ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು
Team Udayavani, Sep 25, 2022, 12:42 AM IST
ಬೆಳ್ತಂಗಡಿ: ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತಡ್ಕ ನಿವಾಸಿ ಚೆನ್ನಕೇಶವ (28) ಅವರು ಮೃತಪಟ್ಟ ಘಟನೆ ಸೆ. 22ರಂದು ಸಂಭವಿಸಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಷ ಕಿರಣದ ಟೆಕ್ನಿಶಿಯನ್ ಆಗಿದ್ದ ಚೆನ್ನಕೇಶವ ಅವರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಅಜ್ಜಿ ಮನೆಯಾದ ಚಿಕ್ಕಮಗಳೂರಿಗೆ ಹೋಗಿ ದ್ದರು. ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದಕ್ಕೆ ಹೋಗುತ್ತಿದ್ದಾಗ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು