718 ಮಂದಿ ಹಿರಿಯ ನಾಗರಿಕರಿಗೆ ಲಸಿಕೆ
Team Udayavani, Mar 12, 2021, 1:32 AM IST
ಮಂಗಳೂರು: ಕೋವಿಡ್ ನಿರೋಧಕ ಲಸಿಕೆ ಕೊವಿಶೀಲ್ಡ್ನ ಮೂರನೇ ಹಂತದಲ್ಲಿ ಲಸಿಕೆ ಪಡೆಯಲು ಹಿರಿಯ ನಾಗರಿಕರಲ್ಲಿ ಉತ್ಸಾಹ ಹೆಚ್ಚಾಗಿದೆ. ಮಾಚ್ 1ರಿಂದ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಗುರುವಾರ 60 ವರ್ಷ ಮೇಲ್ಪಟ್ಟ 718 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಅದೇ ರೀತಿ 273 ಮಂದಿ ಆರೋಗ್ಯ ಕಾರ್ಯಕರ್ತರು ಮೊದಲನೇ ಡೋಸ್, 922 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 6 ಮಂದಿ ಫ್ರಂಟ್ ಲೈನ್ ವರ್ಕರ್ ಮೊದಲನೇ ಡೋಸ್, 84 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಅನಾರೋಗ್ಯ ಹೊಂದಿರುವ 45 ರಿಂದ 60 ವರ್ಷದೊಳಗಿನ 80 ಮಂದಿ ಮತ್ತು 60 ವರ್ಷ ಮೇಲ್ಪಟ್ಟ 718 ಮಂದಿ ಹಿರಿಯ ನಾಗರಿಕರು ಲಸಿಕೆ ಪಡೆದಿದ್ದಾರೆ.
ಆಫ್ರಿಕಾ ವೈರಸ್: ಮುನ್ನೆಚ್ಚರಿಕೆ :
ಶಿವಮೊಗ್ಗ ಮೂಲದ ವ್ಯಕ್ತಿಗೆ ದಕ್ಷಿಣ ಆಫ್ರಿಕಾ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹರಡುವಿಕೆ ತಡೆಯುವ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ತಪಾಸಣ ಕಾರ್ಯ ಮುಂದುವರಿದಿದೆ. ವಿದೇಶಗಳಿಂದ ವಿಮಾನದ ಮೂಲಕ ಮಂಗಳೂರಿಗೆ ಬರುವವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊರೊನಾ ತಪಾಸಣೆ ನಡೆಸಿ ಮನೆಗೆ ಕಳುಹಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ