ಮೊಬೈಲ್‌ನಲ್ಲಿಯೇ ಸಿಗಲಿದೆ ಸಿಆರ್‌ಝಡ್‌ ನಕ್ಷೆ

Team Udayavani, Aug 9, 2018, 3:32 PM IST

crz.jpg

ಮಂಗಳೂರು: ಕಡಲ ತೀರದಲ್ಲಿ ಕರಾವಳಿ ನಿಯಂತ್ರಣ ವಲಯ(ಸಿಆರ್‌ಝಡ್‌) ವ್ಯಾಪ್ತಿಯಲ್ಲಿ ಭೂಮಿ ಇದೆಯೇ? ಯಾವು ದಾದರೂ ಅಭಿವೃದ್ಧಿ ಕೈಗೊಳ್ಳಲು ಅನು ಮತಿ ಬೇಕೆ? ಸಿಆರ್‌ಝಡ್‌ ರೇಖೆ ಯಾವ ಭಾಗದಲ್ಲಿ ಹಾದು ಹೋಗಿದೆ? ಇತ್ಯಾದಿ ಮಾಹಿತಿ ಇನ್ನು ಮೊಬೈಲ್‌ ಆ್ಯಪ್‌ನಲ್ಲೇ ಲಭ್ಯ. 

ಸಾರ್ವಜನಿಕರು ಇದಕ್ಕಾಗಿ ಸರಕಾರಿ ಇಲಾಖೆಗಳಿಗೆ ಎಡತಾಕುವ ಅಗತ್ಯವಿಲ್ಲ. ಸಿಆರ್‌ಝಡ್‌ ನಕ್ಷೆಯ ಸಂಪೂರ್ಣ ಮಾಹಿತಿಯುಳ್ಳ ಮೊಬೈಲ್‌ ಆ್ಯಪ್‌ ಶೀಘ್ರವೇ ಬಿಡು ಗಡೆ ಯಾಗಲಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ ಇದನ್ನು ರೂಪಿಸುತ್ತಿದೆ.ಸಮುದ್ರದಿಂದ 500 ಮೀಟರ್‌ನ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಯಾವುದೇ ಚಟುವಟಿಕೆ ನಡೆಸಲು ಅಗತ್ಯವಿರುವ ಕಾನೂನು ಮಾಹಿತಿಯೂ ಆ್ಯಪ್‌ನಲ್ಲಿ ಲಭ್ಯವಿರಲಿದೆ. ಈ ಸಂಬಂಧ ಬೆಂಗಳೂರಿನ “ಕರ್ನಾಟಕ ಸ್ಟೇಟ್‌ ರಿಮೋಟ್‌ ಸೆನ್ಸಿಂಗ್‌ ಅಪ್ಲಿಕೇಷನ್‌ ಸೆಂಟರ್‌’ ನಿಂದ ಮಾಹಿತಿ ಪಡೆದು ಆ್ಯಪ್‌ ಸಿದ್ಧಪಡಿಸಲು ಚಿಂತಿಸಲಾಗಿದೆ.

“ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ-2011′ ಅನುಷ್ಠಾನ ಸಂಬಂಧ ಹೊಸ ಕರಡು ನಕ್ಷೆಯನ್ನು ಸಾರ್ವಜನಿಕರ ಅಭಿಪ್ರಾಯದಂತೆ ಪರಿಷ್ಕರಿಸಿ ಕೇಂದ್ರ ಸಚಿವಾಲಯಕ್ಕೆ ರಾಜ್ಯ ಸರಕಾರ ಸಲ್ಲಿಸಿದ್ದು ಅನು ಮೋದನೆ ದೊರಕಿದೆ. ಆದರೆ ನಕ್ಷೆ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ನಕ್ಷೆಗೆ ಅನುಮೋದನೆ ನೀಡುವ ಸಂದರ್ಭದಲ್ಲೇ ನಕ್ಷೆ ಕುರಿತ ಮಾಹಿತಿ ಹಾಗೂ ನಕ್ಷೆ ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಸಚಿವಾಲಯ ತಿಳಿಸಿದೆ ಇದರೊಂದಿಗೆ ವೆಬ್‌ಸೈಟ್‌ ರಚಿಸಲು ಸೂಚಿಸಲಾಗಿದೆ.

ಈಗಿರುವುದು 96ರ ನಕ್ಷೆ
ಪ್ರಸ್ತುತ ಕರಾವಳಿ ಕರ್ನಾಟಕದಲ್ಲಿ 1996ರ ಸಿಆರ್‌ಝಡ್‌ ಅಧಿಸೂಚನೆಯ ನಕ್ಷೆ ಜಾರಿಯಲ್ಲಿದ್ದು, 2011ರ ಹೊಸ ನಕ್ಷೆ ತಯಾ  ರಿಸು ವಂತೆ ದೇಶದ ಕರಾವಳಿ ತೀರದ ರಾಜ್ಯ ಗಳಿಗೆ ಸೂಚಿಸಲಾಗಿತ್ತು. ಕೇಂದ್ರ ಸಚಿ ವಾಲಯವು 2014ರ ಮಾ. 14ರಂದು ಚೆನ್ನೈಯ ನ್ಯಾಶನಲ್‌ ಸೆಂಟರ್‌ ಫಾರ್‌ ಸಸ್ಟನೇಬಲ್‌ ಕೋಸ್ಟಲ್‌ ಮ್ಯಾನೇಜ್‌ಮೆಂಟ್‌ (ಎನ್‌ಸಿಎಸ್‌ಸಿಎಂ) ಎಂಬ ಸಂಸ್ಥೆಯನ್ನು ಭರತ ರೇಖೆ (ಹೈಟೈಡ್‌ ಲೈನ್‌) ಹಾಗೂ ಇಳಿತ ರೇಖೆ (ಲೋ ಟೈಡ್‌ ಲೈನ್‌)ಗಳನ್ನು ಗುರುತಿಸಲು ಅಧಿಕೃತ ಸಂಸ್ಥೆಯನ್ನಾಗಿ ಆಯ್ಕೆ ಮಾಡಿತ್ತು. ರಾಜ್ಯದ ಕಡಲ ತೀರ ವಲಯ ನಿರ್ವಹಣಾ ಯೋಜನೆಗಳನ್ನು ತಯಾರಿಸಲು ರಾಜ್ಯ ಸರಕಾರವು ಎನ್‌ಸಿಎಸ್‌ಸಿಎಂಗೆ ಸೂಚಿಸಿತ್ತು. ಈ ಸಂಸ್ಥೆಯು, ರಾಜ್ಯದ ಕರಾವಳಿ ತೀರ ಅಧ್ಯಯನ, ಸ್ಥಳ ಪರಿಶೀಲನೆ ನಡೆಸಿ, ಕೆಲವು ತಿಂಗಳ ಹಿಂದೆ ಕರ್ನಾಟಕ ರಾಜ್ಯ ಕಡಲ ತೀರ ವಲಯ ನಿರ್ವಹಣಾ ಯೋಜನೆಯ ಕರಡು ಸಿದ್ಧಪಡಿಸಿತ್ತು. ಇದಕ್ಕೆ ಅನುಮೋದನೆ ದೊರಕಿದೆ. ಕರ್ನಾಟಕ ಹಾಗೂ ಒಡಿಶಾ ಮಾತ್ರ ಹೊಸ ನಕ್ಷೆ ಸಿದ್ಧಗೊಳಿಸಿ ಕೇಂದ್ರ ಸಚಿವಾಲಯಕ್ಕೆ ನೀಡಿವೆ.

9 ತಿಂಗಳಿಂದ ಸ್ಥಗಿತವಾಗಿದ್ದ ಎನ್‌ಒಸಿಗೆ ತಾತ್ಕಾಲಿಕ ಒಪ್ಪಿಗೆ
ಸಿಆರ್‌ಝಡ್‌ ನಕ್ಷೆ ಸಿದ್ಧವಾಗುವವರೆಗೆ “ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರ’ ನೀಡಲು ರಾಷ್ಟ್ರೀಯ ಹಸಿರು ನ್ಯಾಯಪೀಠವು ಕಳೆದ ನ. 22ರಂದು ನಿರ್ಬಂಧ ಹೇರಿತ್ತು. ಇದರಿಂದಾಗಿ ದ.ಕ. ಜಿಲ್ಲೆಯ ಸುಮಾರು 85 ಮತ್ತು ಉಡುಪಿಯ ಸುಮಾರು 120ರಷ್ಟು ಅರ್ಜಿಗಳು ಬಾಕಿ ಉಳಿದಿದ್ದವು. ಗೃಹ ನಿರ್ಮಾಣ ಚಟುವಟಿಕೆಗಳೂ ಸ್ಥಗಿತಗೊಂಡಿತ್ತು. ಆದರೆ  ರಾಜ್ಯದಿಂದ ಸಲ್ಲಿಕೆಯಾದ ನಕ್ಷೆಯನ್ನು ಮೇ 24ರಂದು ಕೇಂದ್ರ ಸರಕಾರ ಮೂಲ ರೂಪದಲ್ಲಿ ಅನುಮೋದಿಸಿ ಜು. 18ರಂದು ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯದ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ. ಆದರೆ ಆದೇಶ ಪ್ರತಿ ಇನ್ನಷ್ಟೇ ದೊರೆಯಬೇಕಿದೆ. ದ.ಕ. ಜಿಲ್ಲೆಯಲ್ಲಿ ಎನ್‌ಒಸಿ ಸಿಗದೆ ಸಮಸ್ಯೆ ಎದುರಾದ ಕಾರಣ ಬುಧವಾರದಿಂದ ತಾತ್ಕಾಲಿಕವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಪರಿಸರ ಇಲಾಖೆಯ ದ.ಕ. ಜಿಲ್ಲಾ ಪ್ರಾದೇಶಿಕ ನಿರ್ದೇಶಕರಾದ ಡಾ| ದಿನೇಶ್‌ ಕುಮಾರ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.