ನೋ ಬ್ಯಾಗ್‌ ಡೇ : ವಿದ್ಯಾರ್ಥಿಗಳಿಗೆ ಅನ್ನದ ಬಟ್ಟಲ ಪಾಠ

Team Udayavani, Jul 29, 2018, 11:25 AM IST

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಶಾಲಾ ಮಕ್ಕಳಿಗೆ ಶನಿವಾರ ನೋ ಬ್ಯಾಗ್‌ ಡೇ ಅಂಗವಾಗಿ ಅನ್ನದ ಮಹತ್ವ ಅರಿಯುವ ಸಲುವಾಗಿ ಭತ್ತದ ಗದ್ದೆಯಲ್ಲಿ ಪ್ರಾತ್ಯಕ್ಷಿಕೆ ಹಾಗೂ ಭತ್ತದಿಂದ ಅಕ್ಕಿಯನ್ನು ಬೇರ್ಪಡಿಸುವ ಕುರಿತು ಮಾಹಿತಿ ನೀಡಲಾಯಿತು.

ಚೆನ್ನಾವರ ಪಟ್ಟೆ ಲಕ್ಷ್ಮೀ ರೈ ಅವರ ಭತ್ತದ ಗದ್ದೆಯಲ್ಲಿ ಪ್ರಾತ್ಯಕ್ಷಿಕೆ ನಡೆಯಿತು. ನಮ್ಮ ಆಹಾರ ಬೆಳೆಯಾದ ಭತ್ತದ ಉತ್ಪಾದನೆ ಯಾವ ರೀತಿ ಆಗುತ್ತದೆ ಎಂಬ ಮಾಹಿತಿ ಹೆಚ್ಚಿನ ಮಕ್ಕಳಿಗೆ ಇರುವುದಿಲ್ಲ. ಈಗ ಗದ್ದೆ ಕಾಣುವುದೇ ವಿರಳ. ಹೀಗಾಗಿ, ಭತ್ತ ಬೆಳೆಯುವುದು ಹೇಗೆ? ಬಿತ್ತನೆ, ನಾಟಿ ಮೊದಲಾದ ವಿಚಾರ ತಿಳಿಸಿಕೊಡುವ ನಿಟ್ಟಿನಲ್ಲಿ ಹಾಗೂ ಕೃಷಿಯಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಗದ್ದೆಯಲ್ಲಿ ಭತ್ತದ ಕೃಷಿಯ ಕುರಿತು ತಿಳಿಹೇಳಲಾಯಿತು.

ಆಸಕ್ತಿಯಿಂದ ಗದ್ದೆಗಿಳಿದ ವಿದ್ಯಾರ್ಥಿಗಳಿಗೆ ಪರಿಣತರಿಂದ ಮಾಹಿತಿ ನೀಡಲಾಯಿತು. ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದವರ ಬಾಯಿಯಿಂದ ಕೇಳಿಬರುತ್ತಿದ್ದ ಓ ಬೇಲೇ – ಓ ಬೇಲೆ… ಹಾಡುಗಳನ್ನು ಮಕ್ಕಳೂ ಹಾಡಿದರು. ಕೃಷಿಯ ನಂಟನ್ನು ಬಿಡದೆ ನೇಜಿ ನಾಟಿ ಮಾಡುವ ಸಮಯದಲ್ಲಿ ತಮ್ಮನ್ನು ತಾವೇ ಹುರಿದುಂಬಿಸಿಕೊಳ್ಳಲು ಹಾಡುತ್ತಿದ್ದ ಜಾನಪದ ಹಾಡು, ಪಾಡ್ದನಗಳನ್ನು ಮಕ್ಕಳೂ ಹಾಡಿ ಸಂಭ್ರಮಿಸಿದರು.

ಭತ್ತದ ಕೃಷಿಯಿಂದ ದೂರ ಸರಿಯುವ ಕಾಲದಲ್ಲಿ ವಿದ್ಯಾರ್ಥಿಗಳು, ಯುವಜನತೆ ಈ ಕೃಷಿಯ ಬಗ್ಗೆ ನೈಜವಾಗಿ ತಿಳಿವಳಿಕೆ ಪಡೆಯುವುದು ಸ್ವತಃ ಗದ್ದೆಗಿಳಿದರೆ ಮಾತ್ರ ಎಂಬುದನ್ನು ಮನಗಂಡ ಶಿಕ್ಷಕರು, ಈ ಪ್ರಯತ್ನ ಮಾಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಾಂತಾ ಕುಮಾರಿ ಎನ್‌., ಶಿಕ್ಷಕಿಯರಾದ ಶ್ವೇತಾ, ರಂಝೀನಾ, ಅಕ್ಷರ ದಾಸೋಹ ವಿಭಾಗದ ಪವಿತ್ರವೇಣಿ, ಪದ್ಮಾವತಿ, ಚೆನ್ನಾವರ ಅಭ್ಯುದಯ ಯುವಕ ಮಂಡಲದ ಜತೆ ಕಾರ್ಯದರ್ಶಿ ಕೃತೇಶ್‌ ರೈ, ಹರೀಶ್‌ ರೈ ಪಾಲ್ಗೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೀವಿ ಹಲಸು. ಎಲ್ಲ ಉಷ್ಣ ವಲಯ ಪ್ರದೇಶಗಳಲ್ಲಿ ಬೆಳೆಯುವ ಬೆಳೆಯಿದು. ಮಲಯ ದ್ವೀಪ ಸಮೂಹಗಳ ಮೂಲ ಆಗಿದ್ದು, ಭಾರತದ ನಾನಾ ಭಾಗದಲ್ಲಿ ಇದನ್ನು ಕಾಣಬಹುದು. ವಿವಿಧ ಖಾದ್ಯ...

  • ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ...

  • ಕೈಕಾಲುಗಳು ಸಣ್ಣದಾಗಿ, ಹೊಟ್ಟೆ ದೊಡ್ಡದಾಗಿ, ಅದರ ಮೈಮೇಲಿನ ಕೂದಲು ನುಣುಪು ಕಳೆದುಕೊಂಡು ಒರಟಾಗಿ ಕಾಣಿಸತೊಡಗಿದರೆ, ಆ ದನ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ...

  • "ಅರೇ ಇದೇನಿದು?'ಎಂದು ಯೋಚಿಸಿದ್ದೀರಾ?ತುಂಬಾ ಸರಳ. ಮನೆ ಸುತ್ತ ಮುತ್ತ ಜಾಗದಲ್ಲಿ ಗಿಡಗಳನ್ನು ಬೆಳೆಸಿದರಾಯಿತು. ಮನೆ ಚಿಕ್ಕದು, ಅಂಗಳ ಇಲ್ಲದಿದ್ದರೂ ಚಿಂತೆ ಇಲ್ಲ....

  • ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ....

ಹೊಸ ಸೇರ್ಪಡೆ