ಭಕ್ತ ಜನಸಾಗರವಾದ ಉಜಿರೆ-ಧರ್ಮಸ್ಥಳ ರಾಜಮಾರ್ಗ


Team Udayavani, Dec 3, 2018, 12:05 PM IST

3-december-6.gif

ಬೆಳ್ತಂಗಡಿ: ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸನ್ನಿಧಿಯ ಲಕ್ಷದೀಪೋತ್ಸವದ ಮೊದಲ ದಿನವಾದ ರವಿವಾರ ಭಕ್ತರಿಂದ ಉಜಿರೆ-ಧರ್ಮಸ್ಥಳ ದವರೆಗೆ ಬೃಹತ್‌ ಪಾದಯಾತ್ರೆ ನಡೆಯಿತು. ಪಾದಯಾತ್ರೆ ಸಮಿತಿಯು 6ನೇ ವರ್ಷದಲ್ಲಿ ಆಯೋಜಿಸಿದ ಪಾದಯಾತ್ರೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಹೊರಟು, ಸುಮಾರು 8 ಕಿ.ಮೀ. ದೂರದ ಧರ್ಮಸ್ಥಳಕ್ಕೆ 10 ಸಾವಿರಕ್ಕೂ ಅಧಿಕ ಭಕ್ತರು ಹೆಜ್ಜೆ ಹಾಕಿದರು. ಭಕ್ತರು ಭಜನೆ ಸಹಿತ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಗುಣಗಾನ ಮಾಡುತ್ತಾ ಸಾಗಿದರು.

ಭಕ್ತರ ಬಾಯಾರಿಕೆಯನ್ನು ತಣಿಸುವ ನಿಟ್ಟಿನಲ್ಲಿ ಅಲ್ಲಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿತ್ತು. ರಸ್ತೆಯುದ್ದಕ್ಕೂ ಸಾಗಿದ ಭಕ್ತಸಮೂಹ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ನೀಡದೆ ಅತ್ಯಂತ ಶಿಸ್ತಿನಿಂದ ಕ್ಷೇತ್ರವನ್ನು ತಲುಪಿತು.

ಪಾದಯಾತ್ರೆಗೆ ಚಾಲನೆ
ಉಜಿರೆ ದೇವಸ್ಥಾನದಲ್ಲಿ ಅಲ್ಲಿನ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಅವರು ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಬಿ. ಯಶೋವರ್ಮ, ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅವರ ಜತೆಗೂಡಿ ಪಾದಯಾತ್ರೆಗೆ ಚಾಲನೆ ನೀಡಿದರು. ಚಾಲನೆಯ ಸಂದರ್ಭ ಶ್ರೀಕ್ಷೇತ್ರ ಧ.ಗ್ರಾ. ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ….ಎಚ್‌. ಮಂಜುನಾಥ್‌, ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಎಪಿಎಂಸಿ ಅಧ್ಯಕ್ಷ ಕೇಶವ ಬೆಳಾಲು, ಜಿ.ಪಂ. ಸದಸ್ಯರಾದ ಧರಣೇಂದ್ರಕುಮಾರ್‌, ಸೌಮ್ಯಲತಾ, ಪ್ರಮುಖರಾದ ಪ್ರತಾಪಸಿಂಹ ನಾಯಕ್‌, ವಸಂತ ಸಾಲ್ಯಾನ್‌, ಪೀತಾಂಬರ ಹೇರಾಜೆ, ಇಚ್ಚಿಲ ಸುಂದರ ಗೌಡ, ರಾಜಶೇಖರ ಅಜ್ರಿ, ಜಯಂತ ಕೋಟ್ಯಾನ್‌, ಪಿ.ಕೆ. ರಾಜು ಪೂಜಾರಿ, ರಾಜೇಶ್‌ ಪೈ, ಮೋಹನ್‌, ಪ್ರಭಾಕರ ಗೌಡ, ಶರತ್‌ ಕೃಷ್ಣ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.

ಸ್ತಬ್ಧಚಿತ್ರ, ಸ್ವಾಮಿಯ ಭಾವಚಿತ್ರ
ಪಾದಯಾತ್ರೆಯಲ್ಲಿ ಭಕ್ತರ ಜತೆಗೆ ಶಿವನ ಮೂರ್ತಿಯನ್ನೊಳಗೊಂಡ ಸ್ತಬ್ಧಚಿತ್ರ, ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರಗಳು, ಡಾ| ಹೆಗ್ಗಡೆ ದಂಪತಿಯ ಭಾವಚಿತ್ರದ ವಾಹನಗಳು ಸಾಗಿದವು. ಪಾನೀಯ ಕುಡಿದು ಲೋಟವನ್ನು ಹಾಕುವುದಕ್ಕಾಗಿ ಸೂಕ್ತ ಬುಟ್ಟಿಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪಾದಯಾತ್ರೆಯ ಸಂದರ್ಭದಲ್ಲಿ ಪಾದಯಾತ್ರಿಗಳಿಗೆ ತೊಂದರೆಯಾದಲ್ಲಿ ಆ್ಯಂಬುಲೆನ್ಸ್‌ ವ್ಯವಸ್ಥೆ, ವಾಹನ-ಭಕ್ತರ ನಿಯಂತ್ರಣಕ್ಕೆ ಪೊಲೀಸ್‌ ಭದ್ರತೆ, ಅಚ್ಚುಕಟ್ಟಿನ ಸ್ವಯಂಸೇವಕ ತಂಡಗಳನ್ನು ವ್ಯವಸ್ಥೆಗೊಳಿಸಲಾಗಿತ್ತು.

ಹೆಚ್ಚಿನ ಸಂಖ್ಯೆಯ ಭಕ್ತರು
ಲಕ್ಷದೀಪೋತ್ಸವದ ಮೊದಲ ದಿನವಾದ ರವಿವಾರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಕ್ಷೇತ್ರವನ್ನು ಪೂರ್ತಿ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ಬೀದಿಗಳಲ್ಲಿ ಸಾಕಷ್ಟು ಸಂಖ್ಯೆಯ ಸಂತೆ-ಅಂಗಡಿ ಮುಂಗಟ್ಟುಗಳು ಕಂಡುಬಂದವು. ಜತೆಗೆ ಡಿ. 3ರಂದು ಕಾರ್ತಿಕ ಸೋಮವಾರ ಪುಣ್ಯದಿನವಾಗಿದ್ದು, ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಇಂದಿನ ಕಾರ್ಯಕ್ರಮ
ಧರ್ಮಸ್ಥಳ ಕ್ಷೇತ್ರದ ಲಕ್ಷದೀಪೋತ್ಸವದಲ್ಲಿ ಡಿ.3ರಂದು ಧಾರ್ಮಿಕ ಕಾರ್ಯಕ್ರಮದಲ್ಲಿ ರಾತ್ರಿ 9ಕ್ಕೆ ಕೆರೆಕಟ್ಟೆ ಉತ್ಸವ, ವಸ್ತುಪ್ರದರ್ಶನ ಮಂಟಪದಲ್ಲಿ ಸಂಜೆ 5.30ಕ್ಕೆ ಲಘು ಸಂಗೀತ, 7ಕ್ಕೆ ಭರತನಾಟ್ಯ-ನೃತ್ಯರೂಪಕ, 9ಕ್ಕೆ ತುಳುನಾಟಕ ‘ಇಂಚಲಾ ಉಂಡಾ’ ಪ್ರದರ್ಶನಗೊಳ್ಳಲಿದೆ. 

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.