Dakshina Kannada: ಕೋವಿಡ್ನಿಂದ 1 ಸಾವು
Team Udayavani, Dec 26, 2023, 11:14 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮಂಗಳವಾರ ಒಬ್ಬರು ಸಾವನ್ನಪ್ಪಿದ್ದಾರೆ. ಒಟ್ಟು 392 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಮಂಗಳವಾರ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. ಸದ್ಯ 8 ಪ್ರಕರಣಗಳು ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್. 1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ ಹಲವು ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸುವಂತೆ ಆರೋಗ್ಯ ಸಚಿವರು ಈಗಾಗಲೇ ಸೂಚನೆ ನೀಡಿದ್ದರು. ಇದರಂತೆ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ.
ವೈದ್ಯರ ಸಭೆ: ಕೋವಿಡ್ ಮಾದರಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.
ದ.ಕ. ಜಿಲ್ಲೆಯ ಎಲ್ಲ ವೈದ್ಯಕೀಯ ವಿದ್ಯಾಲಯಗಳ ಪ್ರತಿನಿಧಿಗಳು, ತಾಲೂಕು ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲ ಪ್ರಾ.ಆ. ಕೇಂದ್ರಗಳ ವೈದ್ಯಾಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ