ಕಾಂಗ್ರೆಸ್, ಜೆಡಿಎಸ್ ಗೆದ್ದರೆ ತಲಾ ಒಂದು ಕ್ಷೇತ್ರವಷ್ಟೇ: ಧರ್ಮಸ್ಥಳದಲ್ಲಿ ಯಡಿಯೂರಪ್ಪ

Team Udayavani, Dec 8, 2019, 2:47 PM IST

ಬೆಳ್ತಂಗಡಿ: ಎಲ್ಲರ ನಿರೀಕ್ಷೆ ಚುನಾವಣೆ ಫಲಿತಾಂಶದ ಕಡೆ ಇದೆ. ಎಲ್ಲಾ ಕ್ಷೇತ್ರದಲ್ಲಿ ಸಚಿವರೊಂದಿಗೆ ನಾವು ಸುತ್ತು ಬಂದಿದ್ದು, ಸಮೀಕ್ಷೆ ಪ್ರಕಾರ 15 ಕ್ಷೇತ್ರದಲ್ಲಿ 13 ಕ್ಷೇತ್ರ ಗೆಲ್ಲುತ್ತೇವೆ. ಅಕಸ್ಮಾತ್ ಗೆದ್ದರೆ ಕಾಂಗ್ರೆಸ್ ಗೆ ಒಂದು, ಜೆಡಿಎಸ್ ಒಂದು ಸ್ಥಾನ ಬರಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ವಿವಿಧ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ಮಾಡಲು ಧರ್ಮಸ್ಥಳಕ್ಕೆ ಆಗಮಿಸಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಮ್ಮ ಲೆಕ್ಕಾಚಾರ ಮಿಸ್ ಆಗುವ ವಿಷಯವೇ ಇಲ್ಲ.  ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ ಸರಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಧರ್ಮಸ್ಥಳ ಕಿಂಡಿ ಅಣೆಕಟ್ಟು ಕಾಂಕ್ರೀಟ್ ಕಾಮಗಾರಿ ನಡೆಸುವ ವಿಚಾರವಾಗಿ ಡಾ. ಹೆಗ್ಗಡೆ ವಿನಂತಿಯಂತೆ ಅನುದಾನ ಬಿಡುಗಡೆ ಮಾಡಿದ್ದೇನೆ.  ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದ ಅವರು ರಾಜ್ಯದ ಜನತೆಗೆ ಒಳಿತು ಮಾಡುವಂತೆ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಬೇಡುತ್ತೇನೆ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಯಿ ಜತೆಗಿದ್ದರು.

ಧರ್ಮಸ್ಥಳ ಹೆಲಿಪ್ಯಾಡ್ ಆಗಮಿಸಿದಾಗ ಶಾಸಕ ಹರೀಶ್ ಪೂಂಜ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಕ್ಷೇತ್ರದ ಪರವಾಗಿ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ