ಬಂಟ್ವಾಳ: ಬೈಕ್-ಟಿಪ್ಪರ್ ಢಿಕ್ಕಿ | ಇಬ್ಬರಿಗೆ ಗಂಭೀರ ಗಾಯ
Team Udayavani, Sep 2, 2021, 6:13 PM IST
ಬಂಟ್ವಾಳ: ಟಿಪ್ಪರ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡು ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿಯಲ್ಲಿ ಇಂದು (ಸೆ.2) ಮಧ್ಯಾಹ್ನ ನಡೆದಿದೆ.
ಗಂಭೀರ ಗಾಯಗೊಂಡ ಸವಾರರನ್ನು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳಾಗಿದ್ದು, ಹೆಸರು ತಿಳಿದುಬಂದಿಲ್ಲ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರರಿಬ್ಬರು ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳಿದ್ದ ಸಂದರ್ಭದಲ್ಲಿ ತಲಪಾಡಿ ಎಂಬಲ್ಲಿ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ