ಕರಾವಳಿಯಲ್ಲಿ ಡೆಂಗ್ಯೂ ಡಂಗುರ! ಮುನ್ನೆಚ್ಚರಿಕೆ ಅಗತ್ಯ, ನಿರ್ಲಕ್ಷ್ಯ ಸಲ್ಲದು


Team Udayavani, Sep 24, 2022, 10:44 AM IST

dengue

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಪ್ರತಿಕೂಲ ಹವಾ ಮಾನದ ಪರಿಣಾಮ ಡೆಂಗ್ಯೂ ಸೋಂಕು ತನ್ನ ಕಬಂಧಬಾಹು ವಿಸ್ತರಿಸುತ್ತ ಆತಂಕ ಸೃಷ್ಟಿಸಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ದಾಖಲೆಯತ್ತ ಮುನ್ನುಗ್ಗುತ್ತಿದೆ.

ದ.ಕ. ಜಿಲ್ಲೆಯಲ್ಲಿ ಈ ವರ್ಷ 272 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಇದರಲ್ಲಿ 110 ಪ್ರಕರಣ ಮಂಗಳೂರು ಪಾಲಿಕೆ ವ್ಯಾಪ್ತಿಯದ್ದು. ಆರೋಗ್ಯ ಇಲಾಖೆಯ ಅಂಕಿ ಅಂಶದ ಹೊರತಾ ಗಿಯೂ ಕೆಲವೊಂದು ಪ್ರಕರಣಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ಅದು ವರದಿಯಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಇಷ್ಟರವರೆಗೆ 456 ಮಂದಿಗೆ ಡೆಂಗ್ಯೂ ಕಾಣಿಸಿಕೊಂಡಿದೆ.

ಡೆಂಗ್ಯೂ ಹರಡುವುದು ಹೇಗೆ?
ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಸೋಂಕು ಹರಡುತ್ತದೆ. ರಕ್ತ ನಾಳಗಳಿಗೆ ಈ ವೈರಸ್‌ ಹಾನಿ ಉಂಟು ಮಾಡುತ್ತದೆ. ಈ ಸೊಳ್ಳೆ ಹಗಲಿನ ಸಮಯದಲ್ಲಿಯೇ ಕಡಿಯುತ್ತದೆ. ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಅಗತ್ಯ. ಬಿಟ್ಟು ಬಿಟ್ಟು ಮಳೆ ಬರುವ ಕಾರಣ ಮನೆಯ ಸುತ್ತಮುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲಿ ಲಾರ್ವಾ ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ.

ರೋಗ ಲಕ್ಷಣಗಳೇನು?
ಡೆಂಗ್ಯೂ ಜ್ವರ ಉಂಟಾದ ತತ್‌ಕ್ಷಣ ಮಕ್ಕಳು ಅಥವಾ ದೊಡ್ಡವರಲ್ಲಿ ರೋಗ ಲಕ್ಷಣ ಹೆಚ್ಚಾಗಿ ಕಂಡುಬರುವುದಿಲ್ಲ. ಆದರೆ ದಿನ ಕಳೆದಂತೆ ಏಳು ದಿನಗಳ ಬಳಿಕ ಒಂದೊಂದು ಲಕ್ಷಣ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ತಲೆನೋವು, ಮೈ ಕೈ ನೋವು, ಕೀಲು ನೋವು, ವಾಕರಿಕೆ, ವಾತ, ತುರಿಕೆ, ಕಣ್ಣುಗಳ ಹಿಂಭಾಗ ನೋವು, ದೇಹದ ಅಲ್ಲಲ್ಲಿ ಕಲೆಗಳು ಕಾಣಿಸಿಕೊಳ್ಳುತ್ತವೆ.

ಸಾರ್ವಜನಿಕರು ಏನು ಮಾಡಬೇಕು?
ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿಸಿದ ಯಾರೂ ಕೂಡ ತಣ್ಣೀರನ್ನು ಕುಡಿಯಬಾರದು. ಸ್ನಾನಕ್ಕೂ ಬಿಸಿನೀರನ್ನು ಉಪಯೋಗಿಸಬೇಕು. ತಲೆ ಮೇಲೆ ನೀರು ಹಾಕಿಕೊಂಡಾಗ ಶೀತ ಅಧಿಕವಾಗಿ ಜ್ವರ, ತಲೆನೋವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜ್ವರ ಕಡಿಮೆಯಾಗುವವರೆಗೆ ತಲೆ ಸ್ನಾನ ಮಾಡದಿರುವುದೇ ಉತ್ತಮ ಎನ್ನುತ್ತಾರೆ ವೈದ್ಯರು.

ಲಾರ್ವಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿ ಸಹಿತ, ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯಿಂದ ಮನೆ ಮನೆ ಸರ್ವೇ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಮಲೇರಿಯ ನಿಯಂತ್ರಣ ಕಾರ್ಯಕರ್ತರು, ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎಂಪಿಡಬ್ಲೂ$Â ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಈಡೀಸ್‌ ಸೊಳ್ಳೆ ಉತ್ಪಾದನ ತಾಣಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾಹಿತಿ ನೀಡುತ್ತಿದ್ದಾರೆ.

ನಿರ್ಲಕ್ಷ್ಯ ಸಲ್ಲದು
ಡೆಂಗ್ಯೂ ನಿರ್ಮೂಲನೆಗೆ ಆರೋಗ್ಯ ಇಲಾಖೆಯ ಜತೆಗೆ ಸಾರ್ವಜನಿಕರ ಸಹಕಾರವು ಅಗತ್ಯ. ಡೆಂಗ್ಯೂ ತಡೆಯುವ ನಿಟ್ಟಿನಲ್ಲಿ ಲಾರ್ವಾ ಸರ್ವೇ ನಡೆಯುತ್ತಿದೆ. ಡೆಂಗ್ಯೂ ಹರಡುವ ಲಾರ್ವಾ ಉತ್ಪತ್ತಿಯಾಗುವುದೇ ನಿಂತಿರುವ ಶುದ್ಧ ನೀರಿನಲ್ಲಿ. ಮನೆ ಸುತ್ತಮುತ್ತ ನೀರು ನಿಲ್ಲಿಸದಂತೆ ನೋಡಿಕೊಳ್ಳಬೇಕು. ಯಾವುದೇ ಜ್ವರವನ್ನು ನಿರ್ಲಕ್ಷ್ಯ ಮಾಡಬಾರದು.
– ಡಾ| ನವೀನ್‌ಚಂದ್ರ ಕುಲಾಲ್‌, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಮುನ್ನೆಚ್ಚರಿಕೆ ಕ್ರಮಗಳು
– ಹವಾಮಾನ ಬದಲಾವಣೆ ಕಾರಣದಿಂದಾಗಿ ಡೆಂಗ್ಯೂ, ಮಲೇರಿಯದಂತಹ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಕ್ಕೆ ಜನರೇ ಜಾಗೃತರಾಗಬೇಕಿದೆ.
– ಮನೆಯ ಸುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ
– ಸಾಮಾನ್ಯ ಜ್ವರವನ್ನೂ ನಿರ್ಲಕ್ಷಿಸದೆ ಹತ್ತಿರದ ವೈದ್ಯರನ್ನು ಭೇಟಿಯಾಗಿ
– ಕಿಟಕಿಗಳನ್ನು ಮುಚ್ಚಿ, ಕಿಟಕಿಗೆ ಸೊಳ್ಳೆ ಪರದೆ ಉಪಯೋಗಿಸಿ
– ನೀರಿನ ಸಂಗ್ರಹಕ್ಕೆ ಭದ್ರವಾದ ಮುಚ್ಚಿದ ವ್ಯವಸ್ಥೆ ಇರಬೇಕು, ಟಯರ್‌, ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಬೇಕು.
– ತೊಟ್ಟಿ, ಡ್ರಮ್‌ಗಳಲ್ಲಿ 2 ರಿಂದ 3 ದಿನಗಳಿಗೊಮ್ಮೆ ನೀರು ಬದಲಾಯಿಸಿ ಸ್ವತ್ಛಗೊಳಿಸಿ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.