ಕರಾವಳಿ: ಕೆಲವೆಡೆ ಸಾಧಾರಣ ಮಳೆ
Team Udayavani, Sep 18, 2018, 11:07 AM IST
ಮಂಗಳೂರು/ ಉಡುಪಿ: ಕರಾವಳಿಯ ಕೆಲವೆಡೆ ಸೋಮವಾರ ಮಳೆಯಾಗಿದೆ. ಉಳಿದಂತೆ ಮೋಡ ಕವಿದ ವಾತಾವರಣ ಇತ್ತು. ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ಸೋಮ ವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗಿದೆ. ಮೂಲ್ಕಿ ಸುತ್ತಮುತ್ತ ಬೆಳಗ್ಗೆ ಸಾಧಾರಣ ಮಳೆ ಸುರಿದಿದೆ.
ಉಡುಪಿ ಜಿಲ್ಲೆಯ ಕೆಲವೆಡೆ ರವಿವಾರ ರಾತ್ರಿ ಹಾಗೂ ಸೋಮವಾರ ಬೆಳಗ್ಗೆ ಹನಿ ಮಳೆ ಯಾಗಿದೆ. ಕೋಟ, ಸಾಲಿಗ್ರಾಮ ಭಾಗಗಳಲ್ಲಿ ಸೋಮವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಕಾರ್ಕಳ, ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕಿನ ಹಲವೆಡೆ ತುಂತುರು ಮಳೆಯಾಗಿದೆ. ಉಳಿದಂತೆ ಬಿಸಿಲಿನ ವಾತಾವರಣವಿತ್ತು.