ಕೋವಿಡ್ 19 ಆತಂಕ ಬಂಟ್ವಾಳದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
Team Udayavani, Mar 27, 2020, 10:27 AM IST
ಬಂಟ್ವಾಳ: ಕೋವಿಡ್ 19 ಆತಂಕದಿಂದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬೆಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಅಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (55) ಆತ್ಮಹತ್ಯೆ ಮಾಡಿಕೊಂಡವರು. ಕೊರೊನಾ ವೈರಸ್ ಖಾಯಿಲೆ ಬೆಳಕಿಗೆ ಬಂದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಾ. 26ರ ರಾತ್ರಿ ಮನೆಯ ಗೋಡೆ ಮೇಲೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೆಟ್ರೋಲ್ ಬಂಕೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಎರಡು ದಿನಗಳ ಹಿಂದೆಯೂ ಆತ್ಯಹತ್ಯೆಗೆ ಪ್ರಯತ್ನಿಸಿದರು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.