ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್‌ ನಿಧನ


Team Udayavani, Sep 26, 2017, 10:11 AM IST

26-STATE-30.jpg

ಮೂಡಬಿದಿರೆ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಪಾತ್ರರಾಗಿದ್ದ ಪ್ರಸಿದ್ಧ ಮಕ್ಕಳ ಸಾಹಿತಿ, ನಿವೃತ್ತ ಶಿಕ್ಷಕ, ಕೃಷಿಕ ಪಳಕಳ ಸೀತಾರಾಮ ಭಟ್‌ (86) ಸೆ. 25ರಂದು ಸಂಜೆ ನಿಧನ ಹೊಂದಿದರು.

ಆ. 16ರಂದು 86 ವರ್ಷ ತುಂಬಿದ್ದ ಅವರು ಪತ್ನಿ ವಸಂತಿ, ಮೂಡಬಿದಿರೆಯ ಲೆಕ್ಕ ಪರಿಶೋಧಕ ಪಿ. ರಘುಪತಿ ಭಟ್‌ ಸಹಿತ ನಾಲ್ವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿ ಆಳ್ವಾಸ್‌ ಹೆಲ್ತ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸೋಮವಾರ ಸಂಜೆ ಪಳಕಳದಲ್ಲಿರುವ ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಮನೆ ತಲುಪಿದ ಎರಡು ಗಂಟೆಗಳಲ್ಲಿ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

“ಬಾಲ ಮನೋವಿಜ್ಞಾನಿ’ ಎಂದೇ ಹೆಸರಾಗಿದ್ದ, ಮೃದು ಮಧುರ ನುಡಿ, ನಡೆಯ ಸರಳ ಸೌಜನ್ಯಶೀಲ ವ್ಯಕ್ತಿ ಪಳಕಳ ಸೀತಾರಾಮ ಭಟ್ಟರ ಚುಟುಕುಗಳು, ಕಥೆ, ಕವನ, ನಾಟಕಾದಿ ಬರೆಹ, ಅಂಕಣಗಳು, ನಾಡಿನ ದೈನಿಕಗಳು, ನಿಯತಕಾಲಿಕೆಗಳಲ್ಲಿ ಪ್ರಕಟವಾಗಿ ಗಮನ ಸೆಳೆದಿವೆ. ಕಿನ್ನಿಗೋಳಿಯ ಯುಗಪುರುಷ ಮೂಲಕ ಅವರ ನೂರಕ್ಕೂ ಅಧಿಕ ಕೃತಿಗಳು ಪ್ರಕಟಗೊಂಡಿದ್ದು ಇಳಿವಯಸ್ಸಿನಲ್ಲೂ ನಿರಂತರ ಎಂಬಂತೆ ಯುಗಪುರುಷ ಪತ್ರಿಕೆಗೆ ಸಮಕಾಲೀನ ಚಿಂತನೆಯ ಚುಟುಕುಗಳನ್ನು ನೀಡುತ್ತ ಬಂದಿದ್ದರು. ಪಳಕಳರ ಆಯ್ದ ಕಥೆಗಳು, ಆಯ್ದ ಕವನಗಳು ಮತ್ತು ಆಯ್ದ ನಾಟಕಗಳ ಮಹಾ ಸಂಪುಟಗಳನ್ನು ಕಿನ್ನಿಗೋಳಿ ಯುಗಪುರುಷ ಪ್ರಕಟಿಸಿದೆ. ಯುಗಪುರುಷದೊಂದಿಗೆ ಕಸಾಪ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಪಳಕಳರಿಗೆ ವಿಶೇಷ ಪ್ರೊತ್ಸಾಹ ನೀಡಿದ್ದರು.

ಎಂ.ಎ. ಬಿ.ಎಡ್‌. ಪದವೀಧರರಾಗಿದ್ದ ಅವರು 14 ವರ್ಷ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಬಳಿಕ ಮೂಡಬಿದಿರೆಯ ಜೈನ್‌ ಹೈಸ್ಕೂಲ್‌ನಲ್ಲಿ 23 ವರ್ಷ ಶಿಕ್ಷಕರಾಗಿ 1988ರ ವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಹೈಸ್ಕೂಲು ವಿದ್ಯಾರ್ಥಿಯಾಗಿದ್ದಾಗಲೇ ಸೋದರತ್ತೆ ಚೆನ್ನಮ್ಮ ಮತ್ತು ಪಂಜೆ ಅವರ ಕತೆ ಕವನಗಳಿಂದ ಪ್ರೇರಿತರಾಗಿ ಸಾಹಿತ್ಯ ರಚನೆ ಆರಂಭಿಸಿದ್ದ ಅವರು 1945ರಲ್ಲಿ ತಮ್ಮದೇ ಶಿಶು ಸಾಹಿತ್ಯ ಮಾಲೆ ಸ್ಥಾಪಿಸಿ ಸ್ವರಚಿತ 31 ಕೃತಿಗಳನ್ನು ಹೊರತಂದಿದ್ದರು. ಈವರೆಗೆ 58 ಮಕ್ಕಳ ಕಥಾ ಸಂಗ್ರಹ, 35 ಕವನ ಸಂಗ್ರಹ, 24 ನಾಟಕ, 28 ಪ್ರಬಂಧ, ಪತ್ರಲೇಖನ, ಜೀವನ ಚರಿತ್ರೆ, ಕಿರು ಕಾದಂಬರಿಗಳು, 14 ಪ್ರೌಢ ಸಾಹಿತ್ಯ, 8 ಚುಟುಕು, 1 ಕವನ ಸಂಗ್ರಹ, 1 ಪ್ರಬಂಧ ಹೀಗೆ 163ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.

ಸಮಾಜಸೇವೆ: ಸುಮಾರು ಎರಡು ದಶಕಗಳ ಕಾಲ ಊರಿನ ಸಹಕಾರಿ ಸಂಘದ ಕಾರ್ಯಕಾರಿ ಸಮಿತಿಯಲ್ಲಿದ್ದ ಪಳಕಳರು ಎರಡು ದಶಕಗಳ ಕಾಲ ಇಲ್ಲಿನ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು. ಶಾಲೆಗೆ ಬೆಂಕಿ ಬಿದ್ದು ಅನಾಹುತವಾದಾಗ ತಾವೇ ಮುಂದಾಳಾಗಿ ನಿಂತು ಶಾಲೆಯನ್ನು ಕಟ್ಟಿಕೊಟ್ಟ ಘಟನೆ ಸ್ಮರಣೀಯ. ಜೀವಮಾನದ ಗಳಿಕೆ 1 ಲಕ್ಷ ರೂ.ಗಳೊಂದಿಗೆ ಪಳಕಳ ಪ್ರತಿಷ್ಠಾನ ರಚಿಸಿ ಬಡಮಕ್ಕಳಿಗೆ ನೆರವಾದವರು, ನಿವೇಶನ ರಹಿತ ನಾಲ್ಕು ಕುಟುಂಬಗಳಿಗೆ ತಲಾ ಐದು ಸೆಂಟ್ಸ್‌ ಮನೆ ನಿವೇಶನಗಳನ್ನು ಕೊಡುಗೆಯಾಗಿ ನೀಡಿದ್ದರು.

1980ರಲ್ಲಿ ರಾಜ್ಯ ಸರಕಾರದ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿದ್ದ ಅವರು ನಂತರ 1983-87ರ ಅವಧಿಯಲ್ಲಿ ಮಕ್ಕಳ ಸಾಹಿತ್ಯ ಕವಿಗೋಷ್ಠಿಗಳಲ್ಲಿ ಸಕ್ರಿಯರಾಗಿ 1996ರ ಹಾಸನ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ ಗೋಷ್ಠಿಯ ಅಧ್ಯಕ್ಷತೆ, 2004ರಲ್ಲಿ ಜಿಲ್ಲಾ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. 1998ರಲ್ಲಿ ಕಸಾಪದ ಮಕ್ಕಳ ಸಾಹಿತ್ಯ ಸಂಚಿಕೆಯ ಸಂಪಾದಕರಾಗಿದ್ದರು. ಕಾಸರಗೋಡು ಸಹಿತ ಅವಿಭಜಿತ ದ.ಕ. ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಮೊದಲ ಅಧ್ಯಕ್ಷರಾಗಿದ್ದರು. ಪ್ರಸಾರ ಭಾರತಿಯಿಂದ ಮಾನ್ಯತೆಯ ಕವಿಯಾಗಿದ್ದ ಅವರ ಕವನಗಳು ಕರ್ನಾಟಕ, ಕೇರಳ, ಮಹಾರಾಷ್ಟ್ರದ ಪಠ್ಯಗಳಲ್ಲಿ, ಮಕ್ಕಳ ಮಾಣಿಕ್ಯ ಮೊದಲಾದ ಧ್ವನಿಸುರುಳಿಗಳ ಮೂಲಕ ಹೊರಹೊಮ್ಮಿವೆ.

ಕವಿಗೆ ಮನ್ನಣೆ
ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಅವರು ಡಾ| ಅಶೋಕ ಆಳ್ವರ ಮಾರ್ಗದರ್ಶನದಲ್ಲಿ ಮಣಿಪಾಲ ವಿ.ವಿ.ಗೆ ಸಲ್ಲಿಸಿದ “ಪಳಕಳ ಸೀತಾರಾಮ ಭಟ್ಟ ಅವರ ಸಮಗ್ರ ಕೃತಿಗಳು’ ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಗಳಿಸಿರುವುದು ಉಲ್ಲೇಖನೀಯ.

ಕವಿಗೆ ಗೌರವ: ಮದ್ರಾಸು ಸರಕಾರದ ಮಕ್ಕಳ ಸಾಹಿತ್ಯ ಗೌರವ (1955), ಕಸಾಪದ ಜಿ.ಪಿ. ರಾಜರತ್ನಂ ದತ್ತಿ ಬಹುಮಾನ (1983), ಹೊಸದಿಲ್ಲಿಯ ಬಾಲ ಶಿಕ್ಷಕ ಪರಿಷತ್‌ ಪ್ರಶಸ್ತಿ (1987) ರಾಜ್ಯ ಸಾಹಿತ್ಯ ಅಕಾಡೆಮಿಯ ಮಕ್ಕಳ ಸಾಹಿತ್ಯ ಪುರಸ್ಕಾರ (1999), ಕೊ.ಅ. ಉಡುಪ ಪ್ರಶಸ್ತಿ, ಶಿವರಾಮ ಕಾರಂತ ಪ್ರತಿಷ್ಠಾನದ ಗೌರವ (2002), ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ (2003), ಕರ್ನಾಟಕ ಸಂಘ ಶಿವಮೊಗ್ಗದ ಮಕ್ಕಳ ಸಾಹಿತ್ಯ ಪ್ರಶಸ್ತಿ (2004), ಆಳ್ವಾಸ್‌ ನುಡಿಸಿರಿ ಪ್ರಶಸ್ತಿ (2005), 75ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಅಮೃತ ಮಹೋತ್ಸವ ಸಮ್ಮೇಳನದಲ್ಲಿ ಸಮ್ಮಾನ (2009), ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ (2010), ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ “ಕರ್ನಾಟಕ ಮಕ್ಕಳ ಸಾಹಿತ್ಯ ರತ್ನ’ ಗೌರವ, ಪುತ್ತಿಗೆ ಗ್ರಾ.ಪಂ. ಗೌರವ, ಮೂಡಬಿದಿರೆ ಪ್ರಸ್‌ಕ್ಲಬ್‌ ಗೌರವ ಸೇರಿದಂತೆ ಹಲವು ಮಾನ ಸಮ್ಮಾನಗಳು ಪಳಕಳರಿಗೆ ಸಂದಿವೆ.

ಸಂತಾಪ: ಶಾಸಕ ಕೆ. ಅಭಯಚಂದ್ರ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಡಾ| ಎಲ್‌.ಸಿ. ಸೋನ್ಸ್‌, ಆಳ್ವಾಸ್‌ ಶಿಕ್ಷ ಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಕಸಾಪ ರಾಜ್ಯ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಯುಗಪುರುಷದ ಭುವನಾಭಿರಾಮ ಉಡುಪ, ಮೂಡಬಿದಿರೆ ರೋಟರಿ ಅಧ್ಯಕ್ಷ ಶ್ರೀಕಾಂತ್‌ ಕಾಮತ್‌, ಸಾಹಿತಿ ಡಾ| ಕಾತ್ಯಾಯಿನಿ ಕುಂಜಿಬೆಟ್ಟು, ವೇ|ಮೂ| ಈಶ್ವರ ಭಟ್‌, ಕೆ.ಪಿ. ಜಗದೀಶ ಅಧಿಕಾರಿ, ಜೈನ ಹೈಸ್ಕೂಲಿನ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ, ಡಿ.ಜೆ. ವಿ.ವಿ. ಸಂಘದ ಕಾರ್ಯದರ್ಶಿ ಅಭಿಜಿತ್‌ ಎಂ. ಹಾಗೂ ಪದಾಧಿಕಾರಿಗಳು, ಮೂಡಬಿದಿರೆ ಚದುರಂಗ ಸಂಗೀತ ಶಾಲೆ, ಶ್ರೀ ಕೃಷ್ಣ ಫ್ರೆಂಡ್ಸ್‌ ಸರ್ಕಲ್‌ ಹುದ್ದರಿಗಳು ಪಳಕಳ ಸೀತಾರಾಮ ಭಟ್ಟರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ಅಂತ್ಯಸಂಸ್ಕಾರ
ಮೃತರ ಅಂತ್ಯ ಸಂಸ್ಕಾರ ಮಂಗಳವಾರ (ಸೆ. 26) ಪಳಕಳದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.