ಮಂಗಳೂರು: ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಲು ನಿರ್ಧರಿಸಿದ ಕುಟುಂಬ
Team Udayavani, May 31, 2022, 10:16 AM IST
ಮಂಗಳೂರು: ಇಲ್ಲಿನ ಬಿಕರ್ನಕಟ್ಟೆ ರಾ.ಹೆ 73 ನೇ ಡಾಮಾರು ರಸ್ತೆಯಲ್ಲಿ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ (25) ಸೋಮವಾರ ರಾತ್ರಿ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದು, ಮೃತರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಶನಿವಾರ ತಡರಾತ್ರಿ ಗಣೇಶ್ ತನ್ನ ಸ್ನೇಹಿತ ಧೀರಜ್ ನನ್ನು ಮನೆಗೆ ಬಿಟ್ಟು ಬರುವುದಾಗಿ ಬೈಕ್ ನಲ್ಲಿ ತೆರಳಿದ್ದ ವೇಳೆ, ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದು ಸವಾರರು ಗಂಭೀರ ಗಾಯಗೊಂಡಿದ್ದರು.
ಇದನ್ನೂ ಓದಿ:ಆವಂತಿಪೋರಾ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆ
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದಾರೆ. ಇವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗಣೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ