ಬಾಳುಗೋಡು: ಕೊತ್ನಡ್ಕ ಕಿರು ಸೇತುವೆ ನನೆಗುದಿಗೆ

Team Udayavani, Apr 24, 2019, 6:00 AM IST

14

ಸುಬ್ರಹ್ಮಣ್ಯ: ಸೇತುವೆ ಇಲ್ಲದೆ ಇಲ್ಲಿಯ ಜನ ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮೂರಿಗೆ ಸಂಪರ್ಕಕ್ಕಾಗಿ ಸೇತುವೆಯೊಂದನ್ನು ನಿರ್ಮಿಸಿಕೊಡುವಂತೆ ಜನಪ್ರತಿನಿಧಿಗಳ ಮುಂದೆ ಕೊತ್ನಡ್ಕ ಗ್ರಾಮಸ್ಥರು ಬೇಡಿಕೆ ಇರಿಸಿದ್ದರು. ಒತ್ತಾಯಕ್ಕೆ ಮಣಿದು ನಾಲ್ಕು ವರ್ಷಗಳ ಹಿಂದೆ ಇಲ್ಲಿಗೆ ಕಿರು ಸೇತುವೆ ಮಂಜೂರುಗೊಂಡಿತ್ತು. ಸೇತುವೆ ನಿರ್ಮಾಣಕ್ಕೆ ಬೇಕಿರುವಷ್ಟು ಅನುದಾನ ದೊರಯದ ಕಾರಣ ಆಮೆಗತಿಯಲ್ಲಿಯೇ ಸಾಗಿದ ಕಾಮಗಾರಿ ಅಪೂರ್ಣವಾಗಿದೆ.

ಹರಿಹರ ಪಳ್ಳತ್ತಡ್ಕ ಗ್ರಾ.ಪಂ. ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ಕೊತ್ನಡ್ಕ ಎನ್ನುವ ತೀರಾ ಕುಗ್ರಾಮವಿದೆ. ಬಾಳುಗೋಡು ಪೇಟೆಯಿಂದ ಐದಾರು ಕಿ.ಮೀ. ದೂರದ ಅರಣ್ಯದ ಅಂಚಿನಲ್ಲಿ ಈ ಪ್ರದೇಶವಿದೆ. ಕಾಡು ದಾರಿಯ ಮೂಲಕ ಕಚ್ಚಾ ರಸ್ತೆಯಲ್ಲಿ ಇಲ್ಲಿಗೆ ತೆರಳಬೇಕು. ದಾರಿ ಮಧ್ಯೆ ಹೊಳೆ ಹರಿಯುತ್ತದೆ. ಇಲ್ಲಿಯವರು ಈ ಹೊಳೆ ದಾಟಲು ಮಳೆಗಾಲದಲ್ಲಿ ಹರಸಾಹಸ ಪಡುತ್ತಾರೆ.

8.25 ಲಕ್ಷ ರೂ. ಬಿಡುಗಡೆ
ಬಹುಕಾಲದ ಬೇಡಿಕೆಯಂತೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಇಲ್ಲಿನ ಸಂಪರ್ಕಕ್ಕಾಗಿ ಕಿರು ಸೇತುವೆ ನಿರ್ಮಾಣಕ್ಕೆ 8.25 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿತ್ತು. ಗುತ್ತಿಗೆದಾರರು ಕಾಮಗಾರಿಗೆ ಬೇಕಿರುವ ಸಾಮಗ್ರಿ ಸಂಗ್ರಹಿಸಿ ಕೆಲಸ ಆರಂಭಿಸಿದ್ದರು. ಪಿಲ್ಲರ್‌ ಕೆಲಸ ಸಾಗಿತ್ತು. ಕಳೆದ ಮೂರು ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದಕ್ಕೆ ಗುತ್ತಿಗೆದಾರರು ಕೊಟ್ಟಿರುವ ಕಾರಣ ಅನುದಾನ ಸಾಲುವುದಿಲ್ಲ ಎನ್ನುವುದಾಗಿತ್ತು.

ಇನ್ನೂ ಬೇಕು 10 ಲಕ್ಷ ರೂ.!
ಕಿರು ಸೇತುವೆಯ ಕಾಮಗಾರಿ ಪೂರ್ಣಗೊಳಿಸಬೇಕಾದರೆ ಇನ್ನೂ ಹತ್ತು ಲಕ್ಷ ರೂ. ಅನುದಾನದ ಆವಶ್ಯಕತೆ ಇದೆ ಎಂದು ಸಂಬಂಧಪಟ್ಟವರು ಹೇಳುತ್ತಾರೆ. ದೊರೆತ ಅನುದಾನದಲ್ಲಿ ಸೇತುವೆ ಕಾಮಗಾರಿ ನಡೆಸಿದ್ದಾಗಿ ಹೇಳಿ ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ. ಸೇತುವೆಗೆ ಹಾಕಿದ ಪಿಲ್ಲರ್‌ ಪಾಳು ಬಿದ್ದಿದೆ. ಸೇತುವೆ ನಿರ್ಮಾಣಕ್ಕೆಂದು ತಂದು ಹಾಕಿದ್ದ ಸಾಮಗ್ರಿಗಳು ಕಾಣೆಯಾಗಿವೆ. ಪಿಲ್ಲರಿಗೆ ಅಳವಡಿಸಿದ ಸಾಧನಗಳು ತುಕ್ಕು ಹಿಡಿದಿವೆ.

ನಿರ್ಲಕ್ಷ್ಯದ ಬಿಸಿ ತಟ್ಟಿತ್ತು
ಸತತ ಪ್ರಯತ್ನದ ಮೂಲಕ ಸೇತುವೆ ಮಂಜೂರುಗೊಂಡರೂ, ನಿರೀಕ್ಷಿತ ಅನುದಾನ ಸಿಗದೆ ಸೇತುವೆ ಪೂರ್ಣವಾಗದೆ ಇರುವುದು ಈ ಭಾಗದ ನಾಗರಿಕರಲ್ಲಿ ಬೇಸರ ತರಿಸಿದೆ. ಈ ಬಾರಿ ಚುನಾವಣೆ ವೇಳೆ ಮತ ಕೇಳಲು ಈ ಭಾಗಕ್ಕೆ ತೆರಳುವವರಿಗೆ ಇದರ ಬಿಸಿ ತಟ್ಟಿದೆ. ಚುನಾವಣೆ ಪ್ರಚಾರದ ವೇಳೆ ಇಲ್ಲಿನ ಮೂಲ ಸೌಕರ್ಯ ನಿರ್ಲಕ್ಷ್ಯದ ವಿಚಾರ ಕೂಡ ಚರ್ಚೆಗೆ ಬಂದಿತ್ತು. ಆದರೆ ಪ್ರತಿ ಭಾರಿ ಫಲಿತಾಂಶ ಶೂನ್ಯ.

ತೂಗು ಸೇತುವೆಯೇ ಆಧಾರ
ಶಾಲಾ ಮಕ್ಕಳು, ನಾಗರಿಕರು ಈ ರಸ್ತೆಯ ಮೂಲಕ ನಿತ್ಯವೂ ಓಡಾಡುತ್ತಾರೆ. ನಿತ್ಯವೂ ತಮ್ಮ ಬೇಡಿಕೆಗಳನ್ನು ಈ ರಸ್ತೆ ಮೂಲಕವೇ ಸಂಚರಿಸಿ ಪೂರೈಸಿಕೊಳ್ಳುತ್ತಾರೆ. ಈ ಊರಿಗೆ ಖಾಸಗಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನ ಸೌಲಭ್ಯ ಕೂಡ ಇಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಹೊಳೆ ತುಂಬಿ ಹರಿಯುವ ಕಾರಣ ಸ್ಥಳೀಯರು ತಾತ್ಕಾಲಿಕ ಮರದ ತೂಗು ಸೇತುವೆ ನಿರ್ಮಿಸಿಕೊಂಡು ಹೊಳೆ ದಾಟುತ್ತಾರೆ.

 ಅನುದಾನ ಒದಗಿಸಿ: ಆಗ್ರಹ
ಸೇತುವೆ ಮಂಜೂರಾಗಿ ನಾಲ್ಕು ವರ್ಷಗಳು ಆಗಿವೆ. ಇನ್ನೂ ಸೇತುವೆ ಅರ್ಧದಲ್ಲೇ ಬಾಕಿಯಾಗಿದೆ. ಹೆಚ್ಚಿನ ಅನುದಾನದ ಅಗತ್ಯತೆ ಇದೆ. ಅರ್ಧಕ್ಕೆ ಕಾಮಗಾರಿ ಸ್ಥಗಿತವಾಗಿದ್ದರಿಂದ ಸರಕಾರದ ಯೋಜನೆ ಹಳ್ಳ ಹಿಡಿದಿದೆ. ಎಲ್ಲ ಕಡೆಗಳಲ್ಲೂ ಸಂಪರ್ಕ ಅಭಿವೃದ್ಧಿಯಾದರೆ, ನಾವಿಲ್ಲಿ ಇನ್ನೂ ಸಮಸ್ಯೆ ಅನುಭವಿಸುತ್ತಲೇ ಇದ್ದೇವೆ. ಇನ್ನಾದರೂ ಕಾಮಗಾರಿ ಚುರುಕು ಮುಟ್ಟಿಸಿ ಮಳೆಗಾಲದ ಮುಂಚಿತ ಪೂರ್ಣಗೊಳಿಸಬೇಕು.
– ಚೇತನ್‌ ಕಜೆಗದ್ದೆ ಸ್ಥಳಿಯ ನಿವಾಸಿ

ವಿಶೇಷ ಪ್ರಯತ್ನ
ಜಿ.ಪಂ. ಕ್ಷೇತ್ರಕ್ಕೆ ಹತ್ತು ಲಕ್ಷ ಅನುದಾನವಷ್ಟೇ ಲಭ್ಯವಿರುವುದು. ಹೀಗಾಗಿ ಅನುದಾನದ ಕೊರತೆ ಇದೆ. ಶಾಸಕರ ವಿಶೇಷ ಅನುದಾನವನ್ನು ಕೇಳಿಕೊಂಡು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು. ಸ್ಥಳೀಯ ಜನಪ್ರತಿನಿಧಿಗಳ ಜತೆ ಈ ಕುರಿತು ಶೀಘ್ರವೇ ಚರ್ಚಿಸಲಾಗುವುದು.
– ಆಶಾ ತಿಮ್ಮಪ್ಪ ಜಿ.ಪಂ. ಸದಸ್ಯೆ, ಗುತ್ತಿಗಾರು ಕ್ಷೇತ್ರ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.