ಚಾರ್ಮಾಡಿ ಘಾಟಿ ರಸ್ತೆ: ಭಾರೀ ವಾಹನ ನಿಷೇಧ
Team Udayavani, Dec 19, 2021, 6:20 AM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ. 234) ಮಂಗಳೂರು- ತುಮಕೂರು ರಸ್ತೆಯ 75 ಕಿ.ಮೀ. (ಚಾರ್ಮಾಡಿ ಗ್ರಾಮ)ದಿಂದ 86.20 ಕಿ.ಮೀ. (ದಕ್ಷಿಣ ಕನ್ನಡ ಜಿಲ್ಲಾ ಗಡಿ) ವರೆಗಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಡಿ. 18ರಿಂದ ಮುಂದಿನ ಆದೇಶದವರೆಗೆ ದಿನದ 24 ಗಂಟೆಯೂ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿ, ಹಾಗೂ ಭಾರೀ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಯಾವುದಕ್ಕೆ ಅವಕಾಶ
ಸಾರ್ವಜನಿಕರು ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್ಸಿವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ದಿನದ 24 ಗಂಟೆಯೂ ಸಂಚರಿಸಬಹುದಾಗಿದೆ.
ಯಾವುದಕ್ಕೆ ಅವಕಾಶ ಇಲ್ಲ
ಬುಲೆಟ್ ಟ್ಯಾಂಕರ್, ಪಿಪ್ ಕಾರ್ಗೋ ಕಂಟೈನರ್ ಹಾಗೂ ಲಾಂಗ್ ಚಾಸೀಸ್ ವಾಹನಗಳೂ, ಹೆವಿ ಕಮರ್ಶಿಯಲ್ ವೆಹಿಕಲ್, ಮಲ್ಟಿ ಆ್ಯಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತು ಎಲ್ಲ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು