ಕೋವಿಡ್-19 ಸಮರ: ಮುಂಚೂಣಿಯಲ್ಲಿ “ಆಶಾ’ ಪಡೆ !

Team Udayavani, Mar 30, 2020, 5:45 AM IST

ಕೋವಿಡ್-19 ಸಮರ: ಮುಂಚೂಣಿಯಲ್ಲಿ “ಆಶಾ’ ಪಡೆ !

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ನಿರಂತರ ಕಾರ್ಯ
ನಿರ್ವಹಿಸುತ್ತಿರುವ ಜಿಲ್ಲಾಡಳಿತದ ವಿವಿಧ ತಂಡಗಳಿಗೆ ಆಶಾ ಕಾರ್ಯ ಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಾಥ್‌ ನೀಡುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗ
ಗಳಲ್ಲಿ ತಳಮಟ್ಟದ ಆರೋಗ್ಯ ಸೇನಾನಿಗಳಾಗಿ ಮುಂಚೂಣಿಯಲ್ಲಿ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ.

15 ದಿನಗಳ ಹಿಂದೆಯೇ
ತಮಗೆ ನೀಡಲಾದ ವಿಶೇಷ ತರಬೇತಿ, ಮಾರ್ಗದರ್ಶಿ ಸೂತ್ರಗಳನ್ನಾಧರಿಸಿ ಕಾರ್ಯ ಕ್ಷೇತ್ರಕ್ಕೆ ಇಳಿದಿರುವ ಆಶಾ ಕಾರ್ಯರ್ತೆಯರು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಗೆ ಸ್ಥಳೀಯ ಸಂಪರ್ಕ ಕೊಂಡಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಆರಂಭದಲ್ಲಿ ಕರಪತ್ರ ವಿತರಣೆ, ಮನೆ ಮನೆಗಳಲ್ಲಿ ಜಾಗೃತಿಯ ಕೆಲಸಗಳನ್ನು ಮಾಡಿರುವ ಆಶಾ ಕಾರ್ಯಕರ್ತೆಯರು ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವವರ ಬಗ್ಗೆ ವಿಶೇಷ ನಿಗಾ ಕಾರ್ಯದಲ್ಲಿ ಪೊಲೀಸ್‌ ಮತ್ತು ಆರೋಗ್ಯ ಇಲಾಖೆಗಳಿಗೆ ನೆರವಾಗುತ್ತಿದ್ದಾರೆ. ಗುಲಾಬಿ ಬಣ್ಣದ ಸಮವಸ್ತ್ರಧಾರಿ ಆಶಾ ಕಾರ್ಯಕರ್ತೆ ಯರು ಕೆಲವೆಡೆ ಏಕಾಂಗಿಗಳಾಗಿ, ಕೆಲವೆಡೆ ತಂಡಗಳಲ್ಲಿ ಕೊಡುಗೆ ಸಲ್ಲಿಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಇದುವರೆಗೆ ರಂಗಕ್ಕೆ ಇಳಿದಿಲ್ಲವಾದರೂ ಹೋಂ
ಕ್ವಾರಂಟೈನ್‌ ಕುರಿತ ಪ್ರಾಥಮಿಕ ಮಾಹಿತಿಯನ್ನು ಇಲಾಖೆಗಳಿಗೆ ರವಾನಿಸಿ ಸಮನ್ವಯ ಸಾಧಿಸಲು ನೆರವಾಗುತ್ತಿದ್ದಾರೆ. ಕೆಲವೆಡೆ ಹೋಂ ಕ್ವಾರಂಟೈನ್‌ನಲ್ಲಿರುವವರ ಆಹಾರ ಆವಶ್ಯಕತೆಗಳನ್ನು ಇತರ ಸಂಘ- ಸಂಸ್ಥೆಗಳ ನೆರವಿನೊಂದಿಗೆ ಪೂರೈಸುವ ಕೆಲಸವನ್ನು ಕೂಡ ಅವರು ಮಾಡುತ್ತಿದ್ದಾರೆ.

1,335 ಮಂದಿ ಆಶಾ ಕಾರ್ಯಕರ್ತೆಯರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 1,335ಕ್ಕೂ ಅಧಿಕ ಮಂದಿ ಆಶಾ ಕಾರ್ಯ ಕರ್ತೆಯರು ಕೋವಿಡ್-19 ತಡೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ
ತಲಾ 5 ಮಂದಿ ಮೆಂಟರ್‌(ಆಶಾ ಸೂಪರ್‌ವೈಸರ್‌ಗಳುಗಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1,000ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಜತೆಗೂಡಿ ಸೇವೆ ಸಲ್ಲಿಸು
ತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದ ವರೆಗೆ 3,20,359 ಮನೆಗಳಿಗೆ ಭೇಟಿ ನೀಡಿ 13,17,439 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 96,446 ಮನೆಗಳಿಗೆ ಭೇಟಿ ನೀಡಿ 4,14,719 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ತಮ್ಮ ವೇತನಕ್ಕಾಗಿ ಬೀದಿಗಿಳಿದು ಹೋರಾಟ ನಡೆ ಸಿದ್ದ ಆಶಾ ಕಾರ್ಯಕರ್ತೆಯರು ಈಗ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ!
ಇತರ ಆರೋಗ್ಯಸಿಬಂದಿಯಂತೆ ಅವರ ಸೇವೆಯೂ ಮಹತ್ವದ್ದು ಎಂಬುದು ಈ ಸಂದರ್ಭ ದಲ್ಲಿ ಮತ್ತೂಮ್ಮೆ ಸಾಬೀತಾಗಿದೆ.

ತಳಮಟ್ಟದ ಪ್ರತಿನಿಧಿಗಳಿವರು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಯಶಸ್ಸಿಗೆ ರೂಪಿಸಿರುವ ಕಾರ್ಯತಂತ್ರಗಳಾದ ಶಿಶು ಮರಣ ಮತ್ತು ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವಿಕೆ ಮತ್ತು ಆರೋಗ್ಯವರ್ಧಕ ಅಂಶಗಳ ಬಗ್ಗೆ ಸಮುದಾಯಕ್ಕೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಕೊಂಡಿಯಾಗಿ ಕಾರ್ಯನಿರ್ವಹಿಸುವ ಉದ್ದೇಶದೊಂದಿಗೆ ಆಶಾ ಕಾರ್ಯಕರ್ತೆಯರ ಸೇವೆ ಆರಂಭಗೊಂಡಿತ್ತು. ಇಂದು ಆಶಾ ಕಾರ್ಯ ಕರ್ತೆಯರು ಆರೋಗ್ಯ ಕ್ಷೇತ್ರದ ತಳಮಟ್ಟದ ಪ್ರತಿನಿಧಿಗಳಾಗಿ ಗುರುತಿಸಿ ಕೊಂಡಿದ್ದಾರೆ.

ರಾಜ್ಯದಲ್ಲಿ 62 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿದ್ದಾರೆ. ಅವರೆಲ್ಲರೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳ ಜತೆ ಕೆಲಸ ಮಾಡುತ್ತಿದ್ದಾರೆ. ಮಂಗಳೂರು ನಗರದ ಕೆಲವೆಡೆ ಹೋಂ ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವಸ್ತುಗಳಿಗೆ ಪರದಾಡುತ್ತಿರುವವರ ಮಾಹಿತಿ ನಮಗೆ ದೊರೆಯಿತು. ಕೂಡಲೇ ನಮ್ಮ ಸಂಪರ್ಕದಲ್ಲಿರುವ ಸೇವಾ ಸಂಸ್ಥೆಗಳ ಮೂಲಕ ನೆರವು ಒದಗಿಸಿಕೊಟ್ಟಿದ್ದೇವೆ.
– ಜಯಲಕ್ಷ್ಮೀ ಬಿ.ಆರ್‌., ರಾಜ್ಯಾಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರ ಸಂಘ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.