ದ.ಕ.: ಕೋವಿಡ್ 19ನಿಂದ ಮತ್ತೊಬ್ಬರ ಸಾವು ; ಉಡುಪಿ ಜಿಲ್ಲೆ : 28 ಪಾಸಿಟಿವ್‌

ಮಂಗಳವಾರ 83 ಹೊಸ ಪ್ರಕರಣ; 99 ಮಂದಿ ಬಿಡುಗಡೆ

Team Udayavani, Jul 8, 2020, 6:10 AM IST

ದ.ಕ.: ಕೋವಿಡ್ 19ನಿಂದ ಮತ್ತೊಬ್ಬರ ಸಾವು ; ಉಡುಪಿ ಜಿಲ್ಲೆ : 28 ಪಾಸಿಟಿವ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ 19 ಸೋಂಕಿಗೆ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 83 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಮೂಡುಬಿದಿರೆ ನಿವಾಸಿ 65 ವರ್ಷದ ವ್ಯಕ್ತಿ ಮೃತಪಟ್ಟವರು. ಈ ವ್ಯಕ್ತಿ ಮಧುಮೇಹ, ಹೃದಯ

ಸಂಬಂಧಿ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದು, ಜು. 3ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟರು. ಅವರ ಗಂಟಲ ದ್ರವ ಮಾದರಿ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.

ಕೋಟೆಬಾಗಿಲಿನಲ್ಲಿ ದಫ‌ನ
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಕೋವಿಡ್‌- 19ರ ಮಾರ್ಗಸೂಚಿಯಂತೆ ಕೋಟೆ ಬಾಗಿಲಿನಲ್ಲಿ ದಫನ ಮಾಡಲಾಯಿತು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಮೃತರ ಮನೆ ಮತ್ತು ಅವರ ಹತ್ತಿರದಲ್ಲಿರುವ ಸಂಬಂಧಿಕರೊಬ್ಬರ ಮನೆಯನ್ನು ಸೀಲ್‌ ಡೌನ್‌ ಮಾಡಲಾಯಿತು.

83 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಮಂಗಳವಾರ 83 ಮಂದಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ 48 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ, 21 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ಇಬ್ಬರಿಗೆ ಚಿಕ್ಕಮಗಳೂರಿಗೆ ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕು ಬಾಧಿಸಿದೆ. 3 ಮಂದಿಗೆ ರ್‍ಯಾಂಡಮ್‌ ಪರೀಕ್ಷೆ ವೇಳೆ, 3 ಮಂದಿಗೆ ಶಸ್ತ್ರಚಿಕಿತ್ಸೆಗೂ ಮುನ್ನ ಮತ್ತು ಓರ್ವರಿಗೆ ಹೆರಿಗೆಗೂ ಮುನ್ನ ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. 3 ಮಂದಿಯ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಪ್ರಾಥಮಿಕ ಸಂಪರ್ಕದಿಂದ 11 ತಿಂಗಳ ಗಂಡು ಮಗುವಿಗೂ ಕೊರೊನಾ ಬಾಧಿಸಿದೆ.

99 ಮಂದಿ ಬಿಡುಗಡೆ
ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 99 ಮಂದಿ ಕೊರೊನಾ ಮುಕ್ತರಾಗಿ ಮಂಗಳವಾರ ಬಿಡುಗಡೆಗೊಂಡಿದ್ದಾರೆ. ಇಲ್ಲಿಯವರೆಗೆ 683 ಮಂದಿ ಬಿಡುಗಡೆಗೊಂಡಿದ್ದು, 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 3 ಮಂದಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆ : 28 ಕೋವಿಡ್ 19 ಪಾಸಿಟಿವ್‌
ಜಿಲ್ಲೆಯಲ್ಲಿ ಮಂಗಳವಾರ 28 ಪಾಸಿಟಿವ್‌ ಪ್ರಕರಣ ದಾಖಲಾಗಿದೆ. 19 ಮಂದಿ ಪುರುಷರು ಹಾಗೂ 9 ಮಂದಿ ಮಹಿಳೆಯರಿಗೆ ಸೋಂಕು ಲಕ್ಷಣ ಕಾಣಿಸಿಕೊಂಡಿದೆ.

ವಿದೇಶದಿಂದ ಆಗಮಿಸಿದ ಓರ್ವ, ಅಂತರ್‌ ಜಿಲ್ಲೆ ಪ್ರಯಾಣದ 6 ಮಂದಿ, ಮಹಾರಾಷ್ಟ್ರದಿಂದ ಹಿಂದಿರುಗಿದ ಇಬ್ಬರು, ಉಳಿದ 19 ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದೆ. 216 ವರದಿಗಳು ನೆಗೆಟಿವ್‌ ಬಂದಿದ್ದು, 2,627 ವರದಿ ಬರಲು ಬಾಕಿಯಿವೆ.

ಮಂಗಳವಾರ ಒಟ್ಟು 44 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯುಳ್ಳ 11 ಪುರುಷರು, ಇಬ್ಬರು ಮಹಿಳೆಯರು, ಸೋಂಕಿಂತರ ಸಂಪರ್ಕವುಳ್ಳ ಮೂವರು ಮಹಿಳೆಯರು, ಫ್ಲ್ಯೂ ಜ್ವರ ಲಕ್ಷಣವುಳ್ಳ 11 ಪುರುಷರು, 10 ಮಂದಿ ಮಹಿಳೆಯರು ಸಹಿತ ಒಟ್ಟು 37 ಮಂದಿ ಐಸೊಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯುಳ್ಳ ಇಬ್ಬರು, ಸೋಂಕಿತರ ಸಂಪರ್ಕವುಳ್ಳ 23, ಹಾಟ್‌ಸ್ಪಾಟ್‌ ಸಂಪರ್ಕದ 1,194 ಸಹಿತ ಒಟ್ಟು 1,231 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಕೋಟದ ಹೊಟೇಲ್‌ ಮಾಲಕರ ಕುಟುಂಬ ಸದಸ್ಯರಿಗೆ ಪಾಸಿಟಿವ್‌ ಇಲ್ಲ ಎಂದು ತಿಳಿದುಬಂದಿದೆ.

ಕಾಸರಗೋಡು: 13 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಮಂಗಳವಾರ 13 ಮಂದಿಗೆ ಕೊವಿಡ್ 19 ಸೋಂಕು ದೃಢಗೊಂಡಿದೆ. ವಿದೇಶದಿಂದ ಬಂದ 8 ಮಂದಿ, ಬೆಂಗಳೂರಿನಿಂದ ಬಂದ ಇಬ್ಬರಿಗೆ, ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರಿಗೆ, ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಗರ್ಭಿಣಿ ಮಹಿಳೆಗೆ ರೋಗ ಬಾಧಿಸಿದೆ.

272 ಮಂದಿಗೆ ಸೋಂಕು
ರಾಜ್ಯದಲ್ಲಿ ಮಂಗಳವಾರ 272 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. ಇದೇ ಸಂದರ್ಭದಲ್ಲಿ 111 ಮಂದಿ ರೋಗ ಮುಕ್ತರಾಗಿದ್ದಾರೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

184 ಮಂದಿ ವಿರುದ್ಧ ಕೇಸ್‌
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಜಿಲ್ಲೆಯಲ್ಲಿ 184 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಕೊಡಗಿನಲ್ಲಿ ಹೆಚ್ಚಿದ ಆತಂಕ ಮತ್ತೆ¤ 14 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಕೋವಿಡ್ 19 ಆತಂಕ ಹೆಚ್ಚುತ್ತಿದ್ದು, ಮಂಗಳವಾರ 14 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದ್ದು, 10 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 81 ಮಂದಿ ಆಸ್ಪತ್ರೆಯಲ್ಲಿದ್ದಾರೆ. ಜಿಲ್ಲೆಯ ಗಡಿ ಭಾಗಗಳಾದ ಕರಿಕೆ, ಪೆರುಂಬಾಡಿ, ತಿತಿಮತಿ ಗ್ರಾಮಗಳಲ್ಲೂ ಕೋವಿಡ್‌-19ರ ಸೋಂಕು ಆವರಿಸಿದೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.