ವ್ಯಸನಮುಕ್ತ ಗ್ರಾಮದಿಂದ ರಾಮರಾಜ್ಯ: ಜೊಲ್ಲೆ

ವ್ಯಸನಮುಕ್ತ ಸಾಧಕರ ಸಮಾವೇಶ; ಶತದಿನೋತ್ಸವ ಸಂಭ್ರಮ

Team Udayavani, Feb 12, 2020, 2:03 AM IST

sds-33

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್‌ ಮಾತನಾಡಿದರು.

ಬೆಳ್ತಂಗಡಿ: ಕುಟುಂಬ ಪ್ರಧಾನ ಭಾರತದ ಜೀವನ ಪದ್ಧತಿ ವಿಶ್ವಕ್ಕೆ ಮಾದರಿ. ಧರ್ಮಸ್ಥಳದ
ಡಾ| ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖೀ ಚಿಂತನೆಗಳು ಸರಕಾರದ ಯೋಜನೆಗಿಂತಲೂ ಮಿಗಿಲಾದುದು. ಈ ಮೂಲಕ ಗ್ರಾಮಗಳು ವ್ಯಸನ ಮುಕ್ತವಾಗಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್‌ ಹೇಳಿದರು.  ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮಂಗಳವಾರ ನಡೆದ ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಸನ ಮಕ್ತಿಯಿಂದ ನವಜೀವನ
ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಮಹಿಳೆಯರು ದುಶ್ಚಟಗಳ ದಮನ ಮಾಡುವ ಸಂಕಲ್ಪ ಶಕ್ತಿ ಮತ್ತು ಆತ್ಮ ಬಲ ಹೊಂದಬೇಕು. ಜನಜಾಗೃತಿ ವೇದಿಕೆಯ ನಿರಂತರ ಪರಿಶ್ರಮ- ಪ್ರಯತ್ನದಿಂದ ಅನೇಕ ಕುಟುಂಬಗಳು ವ್ಯಸನ ಮುಕ್ತವಾಗಿ ಇಂದು ನವಜೀವನ ನಡೆಸುತ್ತಿವೆ ಎಂದು ಹೇಳಿದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಮಹಾತ್ಮ ಗಾಂಧಿ ಅವರು ಕಂಡ ವ್ಯಸನಮುಕ್ತ ಭಾರತದ ಕನಸು ಡಾ| ಹೆಗ್ಗಡೆಯವರ ನೇತೃತ್ವದಲ್ಲಿ ಸಾವಿರಾರು ಕುಟುಂಬಗಳು ನವ ಜೀವನ ನಿರ್ಮಿಸುವಲ್ಲಿ ಪ್ರೇರಣೆ ಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ವ್ಯಸನಮುಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಪವಿತ್ರಾತ್ಮರಾಗಿದ್ದೀರಿ. ಮುಂದೆ ದೃಢ ಸಂಕಲ್ಪದಿಂದ ಅಂತರಂಗ- ಬಹಿರಂಗ ಪರಿಶುದ್ಧರಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ, ಶ್ರೀ.ಕ್ಷೇ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ್‌, ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸತೀಶ್‌ ಹೊನ್ನವಳ್ಳಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ದೇವದಾಸ್‌ ಹೆಬ್ಟಾರ್‌, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷೆ ಶಾರದಾ ರೈ ಉಪಸ್ಥಿತರಿದ್ದರು. ವಿವೇಕ್‌ ವಿ. ಪಾçಸ್‌ ಸ್ವಾಗತಿಸಿದರು. ವಿ. ರಾಮಸ್ವಾಮಿ ವಂದಿಸಿದರು. ಭಾಸ್ಕರ್‌ ಎನ್‌. ಮತ್ತು ನಾಗೇಶ್‌ ನಿರೂಪಿಸಿದರು.

ಸಮ್ಮಾನ, ಜಾಗೃತಿ ಅಣ್ಣ-ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ
-  ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು.

-  ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ ಜನಜಾಗೃತಿ ವೇದಿಕೆಗೆ ಮದ್ಯವರ್ಜನ ಶಿಬಿರ ಆಯೋಜಿಸಲು 10 ಲಕ್ಷ ರೂ. ನೆರವು ನೀಡಿದರು.

-  ಮದ್ಯವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾಗಿ ನವಜೀವನ ನಡೆಸುತ್ತಿರುವ ಹುಣಸೂರಿನ ಕೃಷ್ಣೇಗೌಡ ಮತ್ತು ಮಂಡ್ಯದ ಸವಿತಾ ರುದ್ರಾಚಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

-  ಮದ್ಯ ವ್ಯಸನಿಗಳ ಮನಃಪರಿವರ್ತನೆ ಮಾಡಿ ವ್ಯಸನ ಮುಕ್ತರನ್ನಾಗಿ ಮಾಡಿದ 10 ಮಂದಿ ಸಾಧಕರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯ ಅನಂತ್‌ ರಚಿಸಿದ ಭಕ್ತಿಗೀತೆಯ ಧ್ವನಿಸುರುಳಿಯನ್ನು ಡಾ| ಹೆಗ್ಗಡೆ ಬಿಡುಗಡೆಗೊಳಿಸಿದರು.

-  ಸಮಾವೇಶದಲ್ಲಿ 63 ತಾಲೂಕುಗಳ 3,037 ಮಂದಿ ನವಜೀವನ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.