ಚಾರ್ಮಾಡಿ: ಮಿನಿ ಬಸ್‌ ಓಡಾಟಕ್ಕೆ ಸೂಕ್ತ ಸಮಯ

ಪರೀಕ್ಷೆ ನಡೆದರೂ ಆರಂಭವಾಗದ ಸಂಚಾರ

Team Udayavani, Nov 24, 2019, 12:00 AM IST

mm-38

ಕೊಟ್ಟಿಗೆಹಾರದಲ್ಲಿ ನಿಂತಿರುವ ವಾಹನಗಳ ಸರತಿ ಸಾಲು.

ಬೆಳ್ತಂಗಡಿ: ಪ್ರವಾಹ ಹೊಡೆತದಿಂದ ನಿಧಾನವಾಗಿ ಚೇತರಿಸುತ್ತಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮಿನಿ ಬಸ್‌ ಓಡಾಟ ಆರಂಭಿಸಲು ಸಾರ್ವಜನಿಕರ ಆಗ್ರಹ ಕೇಳಿಬರುತ್ತಿದೆ. ಆದರೆ ಪ್ರಾಯೋಗಿಕ ಸಂಚಾರ ನಡೆಸಲಾಗಿದ್ದರೂ ಸಂಚಾರ ಇನ್ನೂ ಆರಂಭವಾಗಿಲ್ಲ. ಈ ನಡುವೆ ಸಮಯ ನಿರ್ಬಂಧದಿಂದಾಗಿ ಪ್ರತಿದಿನ ಇಲ್ಲಿ ವಾಹನಗಳು ಸರತಿ ಸಾಲಿನಲ್ಲಿ ಕಾಯುವಂತಾಗಿದೆ.

ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿರುವುದರಿಂದ ದೂರದೂರುಗಳಿಂದ ಬರುವ ವಾಹನಗಳು ರಸ್ತೆಯಲ್ಲೇ ರಾತ್ರಿ ಕಳೆಯುವಂತಾಗಿದೆ. ತುರ್ತು ಸಂಚಾರಕ್ಕಾಗಿ ಮಿನಿ ಬಸ್‌ ಓಡಾಟ ನಡೆಸುವ ಅವಕಾಶವಿದ್ದರೂ ಚಿಕ್ಕಮಗಳೂರು ಮತ್ತು ದ.ಕ. ಜಿಲ್ಲಾಧಿಕಾರಿಗಳು ಮೌನ ವಹಿಸಿರುವ ವಿರುದ್ಧ ಸಾರ್ವಜನಿಕರಿಂದ ಅಸಮಾಧಾನದ ಮಾತು ಕೇಳಿಬರುತ್ತಿದೆ.
ಧರ್ಮಸ್ಥಳ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಮಿನಿ ಬಸ್‌ ಓಡಾಟ ಆರಂಭಿಸುವ ನಿರೀಕ್ಷೆ ಇತ್ತಾದರೂ ಅದು ಈಡೇರಿಲ್ಲ.

ಪ್ರಾಯೋಗಿಕ ಪರೀಕ್ಷೆ
ಮಂಗಳೂರು ಹೊರತುಪಡಿಸಿ ಧರ್ಮಸ್ಥಳ, ಪುತ್ತೂರು, ಬಿ.ಸಿ. ರೋಡ್‌, ಚಿಕ್ಕಮಗಳೂರು ಸೇರಿದಂತೆ ಯಾವುದೇ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಮಿನಿ ಬಸ್‌ಗಳಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಅಧಿಕಾರಿಗಳು ಶಿವಮೊಗ್ಗ ಡಿಪೋ ಸಹಾಯದಿಂದ ಮಿನಿ ಬಸ್‌ ತರಿಸಿ ನ.19ರಂದು ಪ್ರಾಯೋಗಿಕ ಪರೀಕ್ಷೆ ನಡೆಸಿದ್ದರು.

ಪ್ರಾಯೋಗಿಕ ಸಂಚಾರ
ರಾ.ಹೆ. ಅಧಿಕಾರಿಗಳ ಉಪಸ್ಥಿತಿಯಲ್ಲಿ ಈಚೆಗೆ 35 ಸೀಟರ್‌ನ ಬಸ್‌ ಮೂಡಿಗೆರೆಯಿಂದ ಅಣ್ಣಪ್ಪ ಬೆಟ್ಟದವರೆಗೆ ಸುಮಾರು 13 ಕಿ.ಮೀ. ದೂರ ಪ್ರಾಯೋಗಿಕ ಸಂಚಾರ ನಡೆಸಿದೆ. ಸಂಚಾರ ಭದ್ರತೆ ಅನುಗುಣವಾಗಿ ರಾ.ಹೆ. ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಸಮಕ್ಷಮ ಒಪ್ಪಿಗೆ ಸಿಕ್ಕಲ್ಲಿ ಮೂಡಿಗೆರೆಯಿಂದ ಉಜಿರೆಯ ವರೆಗೆ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಆವಶ್ಯಕತೆಗೆ ಅನುಗುಣವಾಗಿ ಮಿನಿ ಬಸ್‌ ಓಡಾಟ ನಡೆಸಲು ಸಿದ್ಧರಿರುವುದಾಗಿ ಚಿಕ್ಕಮಗಳೂರು ಡಿಪೋ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ. ಆದರೆ ಜಿಲ್ಲಾಧಿಕಾರಿಗಳ ಆದೇಶ ಇನ್ನೂ ಸಿಕ್ಕಿಲ್ಲ.

ರಸ್ತೆಯಲ್ಲಿ ನಿದ್ದೆ, ಉಪವಾಸ
ದಕ್ಷಿಣ ಕನ್ನಡ, ಉಡುಪಿಯ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಮಾತ್ರವಲ್ಲದೆ ಆಸ್ಪತ್ರೆಗೆ ದಾಖಲಾಗು ವಂತಹ ತುರ್ತು ಸಂದರ್ಭ ಗಳಲ್ಲಿ ಕೂಡ ರಾತ್ರಿ 6ರ ಬಳಿಕ ತೆರಳಲು ಅವಕಾಶ ಇಲ್ಲದಿರುವುದರಿಂದ ಚಾರ್ಮಾಡಿ ಆರಂಭ ಮತ್ತು ಕೊಟ್ಟಿಗೆರೆ ಚೆಕ್‌ಪೋಸ್ಟ್‌ ಗಳಲ್ಲಿ ವಾಹನಗಳು ಸರತಿಯ ಸಾಲಿನಲ್ಲಿ ಉಳಿಯುತ್ತಿವೆ. ಶನಿವಾರ ಬೆಳಗ್ಗೆ ಕೊಟ್ಟಿಗೆಹಾರದಲ್ಲಿ ಸುಮಾರು 200ಕ್ಕೂ ಅಧಿಕ ವಾಹನಗಳು ಕಂಡುಬಂದಿದ್ದವು. ಇತ್ತ ಸಂಜೆ 6ರ ಬಳಿಕ ಲಘುವಾಹನ ಓಡಾಟಕ್ಕೂ ಜಿಲ್ಲಾಡಳಿತ ಅವಕಾಶ ನೀಡದಿರುವುದರಿಂದ ಶೌಚಾಲಯ ಸೇರಿದಂತೆ ವಸತಿ ಸೌಲಭ್ಯವಿಲ್ಲದೆ ಕಾಡಿನ ಮಧ್ಯೆ ದಿನ ಕಳೆಯುವಂತಾಗಿದೆ. ಡಿಸಿಗಳು ತುರ್ತು ಕ್ರಮಕ್ಕೆ ಮುಂದಾದಲ್ಲಿ ಜನರ ವನವಾಸ ತಪ್ಪಲಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.