ಇಂದು “ವಿಜಯ ಸಂಕಲ್ಪ ಮಹಾ ಬೈಕ್‌ ರ‍್ಯಾಲಿ

Team Udayavani, Mar 2, 2019, 12:30 AM IST

bike.jpg

ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ನಡೆಸುತ್ತಿರುವ ವಿವಿಧ ಪ್ರಚಾರ ಅಭಿಯಾನದ ಕೊನೆಯ ಕಾರ್ಯಕ್ರಮ “ವಿಜಯ ಸಂಕಲ್ಪ ಮಹಾ ಬೈಕ್‌ ರ‍್ಯಾಲಿ ಮಾ.2ರಂದು ದೇಶಾ ದ್ಯಂತ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಮಂಡಲಗಳಲ್ಲಿ (ವಿಧಾನಸಭಾ ಕ್ಷೇತ್ರ) ಈ ರ‍್ಯಾಲಿ ಹಾಗೂ ಸಮಾವೇಶವನ್ನು ನಡೆಸಲಾಗುವುದು ಎಂದು ದ.ಕ. ಲೋಕಸಭಾ ಕ್ಷೇತ್ರ ಬಿಜೆಪಿ ಚುನಾವಣಾ ಉಸ್ತುವಾರಿ ಸಂಚಾಲಕ ಗೋಪಾಲಕೃಷ್ಣ ಹೇರಳೆ ಅವರು ತಿಳಿಸಿದರು.
 
ಶುಕ್ರವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ 8 ಮಂಡಲಗಳ 54 ಮಹಾಶಕ್ತಿ ಕೇಂದ್ರ, 417 ಶಕ್ತಿ ಕೇಂದ್ರ ಹಾಗೂ 1,861 ಬೂತ್‌ಗಳಲ್ಲಿ ಚುನಾವಣೆಗೆ ಭರದ ಸಿದ್ಧತೆಯನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸೂಚಿಸಿದಂತೆ ಈಗಾಗಲೇ ವಿವಿಧ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದರ ಸಮಾರೋಪದ ಅಂಗವಾಗಿ ಯುವ ಮೋರ್ಚಾ ನೇತೃತ್ವದಲ್ಲಿ ಮಹಾ ಬೈಕ್‌ ರ‍್ಯಾಲಿಯನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯೊಳಗೆ ಎಲ್ಲ ಮಂಡಲಗಳಲ್ಲಿ ನಿಗದಿತ ಕೇಂದ್ರಕ್ಕೆ ಬೂತ್‌ಗಳಿಂದ ಕಾರ್ಯಕರ್ತರು ಬೈಕ್‌ಗಳಲ್ಲಿ ಆಗಮಿಸಲಿದ್ದು, ಬಳಿಕ ಸಮಾವೇಶ ನಡೆಯಲಿದೆ. ಇದರಲ್ಲಿ ಸುಮಾರು ಒಂದು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ರ್ಯಾಲಿ ವೇಳೆ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿ ವಾಹನದ ಎಲ್ಲ ದಾಖಲೆಗಳನ್ನು ಹೊಂದಿರುವಂತೆ ಸೂಚಿಸಲಾಗಿದೆ ಎಂದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ. ಮಂಗಳೂರು ಉತ್ತರ ಕ್ಷೇತ್ರದ ರ‍್ಯಾಲಿ ಸುರತ್ಕಲ್‌ನಲ್ಲಿ, ಮೂಡುಬಿದಿರೆಯ ಕಿನ್ನಿಗೋಳಿಯಲ್ಲಿ, ಪುತ್ತೂರಿನ ಕಲ್ಲೇಗ, ಸುಳ್ಯದ ಬಸ್‌ ನಿಲ್ದಾಣ, ಬಂಟ್ವಾಳದ ರಂಗೋಲಿ ಹೊಟೇಲ್‌ ಬಳಿ, ಉಳ್ಳಾಲದ ತೊಕ್ಕೊಟ್ಟಿನಲ್ಲಿ, ಬೆಳ್ತಂಗಡಿಯ ಉಜಿರೆಯಲ್ಲಿ ಮಹಾ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.

ಪ್ರಣಾಳಿಕೆಗೆ ಸಲಹೆ ಆಹ್ವಾನ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಣಾಳಿಕೆ ವಾಹನವನ್ನು ಹೊರಡಿಸಲಾಗಿದೆ. ಈ ವಾಹನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಅದರಲ್ಲಿರುವ ಸಲಹಾ ಪೆಟ್ಟಿಗೆಯಲ್ಲಿ ಈ ಚುನಾವಣೆಯ ವೇಳೆ ಯಾವ ರೀತಿಯ ಆಶ್ವಾಸನೆ ನೀಡಬಹುದು ಎಂಬುದನ್ನು ಸೂಚಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನೀಡಲಾಗುವ ಸಲಹೆಗಳನ್ನು ರಾಜ್ಯಕ್ಕೆ ಕಳುಹಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ರವಿಶಂಕರ ಮಿಜಾರ್‌, ನಿತಿನ್‌ ಕುಮಾರ್‌, ಕಿಶೋರ್‌ ರೈ, ಪ್ರಭಾಮಾಲಿನಿ, ಸಂಜಯ ಪ್ರಭು, ಸಂದೇಶ್‌ ಶೆಟ್ಟಿ, ಜಿತೇಂದ್ರ ಕೊಟ್ಟಾರಿ ಅವರು ಉಪಸ್ಥಿತರಿದ್ದರು.

ನಳಿನ್‌ ಅವರೇ ಅಭ್ಯರ್ಥಿ
ದ.ಕ. ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರನ್ನೇ ಅಭ್ಯರ್ಥಿಯನ್ನಾಗಿ ಜಿಲ್ಲಾ ಘಟಕ ಸೂಚಿಸಿದೆ. ಇದನ್ನು ಅಧಿಕೃತವಾಗಿ ಕೇಂದ್ರ ನಾಯಕರು ಘೋಷಿಸಬೇಕಾಗಿದೆ. ಆದರೆ ಪಕ್ಷದ ಚಿಹ್ನೆೆ°ಯನ್ನು ಬಳಸಿ ಕೊಂಡು ಅಲ್ಲಲ್ಲಿ ಕೆಲವರು ತಾನು ಅಭ್ಯರ್ಥಿ ಎಂದು ಪಕ್ಷ ವಿರೋಧಿಯಾಗಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಅಂತಹವರ ವಿರುದ್ಧ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೋಪಾಲಕೃಷ್ಣ ಹೇರಳೆ ತಿಳಿಸಿದರು. 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.