ಬುರ್ಖಾ ಧರಿಸಿ ನೃತ್ಯ: ನಾಲ್ವರು ವಿದ್ಯಾರ್ಥಿಗಳು ಅಮಾನತು
ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ
Team Udayavani, Dec 9, 2022, 10:57 AM IST
ಮಂಗಳೂರು: ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಇದನ್ನೂ ಓದಿ:ಚಪ್ಪಲಿ ಧರಿಸಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ ಶಾಸಕ ಸುರೇಶ್; ಹಿಂದೂ ಸಂಘಟನೆಗಳಿಂದ ಆಕ್ರೋಶ
ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು. ಇದಾದ ಬಳಿಕ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯನ್ನೇರಿ ನೃತ್ಯ ಪ್ರದರ್ಶಿಸಿದ್ದಾರೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.
ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿ, ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ. ಕಾಲೇಜು ಆವರಣದಲ್ಲಿ ಯಾವುದೇ ರೀತಿ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕ್ ಗೆ ಹೋಗುವವರಿಗೆ ಫ್ರೀ ಟಿಕೆಟ್: ಶರಣ್ ಪಂಪ್ ವೆಲ್
ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
2021ರ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಅಸಂಕ್ರಾಮಿಕ ರೋಗಗಳಿಂದ ಮರಣ ಪ್ರಮಾಣ ಹೆಚ್ಚು- ಡಾ.ಶಾನುಭೋಗ್