಲಿಯೇ ಜನತೆಗೆ ಬಂದ್‌ ಬಿಸಿ ಮುಟ್ಟಲಿದೆ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಕರೆ ನೀಡಿರುವ ಭಾರತ ಬಂದ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಪರಿಣಾಮ ಬೀರುವ ಸಾಧ್ಯತೆ ಇದೆ.

ದ.ಕ. ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಬಹುತೇಕ ವಿರಳವಾಗಿರುವ ಸಾಧ್ಯತೆಯಿದೆ. ಅಸಂಘಟಿತ ಸಾರಿಗೆ ಕಾರ್ಮಿಕ ಸಂಘಟನೆ ಈಗಾಗಲೇ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಸಿಟಿ ಬಸ್‌ಗಳು ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್‌ ಮಾಲಕರು ಸೋಮವಾರ ಸಭೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ. 

ದ.ಕ. ಬೀದಿಬದಿ ವ್ಯಾಪಾರಸ್ಥರ ಸಂಘವು ಬಂದ್‌ಗೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯ ಸಮರ್ಪಕ ಜಾರಿ ಮಾಡಬೇಕು. ಮೋದಿ ಸರಕಾರದ ಅವಧಿಯಲ್ಲಿ ಬೀದಿಬದಿ ವ್ಯಾಪಾರಿ ಗಳಿಗೆ ಯಾವುದೇ ಯೋಜನೆಗಳನ್ನು ರೂಪಿಸದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್‌ ಪೂಜಾರಿ ತಿಳಿಸಿದ್ದಾರೆ. ಸಾರ್ವತ್ರಿಕ ಮುಷ್ಕರವನ್ನು ಪಿಂಚಣಿ ದಾರರ ಸಂಘ ಬೆಂಬಲಿಸುತ್ತದೆ ಹಾಗೂ ಪಿಂಚಣಿದಾರರಿಗೆ ಮಾಸಿಕ ಪಿಂಚಣಿ 6,000 ರೂ. ಹಾಗೂ ಇದಕ್ಕೆ ತುಟ್ಟಿಭತ್ತೆಯನ್ನು ಸೇರಿಸಬೇಕೆಂದು ಒತ್ತಾಯಿಸುತ್ತದೆ ಎಂದು ಉಡುಪಿ ಪಿಂಚಣಿದಾರರ ಸಂಘ ತಿಳಿಸಿದೆ.

ಬಹುತೇಕ ಸಂದರ್ಭ ಬಂದ್‌ಗೆ ಕರೆ ನೀಡದೆ ಇರುವ ಸಂಘಟನೆಗಳೂ ಆ ದಿನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಣಯ ತಾಳುವುದಿರುತ್ತದೆ. ಹೀಗಾದರೆ ಉಡುಪಿ ಜಿಲ್ಲೆಯಲ್ಲಿಯೂ ಟ್ಯಾಕ್ಸಿ, ರಿಕ್ಷಾ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬ್ಯಾಂಕ್‌ ನೌಕರರ ಸಂಘಟನೆಗಳೂ ಬಂದ್‌ಗೆ ಬೆಂಬಲ ನೀಡಿರುವ ಕಾರಣ ಬ್ಯಾಂಕ್‌ ವ್ಯವಹಾರಗಳೂ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.  

ಜಿಲ್ಲಾ ರಿಕ್ಷಾ ಚಾಲಕರ ಸಂಘ, ಸಿಪಿಐ (ಎಂ), ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್ವಾದಿ), ಸಿಪಿಐ ಬೆಂಬಲ ಸೂಚಿಸಿವೆ. ಮೋಟಾರ್‌ ಟ್ರಾನ್ಸ್‌ಪೊರ್ಟ್‌ ಆ್ಯಂಡ್‌ ಎಂಜಿನಿಯರಿಂಗ್‌ ವರ್ಕರ್ಸ್‌ ಯೂನಿಯನ್‌ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘದ (ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘದ, ಅಖೀಲ ಭಾರತ ಬೀಡಿ ಫೆಡರೇಶನ್‌ (ಸಿಐಟಿಯು) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. 

ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಆ ದಿನದ ಪರಿಸ್ಥಿತಿಯನ್ನು ಅವಲೋಕಿಸಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬಸ್‌ ಸಂಚಾರ ಕಾರ್ಯಾಚರಿಸಲಾಗುವುದು.
 ದೀಪಕ್‌ ಕುಮಾರ್‌, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಾಧಿಕಾರಿ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.