ಕೋವಿಡ್ ಸೋಂಕಿತ ಹತ್ತು ತಿಂಗಳ ಶಿಶು ಸಂಪೂರ್ಣ ಗುಣಮುಖ

Team Udayavani, Apr 11, 2020, 9:35 PM IST

ಕೋವಿಡ್ ಸೋಂಕಿತ ಹತ್ತು ತಿಂಗಳ ಶಿಶು ಸಂಪೂರ್ಣ ಗುಣಮುಖ

ಮಂಗಳೂರು: ಕೋವಿಡ್ 19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು  ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂಲಕ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ. ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ‌ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದೃಢಪಡದಿರುವುದೂ ಸಹ ಜಿಲ್ಲೆಯ ಮಟ್ಟಿಗೆ ಆಶಾದಾಯಕ ಸಂಗತಿಯೇ ಆಗಿದೆ.

10 ತಿಂಗಳ ಮಗುವಿನಲ್ಲಿ ಕೋವಿಡ್ ಸೋಂಕು ಪತ್ತೆಯಾದ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿ ಗಮನ ಸೆಳೆದಿತ್ತು ಮತ್ತು ಆತಂಕಕ್ಕೂ ಕಾರಣವಾಗಿತ್ತು. ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಪುಟ್ಟ ‌ಮಗುವಿನ‌ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು.

ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.

ಅದೇ ರೀತಿ ಈ ಮಗುವಿನ ಗ್ರಾಮದಲ್ಲಿ ಯಾರಿಗೂ ಕೋವಿಡ್ ಸೋಂಕು ಹರಡದಿರುವುದೂ ಸಹ ಸಮಾಧಾನಕರ ವಿಷಯವಾಗಿದೆ. ನವಜಾತ ಶಿಶುವಿನಲ್ಲಿ ಕೋವಿಡ್ ಸೊಂಕು ದೃಢಪಟ್ಟ ನಂತರ ಪೂರ್ತಿ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿತ್ತು.

ಈ ವಿಚಾರದಲ್ಲಿ ಗ್ರಾಮಸ್ಥರೂ ಸಹ ಜಿಲ್ಲಾಡಳಿತದೊಂದಿಗೆ ಉತ್ತಮ ಸಹಕಾರ ನೀಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ‌ ಒದಗಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿತ್ತು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.