ದ.ಕ. ಸಿಆರ್‌ಝಡ್‌: ಇನ್ನೆರಡು ದಿನದಲ್ಲಿ ಪರ್ಮಿಟ್‌ 

Team Udayavani, Nov 20, 2018, 9:32 AM IST

crz.jpg

ಮಂಗಳೂರು: ಜಿಲ್ಲೆಯಲ್ಲಿ ಒಂದೆರಡು ದಿನಗಳಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವುದಕ್ಕೆ ಪರವಾನಿಗೆ ವಿತರಣೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಮೂರು ತಿಂಗಳಿನಿಂದ ಸಾಕಷ್ಟು ಗೊಂದಲ-ಚರ್ಚೆಗೆ ಎಡೆಮಾಡಿದ್ದ ಮರಳು ಸಮಸ್ಯೆ ಬಗೆಹರಿಯುವ ನಿರೀಕ್ಷೆ ಉಂಟಾಗಿದೆ.  

ನಾನ್‌-ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ನಿಯಮಾವಳಿಯಲ್ಲಿ ಕೊಂಚ ಸಡಿಲಿಕೆ ಮಾಡಿ ಈಗ ಮೂರನೇ ಬಾರಿ ಟೆಂಡರ್‌ ಕರೆದಿರುವ ಕಾರಣ ಹೆಚ್ಚು ಮಂದಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಎಲ್ಲ ಬ್ಲಾಕ್‌ಗಳಲ್ಲೂ ಮರಳು ತೆಗೆಯುವ ಕಾರ್ಯ ಆರಂಭಗೊಳ್ಳಬಹುದು.

ನಾನ್‌-ಸಿಆರ್‌ಝಡ್‌ನ‌ಡಿ ನೇತ್ರಾವತಿ, ಕುಮಾರ ಧಾರ ಹಾಗೂ ಗುಂಡ್ಯ ನದಿ ಪಾತ್ರಗಳಲ್ಲಿನ 15 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸುವ ಸಂಬಂಧ ನ.15ರಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯು ಟೆಂಡರ್‌ ಪ್ರಕಟನೆ ಹೊರಡಿಸಿದೆ. ಈ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲು ಒಂದೂವರೆ ತಿಂಗಳು ಬೇಕಾಗಿರುವ ಕಾರಣ ಅಲ್ಲಿಯ ವರೆಗೆ ನಾನ್‌ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದು. 

ಇನ್ನೆರಡು ದಿನಗಳಲ್ಲಿ ಪರವಾನಿಗೆ 
ಸಿಆರ್‌ಝಡ್‌ ವ್ಯಾಪ್ತಿಯ 12 ಮರಳು ದಿಣ್ಣೆಗಳಿಂದ ಮರಳು ತೆಗೆಯುವುದಕ್ಕೆ ಅನುಮೋದನೆ ನೀಡಿರುವ 76 ಜನರಿಗೆ ಪರವಾನಿಗೆ ವಿತರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ವಿತರಣೆಯಾಗಲಿದೆ ಎಂದು ಸಮಿತಿ ಸದಸ್ಯ ಕಾರ್ಯದರ್ಶಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಸುಮಿತ್ರಾ ತಿಳಿಸಿದ್ದಾರೆ.

 ಈಗ ಒಟ್ಟು 12 ದಿಣ್ಣೆಗಳಿಗೆ ಪರವಾನಿಗೆ ವಿತರಿಸುವ ಕಾರ್ಯ ಎರಡು ದಿನದಲ್ಲಿ ಶುರುವಾಗುವ ಸಾಧ್ಯತೆಯಿದೆ. ಪರವಾನಿಗೆ ವಿತರಣೆಯಾದ ಬಳಿಕ ಮರಳುಗಾರಿಕೆ ಪ್ರಾರಂಭವಾಗಲಿದ್ದು, ಅನಂತರ ಸಾರ್ವಜನಿಕರಿಗೂ ಅಗತ್ಯದಂತೆ ಮರಳು ವಿತರಣೆ  ಪ್ರಾರಂಭವಾಗಲಿದೆ ಎಂದು ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ನಾನ್‌ಸಿಆರ್‌ಝಡ್‌ನ‌ಲ್ಲಿ ಮತ್ತೆ ಟೆಂಡರ್‌
ನಾನ್‌ ಸಿಆರ್‌ಝಡ್‌ ವಲಯದಲ್ಲಿ ಒಟ್ಟು 22 ಬ್ಲಾಕ್‌ಗಳನ್ನು ಗುರುತಿಸಿ ಎರಡು ಬಾರಿ ಟೆಂಡರ್‌ ಕರೆಯಲಾಗಿತ್ತು. ಆದರೆ ನಿಯಮಾನುಸಾರ ಇಬ್ಬರು ಮಾತ್ರ ಅರ್ಹತೆ ಪಡೆದಿದ್ದರು. ಹೆಚ್ಚಿನ ಗುತ್ತಿಗೆದಾರರು ಭಾಗವಹಿಸುವುದಕ್ಕೆ ಷರತ್ತುಗಳಲ್ಲಿನ ಕೆಲವು ಅಂಶಗಳು ಅಡ್ಡಿಯಾಗಿದ್ದವು. ನಿಯಮಾವಳಿಯಲ್ಲಿ ಸಡಿಲಿಕೆ ಮಾಡಬೇಕೆಂದು ಗುತ್ತಿಗೆದಾರರಿಂದ ಬೇಡಿಕೆ ಕೇಳಿಬಂದಿತ್ತು. ಮನವಿಯ ಹಿನ್ನೆಲೆಯಲ್ಲಿ ಕೆಲವು ಷರತ್ತುಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಲಾಗಿದೆ. ಲೀಸ್‌ ಅವಧಿಯನ್ನು 5 ವರ್ಷಕ್ಕೆ ವಿಸ್ತರಿಸಲಾಗಿದೆ. ಅನುಮತಿಗೆ ವಾರ್ಷಿಕ ವಹಿವಾಟು ಮಿತಿಯನ್ನು 5 ಲಕ್ಷ ರೂ.ಗೆ ಇಳಿಸಲಾಗಿದೆ. ಹೀಗಾಗಿ ಪ್ರಸ್ತುತ ಕರೆದಿರುವ ಟೆಂಡರ್‌ನಲ್ಲಿ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಟೆಂಡರ್‌ಗೆ ಸಂಬಂಧಪಟ್ಟ ಪ್ರಕ್ರಿಯೆ ಪೂರ್ಣ ಗೊಂಡು ಡಿ.20ರ ಬಳಿಕ ಮರಳುಗಾರಿಕೆ ಆರಂಭ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. 

ಪರವಾನಿಗೆ ಇಳಿಕೆ; ಅತೃಪ್ತಿ
ಈ ಮಧ್ಯೆ ಮರಳು ಪರವಾನಿಗೆ ಸಂಖ್ಯೆಯನ್ನು ಇಳಿಕೆ ಮಾಡಿರುವುದಕ್ಕೆ ಮರಳು ಗುತ್ತಿಗೆದಾರರು ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಹಿಂದೆ ಇದ್ದ 462 ಪರವಾನಿಗೆಗಳನ್ನು ಬಳಿಕ ಸುಮಾರು 200ಕ್ಕೆ ಇಳಿಸಲಾಗಿತ್ತು. ಮತ್ತೆ ಕಡಿತಗೊಳಿಸಿ ಈ ಬಾರಿ ಒಟ್ಟು 76 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆಲವು ಮರಳು ಗುತ್ತಿಗೆದಾರರು ಈ ಬಗ್ಗೆ ಕಾನೂನು ಹೋರಾಟ ಮಾಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದಾದರೆ, ಜಿಲ್ಲೆಯಲ್ಲಿ ಮರಳು ಲಭ್ಯತೆ ಸಮಸ್ಯೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.