‘ಶಿಕ್ಷಣದ ಮೌಲ್ಯಗಳಿಂದ ಸಮಗ್ರ ಬದುಕು’

Team Udayavani, Sep 3, 2018, 12:08 PM IST

3-september-10.jpg

ಬೆಳ್ತಂಗಡಿ: ವಿದ್ಯಾರ್ಥಿಗಳು ಹೆತ್ತವರ, ಸಮಾಜದ ಋಣವನ್ನು ಅರಿತು ಕೊಂಡು ನಮ್ಮೊಳಗಿನ ಗೋಡೆಗಳನ್ನು ದೂರ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದ ಮೌಲ್ಯಗಳ ಮೂಲಕ ಸಮಗ್ರ ಬದುಕನ್ನು ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕಿದೆ ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ರವಿಕಾಂತೇಗೌಡ ಹೇಳಿದರು. ಅವರು ಶನಿವಾರ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಮಾದರಿ ಜೀವನ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮದಿಂದ ಹೃದಯವಂತಿಕೆಯ ಮೂಲಕ ಜೀವನ ರೂಪಿಸಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲೂ ಅಂತಃ ಸತ್ವವನ್ನು ಕಳೆದುಕೊಳ್ಳದೆ ಮಾದರಿ ಜೀವನ ನಡೆಸಬೇಕಿದೆ ಎಂದರು. ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್‍ಯಾಂಕ್‌ ವಿಜೇತರನ್ನು ಗೌರವಿಸಲಾಯಿತು. ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌, ರಿಜಿಸ್ಟ್ರಾರ್‌ ಡಾ| ಸಂಪತ್‌ಕುಮಾರ್‌, ರಿಜಿಸ್ಟ್ರಾರ್‌ (ಪರೀಕ್ಷಾಂಗ) ಪ್ರೊ| ಶಾಂತಿ ಪ್ರಕಾಶ್‌, ವಿವಿಧ ವಿಭಾಗದ ಡೀನ್‌ಗಳಾದ ಡಾ| ಜಯಕುಮಾರ್‌ ಶೆಟ್ಟಿ, ಡಾ| ಉದಯ ಕುಮಾರ್‌, ಡಾ| ಪ್ರಕಾಶ್‌ ಪ್ರಭು ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ| ಟಿ.ಎನ್‌. ಕೇಶವ ಅವರು ಪ್ರಸ್ತಾವಿಸಿ, ಸ್ವಾಗತಿಸಿದರು. ಉಪಪ್ರಾಂಶುಪಾಲ ಪ್ರೊ| ಸತೀಶ್ಚಂದ್ರ ಅತಿಥಿಗಳನ್ನು ಪರಿಚಯಿಸಿದರು. ಸ್ನಾತಕೋತ್ತರ ವಿಭಾಗದ ಡೀನ್‌ ಪ್ರೊ| ಬಿ. ಗಣಪಯ್ಯ ವಂದಿಸಿದರು. ಚಿತ್ರಾ ಶೈಲೇಶ್‌, ಅನನ್ಯಾ ಕಾರ್ಯಕ್ರಮ ನಿರೂಪಿಸಿದರು.

ಮಾನವೀಯ ಮೌಲ್ಯಗಳಿರಲಿ
ಯಶಸ್ಸು ಗಳಿಸುವುದೆಂದರೆ ಹಣ, ಪ್ರತಿಷ್ಠೆ, ಸ್ಥಾನಮಾನವೇ ಪರಮ ಗುರಿಯಾಗಬಾರದು. ಅದರ ಜತೆಗೆ ಮಾನವೀಯ ಮೌಲ್ಯಗಳನ್ನೂ ಬೆಳೆಸಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿರುವುದು ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂಬುದರ ಸಂಕೇತವಾಗಿದೆ. ಮೌಲ್ಯಯುತ ಶಿಕ್ಷಣದಲ್ಲಿ ಎಸ್‌ ಡಿಎಂ ಸಂಸ್ಥೆಗಳು ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿವೆ.
-ಡಾ| ರವಿಕಾಂತೇಗೌಡ
ದ.ಕ. ಎಸ್‌.ಪಿ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.