Mangaluru ಸಿದ್ಧಾಂತದಲ್ಲಿ ಬಿಜೆಪಿ ಎಂದೂ ರಾಜಿ ಮಾಡಿಲ್ಲ : ನಳಿನ್‌ ಕುಮಾರ್‌

ಮಂಗಳೂರು,ಶಿವಮೊಗ್ಗ ವಿಭಾಗದ ನಗರಸಭಾ ಸದಸ್ಯರ ಪ್ರಶಿಕ್ಷಣ ವರ್ಗ

Team Udayavani, Nov 21, 2023, 11:33 PM IST

bjpMangaluru ಸಿದ್ಧಾಂತದಲ್ಲಿ ಬಿಜೆಪಿ ಎಂದೂ ರಾಜಿ ಮಾಡಿಲ್ಲ : ನಳಿನ್‌ ಕುಮಾರ್‌

ಮಂಗಳೂರು: ಜನಸಂಘದಿಂದ ಆರಂಭಗೊಂಡು ಇಂದಿನ ಬಿಜೆಪಿಯ ಸುವರ್ಣಯುಗದ ವರೆಗೆ ಪಕ್ಷ ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಪಕ್ಷದ ಸಿದ್ಧಾಂತ ಮತ್ತು ಕಾರ್ಯಪದ್ಧತಿಯಲ್ಲಿ ಎಂದೂ ರಾಜಿ ಮಾಡಿಲ್ಲ. ಆಡಳಿತದಲ್ಲಿ ಪರಿವರ್ತನೆ ಬಿಜೆಪಿಯ ಲಕ್ಷಣವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಮಂಗಳವಾರ ನಗರದ ಸಂಘನಿಕೇತನದಲ್ಲಿ ಮಂಗಳೂರು ಮತ್ತು ಶಿವಮೊಗ್ಗ ವಿಭಾಗದ ನಗರಸಭಾ ಸದಸ್ಯರ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎನ್ನುವ ಪರಿಕಲ್ಪನೆಯಡಿ ಪಕ್ಷದ ಕಾರ್ಯಪದ್ಧತಿಯಲ್ಲಿ ಒಂದಾಗಿರುವ ಪ್ರಶಿಕ್ಷಣ ವರ್ಗವನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಕಾರ್ಯಕರ್ತನನ್ನು ಬೆಳೆಸಿ ನಾಯಕನನ್ನಾಗಿ ಮಾಡುವುದು, ಆತನ ಮೂಲಕ ರಾಷ್ಟ್ರ ನಿರ್ಮಾಣ ಮಾಡುವುದು ಬಿಜೆಪಿಯ ವೈಶಿಷ್ಟ್ಯ. ಆತನಿಗೆ ಗೊತ್ತಿಲ್ಲದ ವಿಚಾರಗಳನ್ನು ಹೇಳುವುದರ ಜತೆಗೆ ಪಕ್ಷದ ವಿಚಾರಧಾರೆಯನ್ನು ತಿಳಿಸಿ ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯವನ್ನು ಪ್ರಶಿಕ್ಷಣದ ವರ್ಗದ ಮೂಲಕ ಮಾಡಲಾಗುತ್ತದೆ ಎಂದು ಹೇಳಿದರು.

ದೇಶ ಪರಿವರ್ತನೆ
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಜನಪ್ರತಿನಿಧಿಗಳನ್ನು ಟೀಕಿಸುವ ಹಕ್ಕು ಮತದಾರನಿಗೆ ಇದ್ದೇ ಇದೆ. ವಾಜಪೇಯಿ ಅವರ ಕಾಲದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ಏರಿತ್ತು. ಕಳೆದ 9 ವರ್ಷಗಳಲ್ಲಿ ಜಗತ್ತು ಭಾರತದ ಕಡೆಗೆ ನೋಡುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ. ಸಾಮಾನ್ಯದಿಂದ ಅಸಾಮಾನ್ಯದ ವರೆಗೆ ದೇಶ ಪರಿವರ್ತನೆಯಾಗಿದೆ ಎಂದರು.

ಸೂಕ್ತ ಮಾರ್ಗದರ್ಶನ
ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಶ್ರೀಕಾಂತ್‌ ಕುಲಕರ್ಣಿ ಮಾತನಾಡಿ, ಪಕ್ಷದ ಆತ್ಮವೇ ಸಂಘಟನೆ. ಸಂಘಟನೆಯಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಸರಿಯಾದ ಸಂಸ್ಕಾರ ಕೊಟ್ಟು ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸುವುದು ಪ್ರಶಿಕ್ಷಣ ವರ್ಗದ ಉದ್ದೇಶ. ಚುನಾವಣೆಯಲ್ಲಿ ಗೆಲುವು ಸೋಲು ಸಾಮಾನ್ಯ. ಇದರ ಹೊರತಾಗಿಯೂ ಸಂಘಟನೆಯನ್ನು ಗಟ್ಟಿ ಮಾಡುವುದು ಪಕ್ಷದ ವಿಶೇಷತೆಯಾಗಿದ್ದು, ಪ್ರಶಿಕ್ಷಣ ವರ್ಗದ ಮೂಲಕ ಆಗಿಂದಾಗ್ಗೆ ಈ ಪ್ರಕ್ರಿಯೆ ನಡೆಯುತ್ತದೆ ಎಂದರು.

ಕನಸು ನನಸು
ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡಿ, ಬಿಜೆಪಿ ರಾಷ್ಟ್ರದ ಪುನರ್‌ ನಿರ್ಮಾಣ ಸಂಕಲ್ಪದಿಂದ ಕೆಲಸ ಮಾಡುವ ಪಕ್ಷವಾಗಿದ್ದು, ವ್ಯಕ್ತಿಯ ಪರಿವರ್ತನೆಯಿಂದ ಸಮಾಜದ ಪರಿವರ್ತನೆ, ಅದರಿಂದ ರಾಷ್ಟ್ರ ಪರಿವರ್ತನೆ ಎಂದು ನಂಬಿ, ಕಾರ್ಯಕರ್ತರನ್ನು ವ್ಯವಸ್ಥಿತವಾಗಿ ನಿರ್ಮಾಣ ಮಾಡುವ ವ್ಯವಸ್ಥೆಯೇ ಪ್ರಶಿಕ್ಷಣ. ಇಂದು ರಾಷ್ಟ್ರೀಯ ವಿಚಾರಧಾರೆಯನ್ನು ಬಿಟ್ಟ ಪಕ್ಷಗಳು ನೆಲಕಚ್ಚಿವೆ. ಜನಸಂಘದ ಕಾಲದ ಸಂಕಲ್ಪ, ಕನಸುಗಳು ಇಂದು ಸುವರ್ಣಯುಗದಲ್ಲಿ ನನಸಾಗುತ್ತಿದೆ ಎಂದರು.

ರಾಷ್ಟ್ರೀಯ ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯ ರವೀಂದ್ರ ಸಾಠೆ, ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಹ ಸಂಚಾಲಕಿ ಡಾ| ಮಂಜುಳಾ ರಾವ್‌, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಶಾಸಕರಾದ ಡಿ. ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಡಾ| ವೈ. ಭರತ್‌ ಶೆಟ್ಟಿ ಉಪಸ್ಥಿತರಿದ್ದರು.

ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್‌ರಾಜ್‌ ಕೃಷ್ಣಾಪುರ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ನಿರೂಪಿಸಿ, ಕಾರ್ಯದರ್ಶಿ ಭರತ್‌ ಕುಮಾರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.