ಮುಂದಿನ ಜನಾಂಗದ ರಕ್ಷಣೆಗೆ ಕಟಿಬದ್ಧರಾಗೋಣ ಕೋವಿಡ್ 19 ನಿರ್ಮೂಲನೆಗೆ ಡಾ| ಹೆಗ್ಗಡೆ ಸಂದೇಶ

Team Udayavani, Mar 30, 2020, 11:36 AM IST

ಮುಂದಿನ ಜನಾಂಗದ ರಕ್ಷಣೆಗೆ ಕಟಿಬದ್ಧರಾಗೋಣ ಕೋವಿಡ್ 19 ನಿರ್ಮೂಲನೆಗೆ ಡಾ| ಹೆಗ್ಗಡೆ ಸಂದೇಶ

ಬೆಳ್ತಂಗಡಿ: ಕೋವಿಡ್ ವ್ಯಾಧಿ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ದೇಶದ ಉಳಿವಿಗಾಗಿ ಪ್ರಧಾನ ಮಂತ್ರಿಯವರು ದೇಶವನ್ನೇ ಲಾಕ್‌ಡೌನ್‌ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಅದನ್ನು ಸಂಯಮದಿಂದ ಪಾಲಿಸಬೇಕಿರುವುದು ಸತøಜೆಗಳಾದ ನಮ್ಮೆಲ್ಲರ ಧರ್ಮ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ.

ಪ್ರಧಾನಿಯವರ ತೀರ್ಮಾನವನ್ನು ಶೇ. 99 ಮಂದಿ ಒಪ್ಪಿಕೊಂಡು ಮನೆಯಲ್ಲೇ ಉಳಿದಿರುವುದು ಸಂತಸದ ವಿಚಾರ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರತಿದಿನ ಎಷ್ಟು ಮಂದಿ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕಳೆದ ಒಂದು ವಾರದಿಂದ ಒಬ್ಬ ವ್ಯಕ್ತಿಯೂ ದೇವರ ದರ್ಶನಕ್ಕೆ ಬಂದಿಲ್ಲ. ಅಂತಹ ಶಿಸ್ತನ್ನು ಪಾಲಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜಾಗೃತಿ ಮೂಡಿಸಿ

ಈ ಸಂದರ್ಭ ಯಾರೂ ಮನೆಯಿಂದ ಹೊರಬರಬೇಡಿ. ಎಲ್ಲ ವ್ಯವಹಾರಗಳನ್ನೂ ಮನೆಯಿಂದಲೇ ನಿಭಾಯಿಸಿ. ಕುಟುಂಬದೊಂದಿಗೆ ಸಮಯ ಕಳೆಯಲು ಇದೊಂದು ಉತ್ತಮ ಅವಕಾಶ. ಮನೆಯೊಳಗೇ ಕೂರಿಸಿಕೊಂಡು ಮಕ್ಕಳನ್ನು ಹತೋಟಿಗೆ ತರುವುದು ಕಷ್ಟ, ಆದರೆ ಈ ಸಮಯದಲ್ಲಿ ಮಕ್ಕಳಲ್ಲಿ ವಿಷಯದ ಗಾಂಭೀರ್ಯದ ಬಗ್ಗೆ ತಿಳಿಯಹೇಳಿ ಜಾಗೃತಿ ಮೂಡಿಸಿ. ಈ ಸೋಂಕು ರೋಗದಿಂದ ಬಚಾವಾದರೆ ಮುಂದಿನ ದಿನಗಳಲ್ಲಿ ಅವರ ಭವಿಷ್ಯವನ್ನು ಅವರೇ ರೂಪಿಸಿಕೊಳ್ಳಬಹುದು. ಎಲ್ಲರೂ ಸಂಯಮ ಪಾಲಿಸಿ ಎಚ್ಚರಿಕೆಯಿಂದ ಇದ್ದು, ಸಾರ್ವಜನಿಕ ಪ್ರದೇಶದಿಂದ ಹಾಲು, ಅಗತ್ಯ ವಸ್ತು ಖರೀದಿಗೆ ಬರುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಾರೆ.

ಖಂಡಿತವಾಗಿಯೂ ಕೋವಿಡ್ ಸೋಂಕು ನಿವಾರಣೆಯಾಗಲಿದೆ. ಮಂಜುನಾಥ ಸ್ವಾಮಿಯ ಸನ್ನಿಧಿ ಯಲ್ಲಿ ಲೋಕಕಲ್ಯಾಣಕ್ಕಾಗಿ ನಿತ್ಯವೂ ಪೂಜೆ, ಹೋಮ-ಹವನ, ಅರ್ಚನೆ ಮಾಡುತ್ತಿದ್ದೇವೆ. ಇವೆಲ್ಲವೂ ನಿಮ್ಮೆಲ್ಲರ ಹಿತಕ್ಕಾಗಿ. ಎಲ್ಲರೂ ಸುಖ ವಾಗಿರಬೇಕು ಎಂಬ ಭಾವನೆಯೇ ದೊಡ್ಡ ಪುಣ್ಯ ನೀಡುತ್ತದೆ. ಸೋಂಕನ್ನು ದೇಶದಿಂದ ಹೊಡೆದೋಡಿಸಲು ನಾವೆಲ್ಲರೂ ಕಟಿಬದ್ಧರಾಗೋಣ. ಮುಂದಿನ ಜನಾಂಗಕ್ಕೆ ನಾವು ರಕ್ಷಣೆ ನೀಡೋಣ ಎಂದು ಡಾ| ಹೆಗ್ಗಡೆ ಸಂದೇಶದಲ್ಲಿ ತಿಳಿಸಿದ್ದಾರೆ.

ಯೋಗಾಭ್ಯಾಸಕ್ಕೆ ಸಕಾಲ
ಆರೋಗ್ಯ ರಕ್ಷಣೆಗೆ ಯೋಗಾಭ್ಯಾಸ ಉತ್ತಮ. ಅದಕ್ಕಾಗಿ ಈ ಸಂದರ್ಭವನ್ನು ಸದುಪಯೋಗ ಮಾಡಿಕೊಳ್ಳಿ. ನಾನೂ ದಿನಾ ಯೋಗಾಸನ ಮಾಡುತ್ತೇನೆ. ಹಿಂದೂಗಳು ದೇವರ ಪೂಜೆ ಮಾಡುತ್ತೀರಿ. ಅದರಂತೆ ಗಂಡಸರು ಬೆಳಗ್ಗೆ 6ರಿಂದ 11ರ ವರೆಗೆ ಸೂರ್ಯನಮಸ್ಕಾರ ಅಥವಾ ದೀàರ್ಘ‌ದಂಡ ನಮಸ್ಕಾರ ಮಾಡಬೇಕು. ಮಹಿಳೆಯರು ಅಡ್ಡಬಿದ್ದು ನಮಸ್ಕಾರ ಮಾಡುವುದರಿಂದ ಉಸಿರಾಟ ತೊಂದರೆ, ರಕ್ತ ಸಂಚಾರ ಸಮಸ್ಯೆ ನಿವಾರಣೆಯಾಗಿ ದೇಹ ಸಮತೋಲ ಕಾಯ್ದುಕೊಳ್ಳುತ್ತದೆ. ಮನೆಯಲ್ಲೇ ಇರುವಿರಾದ್ದರಿಂದ ಮಿತವಾದ ಆಹಾರ ಸೇವನೆ ಸೂಕ್ತ ಎಂದು ಡಾ| ಹೆಗ್ಗಡೆ ಕಿವಿಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.