ಮಂಗಳೂರು: ಚಿನ್ನದ ಸರ ಸುಲಿಗೆ ಪ್ರಕರಣ… ಪೊಲೀಸ್ ಕಾನ್‌ಸ್ಟೆಬಲ್ ನಿರ್ದೋಷಿ
Team Udayavani, Jan 30, 2023, 10:44 PM IST
ಮಂಗಳೂರು: ಮಹಿಳೆಯ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್ ನಿರ್ದೋಷಿ ಎಂದು ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸಂದೇಶ ದೋಷಮುಕ್ತರಾದವರು. ಅವರು 2016ರ ಎ.12ರಂದು ಮಂಗಳೂರಿಗೆ ಆಗಮಿಸಿದ್ದರು. ಆ ವೇಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶ್ರೀ ದೇವಿ ಕಾಲೇಜು ಕಡೆಗೆ ಹೋಗುವ ರಸ್ತೆಯಲ್ಲಿ ಮಹಿಳೆಯೋರ್ವರಲ್ಲಿ ಕುಡಿಯಲು ನೀರು, ಪೋನ್ ನಂಬರ್ ಕೇಳುವ ನೆಪದಲ್ಲಿ ಆಕೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ ಮಾಡಲು ಯತ್ನಿಸಿದ್ದರು. ಆ ವೇಳೆ ಮಹಿಳೆ ದೂಡಿ ಹಾಕಿದ್ದರು. ಆಗ ಆರೋಪಿ ಸಂದೇಶ ಮಹಿಳೆಯನ್ನು ಗಾಯಗೊಳಿಸಿ ಚಿನ್ನದ ಸರದ ತುಂಡುಗಳನ್ನು ಸುಲಿಗೆ ಮಾಡಿದ್ದರೆಂದು ಆರೋಪಿಸಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ ಅವರು ಆರೋಪಿ ಸಂದೇಶ್‌ನನ್ನು ನಿರ್ದೋಷಿ ಎಂದು ಸೋಮವಾರ ತೀರ್ಪು ನೀಡಿದ್ದಾರೆ. ಅರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಜಗದೀಶ್ ಕೆ.ಆರ್ ಮತ್ತು ಪ್ರಸಾದ್ ಪಾಲನ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ
ನೇಕಾರ ಸಮ್ಮಾನ್ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ