ಕೋವಿಡ್‌ ಪ್ರಮಾಣ ಇಳಿಮುಖ; ಆಸ್ಪತ್ರೆಯಲ್ಲಿ 95 ಮಂದಿಗಷ್ಟೇ ಚಿಕಿತ್ಸೆ

ದಕ್ಷಿಣ ಕನ್ನಡ ಜಿಲ್ಲೆ: ಒಂದು ವಾರದಲ್ಲಿ ಶೇ.0.42ರಷ್ಟು ಪಾಸಿಟಿವಿಟಿ ದರ

Team Udayavani, Oct 20, 2021, 4:43 AM IST

ಕೋವಿಡ್‌ ಪ್ರಮಾಣ ಇಳಿಮುಖ; ಆಸ್ಪತ್ರೆಯಲ್ಲಿ 95 ಮಂದಿಗಷ್ಟೇ ಚಿಕಿತ್ಸೆ

ಸಾಂದರ್ಭಿಕ ಚಿತ್ರ.

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೋವಿಡ್‌ ದಿನದ ಪ್ರಕರಣ ಇಳಿಮುಖಗೊಳ್ಳುತ್ತಿದ್ದು, ಹೆಚ್ಚಿನ ಮಂದಿ ಗೃಹ ನಿಗಾವಣೆಯಲ್ಲಿದ್ದು, ಕೇವಲ 95 ಮಂದಿಯಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸದ್ಯ 315 ಮಂದಿ ಯಲ್ಲಿ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 211 (ಶೇ.66.98) ಮಂದಿ ಗೃಹ ನಿಗಾವಣೆ ಯಲ್ಲಿದ್ದಾರೆ. 95 (ಶೇ.30.16)ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 (ಶೇ.2.86) ಮಂದಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಗುಣಮುಖ ಗೊಳ್ಳುತ್ತಿರುವವರ ದರ ಏರಿಕೆ ಯಾಗುತ್ತಿದ್ದು, ಸದ್ಯ ಶೇ.98.27ರಷ್ಟು ರಿಕವರಿ ದರ ಇದೆ. ಸಾವಿನ ದರ ಶೇ.1.46ರಷ್ಟಿದ್ದು, ಒಂದು ವಾರದಲ್ಲಿ ಶೇ.0.42ರಷ್ಟು ಪಾಸಿಟಿವಿಟಿ ದರ ಜಿಲ್ಲೆಯಲ್ಲಿ ದಾಖಲಾಗಿದೆ.

ಕೋವಿಡ್‌ ಮೊದಲ ಅಲೆಗೆ ಹೋಲಿ ಸಿದರೆ ಎರಡನೇ ಅಲೆಯ ತೀವ್ರತೆ ಹೆಚ್ಚಿತ್ತು. ಜಿಲ್ಲೆಯಲ್ಲಿ 2021ರ ಮಾರ್ಚ್‌ 1ರಿಂದ ಈವರೆಗೆ ಒಟ್ಟು 80,667 ಮಂದಿಗೆ ಕೋವಿಡ್‌ ತಗುಲಿ 935 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಪ್ರಕರಣದ ಅರ್ಧದಷ್ಟು ಕೋವಿಡ್‌ ಪ್ರಕರಣ ಮಂಗಳೂರಿನಲ್ಲಿಯೇ ದಾಖಲಾಗಿದೆ.

41,061 ಮಂದಿಗೆ ಕೋವಿಡ್‌ ದೃಢಪಟ್ಟು 414 ಸಾವು, ಬಂಟ್ವಾಳ ತಾಲೂಕಿನಲ್ಲಿ 10,406 ಪ್ರಕರಣ, 138 ಸಾವು, ಪುತ್ತೂರಿ ನಲ್ಲಿ 8,495 ಮಂದಿಗೆ ಕೋವಿಡ್‌ 86 ಸಾವು, ಬೆಳ್ತಂಗಡಿಯಲ್ಲಿ 12,300 ಪ್ರಕರಣ, 100 ಸಾವು, ಸುಳ್ಯದಲ್ಲಿ 5,904 ಮಂದಿಗೆ ಕೋವಿಡ್‌ ದೃಢಪಟ್ಟು 46 ಮಂದಿ ಸಾವನ್ನಪ್ಪಿ ದ್ದಾರೆ. ಹೊರ ಜಿಲ್ಲೆಯಲ್ಲಿ 2,501 ಮಂದಿಗೆ ಕೋವಿಡ್‌ ದಾಖಲಾಗಿ 151 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

ಮಂಗಳೂರಲ್ಲಿ ಅಧಿಕ; ಸುಳ್ಯದಲ್ಲಿ ಕಡಿಮೆ
ದ.ಕ. ಜಿಲ್ಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳಲ್ಲಿ ಮಂಗಳೂರು ನಗರದಲ್ಲೇ ಅತ್ಯಧಿಕ ಕೋವಿಡ್‌ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 315 ಸಕ್ರಿಯ ಪ್ರರಕಣ ಇದ್ದು, ಮಂಗಳೂರು ನಗರದಲ್ಲಿ 128 ಮಂದಿ, ಗ್ರಾಮೀಣ ಭಾಗದಲ್ಲಿ 69, ಬಂಟ್ವಾಳ ತಾಲೂಕಿನಲ್ಲಿ 36, ಪುತ್ತೂರಿನಲ್ಲಿ 29, ಬೆಳ್ತಂಗಡಿಯಲ್ಲಿ 22, ಸುಳ್ಯದಲ್ಲಿ 10 ಮತ್ತು ಹೊರ ಜಿಲ್ಲೆಯಲ್ಲಿ 21 ಪ್ರಕರಣಗಳಿವೆ.

ಮಾರ್ಗಸೂಚಿ ಪಾಲಿಸಿ
ದ.ಕ. ಜಿಲ್ಲೆಯಲ್ಲಿ ಕೋವಿಡ್‌ ದಿನದ ಪ್ರಕರಣ ದಿನದಿಂದ ದಿನಕ್ಕೆ ಇಳಿಮುಖಗೊಳ್ಳುತ್ತಿದೆ. ಆದರೂ ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿ ಪಾಲನೆ ಅಗತ್ಯ. ಸಮಾರಂಭ ಗಳಲ್ಲಿ, ಅಂಗಡಿಗಳಲ್ಲಿ ಗುಂಪು ಸೇರಬೇಡಿ, ಪ್ರತಿಯೊಬ್ಬರೂ ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಮಾಡಿ. ಯಾರೆಲ್ಲಾ ಕೋವಿಡ್‌ ಲಸಿಕೆ ಪಡೆದುಕೊಂಡಿಲ್ಲವೋ ಅವರು ಕೂಡಲೇ ಪಡೆದುಕೊಳ್ಳಿ. ಕೋವಿಡ್‌ ಲಕ್ಷಣ ಕಂಡು ಬಂದರೆ ಕೂಡಲೇ ಸಂಬಂಧಪಟ್ಟ ವೈದ್ಯರ ಗಮನಕ್ಕೆ ತರಬೇಕು.
-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.