ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ  ತರಗತಿ ಆರಂಭಿಸದಂತೆ ಡಿಸಿ ಸೂಚನೆ


Team Udayavani, Aug 27, 2021, 6:33 AM IST

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ  ತರಗತಿ ಆರಂಭಿಸದಂತೆ ಡಿಸಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ. 2.4ರಷ್ಟಿರುವ ಕಾರಣ ಸೆಪ್ಟಂಬರ್‌ 15ರ ವರೆಗೆ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‌ಲೈನ್‌ ಮೂಲಕ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿ ಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪಾಸಿಟಿವಿಟಿ ಸೂಚ್ಯಂಕ ಸೆ. 15ರೊಳಗೆ ಕಡಿಮೆಯಾದಲ್ಲಿ ಮತ್ತೂಮ್ಮೆ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿ ಪ್ರಾರಂಭಿಸಲು ಚರ್ಚಿಸಿ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‌ ಪ್ರಕಾರ ಕೋವಿಡ್‌ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕವೇ ತರಗತಿಗಳನ್ನು ನಡೆಸಬೇಕು ಎಂದು  ಸೂಚನೆ ನೀಡಿದರು.

ಕಾಲೇಜಿನ ಬೋಧಕ ಮತ್ತು ಬೋಧ‌ಕೇತರ ಸಿಬಂದಿ ಕಡ್ಡಾಯವಾಗಿ ಕೋವಿಡ್‌ ನಿರೋಧಕ ಲಸಿಕೆ ಪಡೆದಿರಬೇಕು. ಪಡೆಯದ ಸಿಬಂದಿಯ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು ಎಂದು ಸೂಚಿಸಿದ ಅವರು, ನೆಟ್‌ವರ್ಕ್‌ ಸಮಸ್ಯೆಯಿಂದ ಗ್ರಾಮೀಣ ಕೆಲವು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ. ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹವರಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.

ಎಡಿಸಿ ಡಾ| ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿ.ವಿ. ಕುಲಸಚಿವ ಕಿಶೋರ್‌ ಕೆ., ಕಾಲೇಜು ಶಿಕ್ಷಣ ವಿಶೇಷ ಅಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿ.ವಿ. ನೋಡಲ್‌ ಅಧಿಕಾರಿ ಡಾ| ದಾನೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.