15 ಕೋ.ರೂ. ವೆಚ್ಚದ ಧರ್ಮಸ್ಥಳ ಚತುಷ್ಪಥ ರಸ್ತೆ ಲೋಕಾರ್ಪಣೆಗೊಳಿಸಿದ ಡಿಸಿಎಂ ಕಾರಜೋಳ
Team Udayavani, Feb 7, 2021, 12:44 PM IST
ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಸಂದರ್ಶಿಸುವ ಭಕ್ತರ ಅನುಕೂಲಕ್ಕಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ 15 ಕೋ.ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಯನ್ನು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಲೋಕಾರ್ಪಣೆಗೊಳಿಸಿದರು.
ಇದನ್ನೂ ಓದಿ:ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
ಲೋಕೋಪಯೋಗಿ ಇಲಾಖೆಯಿಂದ ಸುಮಾರು 15 ಕೋ.ರೂ. ಮೊತ್ತದಲ್ಲಿ 2 ಕಿ.ಮೀ. ಚತುಷ್ಪಥ ರಸ್ತೆಗೆ ನಿರ್ಮಾಣಗೊಂಡಿದೆ. ಧರ್ಮಸ್ಥಳ ಸ್ನಾನಘಟ್ಟ ಸಮೀಪದಿಂದ ಶ್ರೀ ಕ್ಷೇ.ಧ.ಪ್ರೌಢ ಶಾಲೆವರೆಗೆ ಚತುಷ್ಪಥ ರಸ್ತೆ ನಿರ್ಮಿಸಲಾಗಿದೆ 7.50 ರಂತೆ ಎರಡು ಬದಿ ಒಟ್ಟು 15 ಮೀಟರ್ ಅಗಲವಾದ ರಸ್ತೆ ಮಧ್ಯ 2.50 ಮೀಟರ್ ಗಾರ್ಡನಿಂಗ್ ಗಾಗಿ ಮೀಡಿಯನ್ (ಡಿವೈಡರ್) ನಿರ್ಮಿಸಲಾಗಿದೆ.
ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿ.ಜೆ.ಪಿ. ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ತಾ.ಪಂ. ಸದಸ್ಯೆ ಧನಲಕ್ಷ್ಮೀ, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ., ತಾ. ಪಂ.ಇ.ಒ. ಕುಸುಮಾಧರ್ ಕೆ., ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಬಿ.ಜೆ.ಪಿ. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ