ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಹಿತ ಓರ್ವನ ಬಂಧನ
Team Udayavani, Mar 1, 2019, 12:30 AM IST
ಮಂಗಳೂರು: ನಗರದಲ್ಲಿ ಸಾರ್ವ ಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಶಫೀಕ್ ಯಾನೆ ಚಪ್ಪಿ (21)ಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಹಮದ್ ಶಫೀಕ್ ನಿಷೇಧಿತ ಮಾದಕ ವಸ್ತು ಎಂಡಿಎಂಎ (ಮಿಥಿಲಿನ್ ಡಯೋಕ್ಸಿ ಮೆತಂಫೆಟ್- ಆಮೈನ್) ಅನ್ನು ಮುಂಬಯಿಯಿಂದ ಖರೀದಿಸಿ ಮಂಗಳೂರಿಗೆ ತಂದು ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಯಿಂದ 60 ಗ್ರಾಂ ತೂಕದ 1,80,000 ರೂ. ಬೆಲೆಯ ಎಂಡಿಎಂಎ ಮತ್ತು ಮೊಬೈಲ್ ಫೋನ್ ಸಹಿತ ಒಟ್ಟು 1,83,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಸುರತ್ಕಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಈ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್, ಕಬ್ಟಾಳ್ರಾಜ್ ಹಾಗೂ ಸಿಬಂದಿ ಕಾರ್ಯಾ ಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ