ಹೊಸ ವರ್ಷದ ಸಂಭ್ರಮ : ಧರ್ಮಸ್ಥಳ, ಕೊಲ್ಲೂರು ಸಹಿತ ಕರಾವಳಿ ದೇಗುಲಗಳಲ್ಲಿ ಜನಸಂದಣಿ
Team Udayavani, Jan 1, 2020, 11:37 PM IST
ಬೆಳ್ತಂಗಡಿ: ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತರ ದಟ್ಟಣೆ ಬುಧವಾರವೂ ಮುಂದುವರಿದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನ 50 ಸಾವಿರಕ್ಕೂ ಮಿಕ್ಕಿ ಭಕ್ತರು ದೇವರ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ 15 ಸಾವಿರ ಮಂದಿ ದೇವಿಯ ದರ್ಶನ ಪಡೆದರು.
ಹಲವು ಮಂದಿ ಪಾದಯಾತ್ರೆ ಸೇರಿದಂತೆ ಸೈಕಲ್ ಮೂಲಕವೂ ಧರ್ಮಸ್ಥಳಕ್ಕೆ ಬಂದು ಸೇವೆ ಸಲ್ಲಿಸಿದ್ದಾರೆ. ನೂರಾರು ಮಂದಿ ಮುಡಿ ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ಪುಣ್ಯಸ್ನಾನಗೈದರು. ದೇವರದರ್ಶನದ ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.
ಮಂಜೂಷಾ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ, ಬಾಹುಬಲಿ ಸ್ವಾಮಿ, ಅಣ್ಣಪ್ಪ ಬೆಟ್ಟ ವೀಕ್ಷಿಸಿದರು. ಬೆಂಗಳೂರಿನ ಭಕ್ತರಿಂದ ಪುಷ್ಪಾಲಂಕಾರ ಗಮನ ಸೆಳೆಯಿತು.
ಉಡುಪಿ ಶ್ರೀಕೃಷ್ಣ ಮಠ ಸೇರಿದಂತೆ ಕರಾವಳಿಯ ಇತರ ದೇಗುಲಗಳಲ್ಲಿಯೂ ಭಕ್ತರ ದಟ್ಟಣೆ ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು