ಮಕ್ಕಳ ಮನಸ್ಸಿಗೆ ಹೆತ್ತವರೂ ನೋವುಂಟು ಮಾಡದಿರಿ


Team Udayavani, Jan 29, 2018, 10:53 AM IST

29-12.jpg

ವಿಟ್ಲ : ಪ್ರತಿಯೊಬ್ಬರ ಮನಸ್ಸು ಮಕ್ಕಳ ಮನಸ್ಸಿನಂತಿರಬೇಕು. ಪ್ರೀತಿಯಿಂದ ಜಗತ್ತನ್ನು ಗೆಲ್ಲಬಹುದು. ಮಕ್ಕಳ ಮನಸ್ಸಿಗೆ ಹೆತ್ತವರೂ ನೋವುಂಟುಮಾಡಬಾರದು. ಮಕ್ಕ ಳಲ್ಲಿ ಶಿಕ್ಷಕರು ವಿಷಬೀಜ ಬಿತ್ತಬಾರದು. ಸ್ವಾತಂತ್ರ್ಯ ಹೋರಾಟಗಾರರನ್ನು ನಿಂದಿಸಬಾರದು. ಕರ್ಕಶ ಸ್ವರದಿಂದ ಜೈಕಾರ ಹಾಕುವುದೇ ದೇಶಭಕ್ತಿಯಲ್ಲ. ಪ್ರತಿಯೊಬ್ಬನ ಅಂತರಂಗದಲ್ಲಿ ದೇಶ ಪ್ರೇಮ ಬೆಳಗಿಸ‌ಬೇಕು ಎಂದು ಸಚಿವ ರಮಾನಾಥ ರೈ ಅಭಿಪ್ರಾಯಪಟ್ಟರು.

ಅವರು ಶನಿವಾರ ಮಂಕುಡೆ ದ.ಕ. ಜಿ.ಪಂ. ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಶತಮಾನೋತ್ಸವ ಕಟ್ಟಡ ಮತ್ತು ಶತ ಸಂಭ್ರಮದ ಉದ್ಘಾಟನೆ ಹಾಗೂ ಮಂಕುಡೆ-ಕುಡ್ತಮುಗೇರು ಹಳೆ ವಿದ್ಯಾರ್ಥಿ ಯುವಕ ಮಂಡಲದ ವಾರ್ಷಿಕೋತ್ಸವ ಉದ್ಘಾಟಿಸಿದರು.
ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಕುಡೆ ರಾಮಕೃಷ್ಣ ಆಚಾರ್‌ ಶತಸಂಭ್ರಮವನ್ನು ಉದ್ಘಾ ಟಿಸಿದರು. ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನವೀಕೃತ ಧ್ವಜಸ್ತಂಭ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಜಿ.ಪಂ. ಸದಸ್ಯ ಎಂ.ಎಸ್‌. ಮಹಮ್ಮದ್‌, ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ತಾ.ಪಂ. ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಮಂಕುಡೆ ಶ್ರೀನಿವಾಸ ಆಚಾರ್‌, ಮಂಕುಡೆ ವಿಜಯ ಆಚಾರ್‌, ಗ್ರಾ.ಪಂ. ಸದಸ್ಯ ರಾದ ಪವಿತ್ರ ಪೂಂಜ ಕೊಡಂಗೆ, ಹರೀಶ್‌ ಟೈಲರ್‌ ಮಂಕುಡೆ, ದೇವಕಿ, ವೇದಾವತಿ ಪರ್ತಿಪ್ಪಾಡಿ, ವೇದಾವತಿ ಕುದ್ರಿಯ, ಪ್ರಗತಿಪರ ಕೃಷಿಕ ಜತ್ತಪ್ಪ ಪೂಂಜ ಕೊಡಂಗೆ, ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಮಂಕುಡೆ ಕಲ್ಕಾಜೆ, ಮಂಡಲ ಅಧ್ಯಕ್ಷ ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಶತಮಾನೋತ್ಸವಕ್ಕೆ ಧನಸಹಾಯ ನೀಡಿದ ದಾನಿಗಳನ್ನು ಗೌರವಿಸಿ, ದತ್ತಿನಿಧಿಗಳನ್ನು ವಿತರಿಸಲಾಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ಅಡ್ಯಂತಾಯ ಪ್ರಸ್ತಾವನೆಗೈದು, ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಗಟ್ರೂìಡ್‌ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿ ರಾಮ ಬಂಗೇರ ಮತ್ತು ಕಾರ್ಯದರ್ಶಿ ಪ್ರಶಾಂತ್‌ ಪೂಜಾರಿ ವರದಿ ಮಂಡಿಸಿ ದರು. ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ರಮೇಶ್‌ ಮಂಕುಡೆ ವಂದಿಸಿದರು. ಶಿಕ್ಷಕರಾದ ಪರಮೇಶ್ವರ ಆಚಾರ್ಯ, ಅಶೋಕ ಮಾಂಬಾಡಿ ನಿರೂಪಿಸಿದರು. ಸಹ ಶಿಕ್ಷಕಿ ಚಂದ್ರಾವತಿ ದತ್ತಿನಿ ಧಿ ವಿವರ ಓದಿದರು. ಬಳಿಕ ಮಕ್ಕಳಿಂದ ನೃತ್ಯ ಸಂಭ್ರಮ, ತುಳು ನಾಟಕ ಪ್ರದರ್ಶನಗೊಂಡಿತು.

ಬೆಳಗ್ಗೆ ಎಸ್‌ಡಿಎಂಸಿ ಅಧ್ಯಕ್ಷೆ ವಿಮಲಾ ಲಂಬೋದರ ಪೂಜಾರಿ ಪರ್ತಿಪ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಮಂಚಿ ವಲಯ ಇ.ಸಿ.ಒ. ಪ್ರಕಾಶ್‌, ಸಿ.ಆರ್‌.ಪಿ. ಗಂಗಾಧರ್‌ ಭಾಗವಹಿಸಿದ್ದರು. ಬಹುಮಾನ ವಿತರಿಸಲಾಯಿತು. ಪುಟಾಣಿಗಳಿಂದ ಚಿಣ್ಣರ ಸಂಭ್ರಮ, ಮಂಕುಡೆ ಶಾಲೆಯ ಮಕ್ಕಳಿಂದ ನೃತ್ಯ ವೈಭವವಿತ್ತು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.