ಉಳ್ಳಾಲ: ತಲಪಾಡಿ ಯುವಕನ ಮೇಲೆ ತಲವಾರು ದಾಳಿ ಯತ್ನ ಸತ್ಯಕ್ಕೆ ದೂರ; ಆಯುಕ್ತರು ಹೇಳಿದ್ದೇನು?
Team Udayavani, Aug 3, 2022, 12:28 PM IST
ಉಳ್ಳಾಲ: ತಲಪಾಡಿ ಕೆ. ಸಿ. ರೋಡ್ ಬಳಿ ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಮೇಲೆ ಮೂವರು ತಲವಾರು ದಾಳಿ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸಿದಾಗ ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ತಿಳಿದು ಬಂದಿದೆ.
ಕೆ.ಸಿ. ರೋಡ್ ಮೂಲದ ಕಿಶೋರ್ ಎಂಬಾತ ತನ್ನ ಹಲ್ಲೆ ಯತ್ನ ಮಾಡಿದ್ದಾರೆಂದು ಆರೋಪಿಸಿದ್ದು, ತಾನು ಕೆಲಸಕ್ಕೆ ತೆರಳುತ್ತಿದ್ದಾಗ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸ್ಥಳೀಯವಾಗಿ ಹೇಳಿಕೊಂಡಿದ್ದಾನೆ. ಬಳಿಕ ಪೊಲೀಸ್ ಠಾಣೆಯಲ್ಲಿ ತನ್ನ ಹೇಳಿಕೆಯನ್ನು ಬದಲಿಸಿದ್ದು, ತಲವಾರು ದಾಳಿ ಮಾಡಿದ ಹಾಗೆ ಭಾಸವಾಯಿತು ಎಂದು ಹೇಳಿಕೆ ನೀಡುವ ಮೂಲಕ ಹೊಸ ವರಸೆ ಆರಂಭಿಸಿದ್ದಾನೆ. ಪೊಲೀಸರು ಗದರಿಸಿದ ಬಳಿಕ ಆತನಿಂದ ಮುಚ್ಚಳಿಕೆ ಬರೆಸಿಕೊಂಡು ಠಾಣೆಯಲ್ಲಿ ಇರಿಸಿದ್ದಾರೆ.
ಇದನ್ನೂ ಓದಿ: ಅಮೃತ ಮಹೋತ್ಸವ ಕಾರ್ಯಕ್ರಮಕ್ಕೂ ಮುನ್ನ ದೇವಸ್ಥಾನ, ದರ್ಗಾಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
ತಲವಾರು ದಾಳಿಯ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರಲ್ಲಿ ಆತಂಕ ಮೂಡಿದ್ದು, ಬಳಿಕ ಪೊಲೀಸರು ತನಿಖೆ ನಡೆಸಿ ಘಟನೆಗೆ ಕಾರಣಕರ್ತನಾಗಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಯುಕ್ತರ ಸ್ಪಷ್ಟನೆ:
ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಈ ರೀತಿಯ ಯಾವುದೇ ಘಟನೆಗಳು ನಡೆದಿಲ್ಲ. ನಾವು ಆತನನ್ನು ವಿಚಾರಿಸಿದಾಗ, ಯಾರೋ ನನ್ನ ಮೇಲೆ ದಾಳಿ ನಡೆಸಿದಂತೆ ಆಯಿತು ಎಂದಿದ್ದಾನೆ. ಆದರೆ ಯಾರೂ ಕೂಡ ದಾಳಿ ಯತ್ನ ಹಾಗೂ ಬೆನ್ನಟ್ಟಿಲ್ಲ ಎಂಬುವುದನ್ನು ಆತ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ