ಕೋಮು ಸೌಹಾರ್ದ ಕಾಪಾಡಿ: ಡಾ| ವೀರೇಂದ್ರ ಹೆಗ್ಗಡೆ ಮನವಿ

Team Udayavani, Jan 9, 2018, 8:30 AM IST

09-15.jpg

ಬೆಳ್ತಂಗಡಿ: ಕರಾವಳಿಯಲ್ಲಿ ಕೋಮುಸೌಹಾರ್ದ, ಶಾಂತಿ ಕಾಪಾಡುವ ಅಗತ್ಯವಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕರಾವಳಿಯಲ್ಲಿ ಕಳೆದ ಸ್ವಲ್ಪ ಸಮಯದಿಂದ ಅವಿರತವಾಗಿ ಅಶಾಂತಿಯ ವಾತಾವರಣ ಕಂಡುಬರುತ್ತಿದೆ. ಅನೇಕ ಸಾವು-ನೋವುಗಳು ಸಂಭವಿಸಿವೆ. ಎರಡೂ ಧರ್ಮಗಳ ವ್ಯಕ್ತಿಗಳು ಬಲಿಯಾಗುತ್ತಿದ್ದಾರೆ. ಘಟನಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ, ಒಂದು ಧರ್ಮದ ವ್ಯಕ್ತಿಯ ಕೊಲೆಯಾದ ಬಳಿಕ ಪ್ರತೀಕಾರವೆಂಬಂತೆ ಇನ್ನೊಂದು ಧರ್ಮದ ವ್ಯಕ್ತಿಯ ಹತ್ಯೆ ನಡೆಯುವುದು ಕಂಡುಬರುತ್ತದೆ.

ಕರಾವಳಿ ಭಾಗದ ಜನರು ಶಾಂತಿಪ್ರಿಯರು. ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸ ಮತ್ತು ಸ್ನೇಹದಿಂದ ಸಹಜ ಜೀವನ ನಡೆಸುತ್ತಿದ್ದ ಜನರಲ್ಲಿ ಸಂಶಯ, ಅಪನಂಬಿಕೆ ಮತ್ತು ಸೇಡಿನ ಭಾವನೆಗಳು ಕಾಣುತ್ತಿವೆ. ಈ ಸಾವು-ನೋವಿನ ಸಂದರ್ಭಗಳಲ್ಲಿ ನಿ ರ್ದಿಷ್ಟವಾದ ಉದ್ದೇಶಗಳು ತಿಳಿಯುತ್ತಿಲ್ಲವಾದರೂ ಅವು ಪರಸ್ಪರ ಅಪನಂಬಿಕೆ ಮತ್ತು ಅಶಾಂತಿಗೆ ಕಾರಣವಾಗುತ್ತಿವೆ. ವಿಚಾರ ಭೇದಗಳಿದ್ದಲ್ಲಿ ಪರಸ್ಪರ ಮಾತುಕತೆ ಹಾಗೂ ವಿಚಾರ ವಿನಿಮಯದಿಂದ ಪರಿಹಾರ ಕಂಡುಕೊಳ್ಳಬೇಕೇ ಹೊರತು ಹಿಂಸೆಯ ಮಟ್ಟಕ್ಕೆ ಕೊಂಡೊಯ್ಯುವುದು ಯಾವ ಧರ್ಮಕ್ಕೂ ಶ್ರೇಯಸ್ಕರವಲ್ಲ.

ಅವಸರದ ಮತ್ತು ಉದ್ವೇಗದ ತೀರ್ಮಾನಗಳು ಹಾಗೂ ಘಟನೆಗಳಿಂದ ನಿರ್ದಿಷ್ಟ ಗುರಿ ಮತ್ತು ಪರಿಹಾರವಿಲ್ಲದೆ ಘರ್ಷಣೆಗಳು ನಡೆಯುತ್ತಲೇ ಇರುತ್ತವೆ. ದಯವಿಟ್ಟು ಎಲ್ಲರೂ ಶಾಂತಿ ಮತ್ತು ಸಾಮರಸ್ಯವನ್ನು ಬಯಸಿ ಜನಜೀವನದಲ್ಲಿ ಸಹಜತೆ ಹಾಗೂ ಸೌಹಾರ್ದ ನೆಲೆಗೊಳ್ಳುವಂತೆ ನಡೆದುಕೊಳ್ಳಬೇಕಾಗಿದೆ. ಪ್ರತೀಕಾರದ ಮನೋಧರ್ಮವನ್ನು ತೊರೆದು ವಿಶ್ವಾಸ ಮತ್ತು ಸ್ನೇಹದ ವಾತಾವರಣವನ್ನು ಉಂಟು ಮಾಡೋಣ ಎಂದು ಡಾ| ಹೆಗ್ಗಡೆ ಕರೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಹಲ್ಲೆಯ ಸಂದರ್ಭದಲ್ಲಿ ಗಾಯಗೊಂಡವರನ್ನು ತತ್‌ಕ್ಷಣ ಆಸ್ಪತ್ರೆಗೆ ಕೊಂಡೊಯ್ದವರು ಯಾರು ಎಂಬುದನ್ನು ತಿಳಿದರೆ ಅವರು ಧರ್ಮವನ್ನು ಗಮನಿಸದೆ ಸ್ಪಂದಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮಾನವೀಯತೆ ಮೆರೆಯುತ್ತದೆಯೇ ಹೊರತು ಜಾತಿ, ಮತ, ಧರ್ಮವಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ.

ಈ ಸಂದರ್ಭದಲ್ಲಿ ವಿಶೇಷವಾಗಿ ಯುವ ಜನತೆ ಸಂಯಮ ಮತ್ತು ತಾಳ್ಮೆಯಿಂದ ವರ್ತಿಸಬೇಕಾದ ಅಗತ್ಯ ಇದೆ. ಎಲ್ಲರೂ; ವಿಶೇಷವಾಗಿ ತಂದೆ- ತಾಯಿ, ಸಹೋದರ-ಸಹೋದರಿಯರು ತಮ್ಮ ತಮ್ಮ ಮನೆಗಳಲ್ಲಿ ತಾಳ್ಮೆ ಮತ್ತು ಶಾಂತಿಯನ್ನು ಕಾಪಾಡುವ ಬಗ್ಗೆ ಮಾತುಕತೆ ನಡೆಸಿ. ಸಹನೆ, ಸೌಹಾರ್ದ ಮತ್ತು ಸಂಯಮವನ್ನು ಬೆಳೆಸಿಕೊಂಡು ಎಲ್ಲರೂ ಶಾಂತಿ – ಸಾಮರಸ್ಯದಿಂದ ಬಾಳ್ಳೋಣ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.