ಪ್ರಾಯೋಗಿಕದಲ್ಲಿ ತಾಂತ್ರಿಕ ತೊಂದರೆ; ವಾರದೊಳಗೆ ಪೂರ್ಣ ಆರಂಭ

Team Udayavani, Dec 26, 2018, 12:13 PM IST

26-december-4.gif

ಬೆಳ್ತಂಗಡಿ: ಕೆಎಸ್‌ಆರ್‌ ಟಿಸಿಯು ದ.ಕ. ಜಿಲ್ಲೆಯ ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಬಸ್‌ ನಿಲ್ದಾಣಗಳಲ್ಲಿ ನಾಣ್ಯ ಹಾಕಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲು ಉದ್ದೇಶಿಸಿದ್ದು, ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ನೀರಿನ ಘಟಕ ಆರಂಭಗೊಂಡಿದೆ.

ಆದರೆ ಪ್ರಾಯೋಗಿಕ ಹಂತದಲ್ಲಿ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮುಂದಿನ ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಘಟಕವನ್ನು ಕಾರ್ಯಗತಗೊಳಿಸುವ ಚಿಂತನೆ ನಡೆದಿದೆ. ಅತಿ ಹೆಚ್ಚು ಬಸ್‌ಗಳು, ಪ್ರಯಾಣಿಕರು ಆಗಮಿಸುವ ನಿಲ್ದಾಣವಾಗಿ ಗುರುತಿಸಿಕೊಂಡಿರುವ ಧರ್ಮಸ್ಥಳ ನಿಲ್ದಾಣಕ್ಕೆ ಇಂತಹ ಘಟಕ ಅಗತ್ಯವಾಗಿದ್ದು, ಪ್ರಯಾಣಿಕರ ಜತೆಗೆ ಕೆಎಸ್‌ಆರ್‌ಟಿಸಿ ಸಿಬಂದಿಗೂ ಇದು ಅನುಕೂಲವಾಗಲಿದೆ.

ಬಿಪಿಸಿಎಲ್‌ನ ಸಮುದಾಯ ಅಭಿವೃದ್ಧಿ ವಿಭಾಗದಿಂದ ನೀಡಲಾಗಿದೆ ಎಂದು ಘಟಕದಲ್ಲಿ ಬರೆಯಲಾಗಿದ್ದು, ನಾಣ್ಯಗಳ ಮೂಲಕ ಅದರಲ್ಲಿ ಸಂಗ್ರಹಗೊಂಡ ಹಣವನ್ನು ಕೆಎಸ್‌ಆರ್‌ಟಿಸಿ ಅದರ ನಿರ್ವಹಣೆಗಾಗಿ ಬಳಸಿಕೊಳ್ಳಲಿದೆ. ಇಲ್ಲಿ ಜನರಿಗೆ 2 ರೂ.ಗೆ 1 ಲೀ. ನೀರು ಹಾಗೂ 1 ರೂ.ಗೆ ಅರ್ಧ ಲೀ. ನೀರು ಲಭಿಸಲಿದೆ. 

ಕ್ಷೇತ್ರದಲ್ಲಿ ಬೆಳಗ್ಗೆ 6ರಿಂದಲೇ ದೇವರ ದರ್ಶನ ಆರಂಭವಾಗುವುದರಿಂದ ಭಕ್ತರು ಸಾಕಷ್ಟು ಸಂಖ್ಯೆಯ ವಸತಿ ನಿಲಯಗಳಲ್ಲಿ ಉಳಿದುಕೊಂಡಿದ್ದು, ಕಳೆದ ಮೂರು ದಿನಗಳಲ್ಲಿ ವಸತಿ ನಿಲಯಗಳು ಕೂಡ ಭರ್ತಿಯಾಗಿದ್ದವು. ಕ್ಷೇತ್ರದಲ್ಲಿ 30ರಿಂದ 35 ಸಾವಿರದಷ್ಟು ಮಂದಿಗೆ ಉಳಿದುಕೊಳ್ಳುವ ವ್ಯವಸ್ಥೆಯಿದೆ. ಪ್ರಸ್ತುತ ವರ್ಷಾಂತ್ಯದ ಸಮಯವಾದುವರಿಂದ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ.

ಪ್ರಾಯೋಗಿಕ
ಪ್ರಸ್ತುತ ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಪ್ರಾಯೋಗಿಕ ನೆಲೆಯಲ್ಲಿ ನೀರಿನ ಘಟಕವನ್ನು ತೆರೆಯಲಾಗಿದ್ದು, ಆದರೆ ಅದರಲ್ಲಿ ಗೊಂದಲಗಳು ಕಂಡುಬಂದಿವೆ. ಅದನ್ನು ಹೊರರಾಜ್ಯದವರು ಅನುಷ್ಠಾನಗೊಳಿಸಿರುವುದರಿಂದ ಅವರಿಗೆ ಈ ಕುರಿತು ತಿಳಿಸಲಾಗಿದ್ದು, ವಾರದೊಳಗೆ ಪೂರ್ಣ ಪ್ರಮಾಣದಲ್ಲಿ ಘಟಕ ಆರಂಭಗೊಳ್ಳುವ ಸಾಧ್ಯತೆ ಇದೆ. 
– ಶಿವರಾಮ್‌ ನಾಯ್ಕ 
ಮ್ಯಾನೇಜರ್‌, ಧರ್ಮಸ್ಥಳ ಡಿಪೋ

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.