ಉಪ ಚುನಾವಣೆ ಗೆಲುವು ಸಂಘಟಿತ ಕೆಲಸದ ಫ‌ಲ: ನಳಿನ್‌

Team Udayavani, Dec 13, 2019, 11:36 PM IST

xd-28

ಮಂಗಳೂರು: ಸಿಎಂ ಯಡಿಯೂರಪ್ಪ, ಎಲ್ಲ ಸಚಿವರು, ಶಾಸಕರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಿದ್ದರಿಂದ ಉಪ ಚುನಾವಣೆ ಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಶುಕ್ರವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಬಳಿಕ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಭಿನಂದನ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾನು ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದಾಗ ಕರಾವಳಿಯಂತೆಯೇ ರಾಜ್ಯದಲ್ಲಿ ಸಂಘಟನೆ ಮಾಡು ತ್ತೇವೆ ಎಂದಿದ್ದೆ. ಆದರೆ ಆಗ ಕೆಲವರು ಕೇಸರಿ ಮುಂದಿಟ್ಟುಕೊಂಡು ಸಂಘಟಿಸು ತ್ತಾರೆ ಎಂದು ಟೀಕಿಸಿದ್ದರು. ನಾವು ಇಲ್ಲಿನಂತೆಯೇ ಉಪ ಚುನಾವಣೆಯಲ್ಲಿ ಸಂಘಟನೆ ಮಾಡಿದ್ದು, ಯಶಸ್ವಿಯಾಗಿದೆ. ಕರಾವಳಿಯಲ್ಲಿ ಪ್ರತಿ ಮತಗಟ್ಟೆಯನ್ನು ಬಲಿಷ್ಠಗೊಳಿಸಿ ರುವಂತೆ ರಾಜ್ಯದ ಇತರ ಜಿಲ್ಲೆಗಳ ಮತಗಟ್ಟೆಗಳನ್ನು ಕೂಡ ಪೇಜ್‌ ಪ್ರಮುಖ್‌ ಮೂಲಕ ಬಲಿಷ್ಠಗೊಳಿಸಲಾಗುವುದು. ಮುಂದಿನ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬೆಂಗಳೂರು ಮೇಯರ್‌ ಆಯ್ಕೆ, ನಗರ ಸ್ಥಳೀಯಾಡಳಿತ ಚುನಾವಣೆ ಮತ್ತು ಉಪಚುನಾವಣೆ ಗಳು ಎದುರಾದವು. ಎಲ್ಲವನ್ನೂ ಯಶಸ್ವಿಯಾಗಿ ಎದುರಿಸಲು ಸಾಧ್ಯ ವಾಗಿದೆ ಎಂದು ನಳಿನ್‌ ಹೇಳಿದರು.

ಗ್ರಾ.ಪಂ.ನಲ್ಲಿ ಶೇ.90
ದ.ಕ. ಜಿಲ್ಲೆಯಲ್ಲಿ ಈ ಬಾರಿ ಶೇ.90 ರಷ್ಟು ಪಂ.ಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನಿಟ್ಟು ಕೆಲಸ ಮಾಡಬೇಕಿದೆ. ಈ ಮೂಲಕ ಜಿಲ್ಲೆಯನ್ನು ಕಾಂಗ್ರೆಸ್‌ ಮುಕ್ತಗೊಳಿಸಬೇಕು ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕ ಯೋಗೀಶ್‌ ಭಟ್‌ ಉಪಸ್ಥಿತರಿದ್ದರು. ರವಿಶಂಕರ್‌ ಮಿಜಾರ್‌ ಕಾರ್ಯಕ್ರಮ ನಿರ್ವಹಿಸಿದರು. ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿವರೆಗೆ ನಳಿನ್‌ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.

ವಿಶ್ವಾಸಕ್ಕೆ ತಕ್ಕಂತೆ ಕೆಲಸ
ರಾಜ್ಯ  ದೇಶದ ಜನತೆ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಮತದಾರರು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ. ಕೇಂದ್ರ -ರಾಜ್ಯ ಅನುದಾನಗಳನ್ನು ಬಳಸಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡ ಬೇಕಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯ ಮೂಲಕ ಮೋದಿ ನೇತೃತ್ವದ ಸರಕಾರ ಹಿಂದೂಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಿದೆ. ಮೋದಿ ಅವಧಿ ಯಲ್ಲಿಯೇ ರಾಮ ಮಂದಿರ ನಿರ್ಮಾಣವಾಗುವ ವಿಶ್ವಾಸವಿದೆ ಎಂದರು.

ಹೆದ್ದಾರಿ: ಸಚಿವರ ಜತೆ ಚರ್ಚೆ
ರಾ.ಹೆ. ಕಾಮಗಾರಿ ತೊಂದರೆಗಳ ಬಗ್ಗೆ ಗುರುವಾರ ಮತ್ತೂಮ್ಮೆ ಕೇಂದ್ರ ಸಚಿವರ ಜತೆಗೆ ಚರ್ಚಿಸಿದ್ದು, 15 ದಿನಗಳೊಳಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಜಿಲ್ಲೆಯ ಹೊಸ ರೈಲ್ವೇ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿವೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.