ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಇನ್ನೋವಾ

Team Udayavani, Aug 13, 2019, 2:30 PM IST

ಮೂಡಬಿದಿರೆ: ಇನ್ನೋವಾ ಕಾರೊಂದು ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ.

ಬೆಳುವಾಯಿ ಮುಡಾಯಿ ಕಾಡು ನಿವಾಸಿ ಜಗನ್ನಾಥ ಮಡಿವಾಳರ ಪುತ್ರಿ , ಉಡುಪಿ ಹಿರಿಯಡ್ಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶುಭಲಕ್ಷ್ಮಿ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿ. ಇವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಿಗ್ಗೆ ನಾಲ್ವರು ವಿದ್ಯಾರ್ಥಿಗಳು ಕಾರ್ಕಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದು ಈ ಸಂದರ್ಭದಲ್ಲಿ ಮೂಡುಬಿದಿರೆ ಕಡೆಯಿಂದ ಅತೀ ವೇಗದಿಂದ ಬಂದ ಇನ್ನೋವಾ ಕಾರು ಶುಭಲಕ್ಷ್ಮಿಗೆ ಢಿಕ್ಕಿ ಹೊಡೆದಿದ್ದು ಹೊಡೆತಕ್ಕೆ ಶುಭಲಕ್ಷ್ಮಿ 15 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದು ತಲೆ ಮತ್ತು ಮತ್ತು‌ ಪಕ್ಕೆಲುಗಳಿಗೆ ಏಟುಗಳಾಗಿವೆ ತಲೆ ತೀವೃತರದ ಏಟು ಬಿದ್ದಿದ್ದರಿಂದ ಮೂಗು‌ ಮತ್ತು ಬಾಯಿಯಿಂದ ರಕ್ತ ಸೋರುತಿತ್ತು.

ಜೀವಾಪಾಯದಿಂದ ಪಾರಾಗಿರುವ ವಿದ್ಯಾರ್ಥಿನಿ ಕೆಲವು ದಿನಗಳ ಕಾಲ ಕೋಮ ಸ್ಥಿತಿಯಲ್ಲಿರಬಹುದೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಉಳಿದಂತೆ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ನಂತರ ಮರಕ್ಕೆ ಢಿಕ್ಕಿ ಹೊಡೆದು ನಿಂತಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ