ಮಳೆ ಮಾಪನ ಕೇಂದ್ರ ಸ್ಥಳಾಂತರಿಸಲು ನಿರಾಸಕ್ತಿ?

Team Udayavani, Nov 29, 2017, 4:34 PM IST

29-Nov-13.jpg

ಉಪ್ಪಿನಂಗಡಿ: ಹವಾಮಾನ ಇಲಾಖೆಯಡಿ ಅಸ್ತಿತ್ವವನ್ನು ಹೊಂದಿರುವ ಉಪ್ಪಿನಂಗಡಿಯ ಮಳೆ ಮಾಪನ ಕೇಂದ್ರವು ಸದ್ಯ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿದೆ. ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ಭರದಿಂದ ನಡೆಯುತ್ತಿದ್ದರೂ ಮಳೆ ಮಾಪನ ಕೇಂದ್ರವನ್ನು ವರ್ಗಾಯಿಸಲು ಹವಾಮಾನ ಇಲಾಖೆ ನಿರಾಸಕ್ತಿ ತಾಳಿದಂತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದಾಗಿನಿಂದಲೂ ಅಡೆತಡೆಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದ ಮಳೆ ಮಾಪನ ಕೇಂದ್ರವು, ಪ್ರಸಕ್ತ ಆಸ್ಪತ್ರೆಯು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ವಿಸ್ಕೃತ ಕಟ್ಟಡಗಳ ನಿರ್ಮಾಣ ಕಾರ್ಯ ನಡೆಯುತ್ತಿರುವ ಹೊತ್ತಲ್ಲಿ, ಕಾಮಗಾರಿಗೆ ಅಡಚಣೆ ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆ ಮಾಪನ ಕೇಂದ್ರವನ್ನು ತೆರವುಗೊಳಿಸಲು ಆರೋಗ್ಯ ಇಲಾಖೆಯು ಹವಾಮಾನ ಇಲಾಖೆಗೆ ಸೂಚಿಸಿತ್ತು.

ಮರೆತು ಹೋಯಿತೇ?
ಪರ್ಯಾಯ ಸ್ಥಳದಲ್ಲಿ ಮಳೆ ಮಾಪನ ಕೇಂದ್ರವನ್ನು ಅಳವಡಿಸಲು ಹವಾಮಾನ ಇಲಾಖೆ ಅಧಿಕಾರಿಗಳ ತಂಡ ಉಪ್ಪಿನಂಗಡಿಯಲ್ಲಿ ಪರಿಶೀಲನೆ ನಡೆಸಿ, ನಿರ್ಗಮಿಸಿತ್ತು. ಇದಾಗಿ ಏಳು ತಿಂಗಳು ಉರುಳಿದರೂ ಸ್ಥಳಾಂತರ ಕಾರ್ಯ ನಡೆಯದೇ ಇರುವುದು ಅಚ್ಚರಿ ಮೂಡಿಸಿದೆ. ಅಧಿಕಾರಿಗಳಿಗೆ ಮಳೆ ಮಾಪನ ಕೇಂದ್ರ ಮರೆತು ಹೋಗಿದೆಯೇ? ಅಥವಾ ಮಳೆ ಮಾಪನ ಕೇಂದ್ರ ಸ್ಥಾಪಿಸಲು ಅಗತ್ಯವಾದ 15 ಅಡಿ ಸುತ್ತಳತೆಯ ಜಾಗ ಸರಕಾರದ ಬಳಿ ಇಲ್ಲವೇ ಎಂಬ ಪ್ರಶ್ನೆಗಳು ಮೂಡಿವೆ.

ಪ್ರಸ್ತುತ ಮಳೆ ಮಾಪನ ಕೇಂದ್ರಕ್ಕೆ ಅಳವಡಿಸಲಾದ ರಕ್ಷಣಾ ಬೇಲಿ ಅಲ್ಲಲ್ಲಿ ತುಂಡಾಗಿದ್ದು, ಸಾಧನಗಳು ಅಪಾಯಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲೂ ಮಳೆ ಮಾಪನ ಕೇಂದ್ರದ ಸುರಕ್ಷತೆ ಹಾಗೂ ಸ್ಥಳಾಂತರಕ್ಕೆ ಇಲಾಖೆ ಆದ್ಯತೆ ನೀಡಬೇಕಾಗಿದೆ.

ಮಳೆ ವರದಿ ಕಳುಹಿಸುತ್ತಿದ್ದೇವೆ
ಈ ಬಗ್ಗೆ ಪ್ರತಿಕ್ರಿಯಿಸಿದ ಕಂದಾಯ ಇಲಾಖೆಯ ಗ್ರಾಮ ಕರಣಿಕ ರಮಾನಂದ ಚಕ್ಕಡಿ, ಏಳು ತಿಂಗಳ ಹಿಂದೆ ಹವಾಮಾನ ಇಲಾಖೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳ ತಂಡ ಪರಿಶೀಲನ ಕಾರ್ಯ ನಡೆಸಿ ನಿರ್ಗಮಿಸಿತ್ತು. ಆಮೇಲಿನ ಬೆಳವಣಿಗೆ ಏನಾಗಿದೆ ಎನ್ನುವುದನ್ನು ತಿಳಿಸಿಲ್ಲ. ಪ್ರಸಕ್ತ ಮಳೆ ಮಾಪನದ ವರದಿಯನ್ನು ನಮ್ಮ ಇಲಾಖೆಯ ಮುಖೇನ ಗ್ರಾಮ ಸಹಾಯಕರು ಬೆಂಗಳೂರಿನ ಹವಾಮಾನ ಇಲಾಖೆಗೆ ರವಾನಿಸುತ್ತಿದ್ದು, ಈ ಕಾರ್ಯ ಹಿಂದಿನಂತೆಯೇ ನಡೆಯುತ್ತಿದೆ ಎಂದಿದ್ದಾರೆ.

ಸ್ಥಳಾಂತರ ಅನಿವಾರ್ಯ
ಮಳೆ ಮಾಪನವು ಹವಾಮಾನ ಇಲಾಖೆಗೆ ಅತ್ಯಗತ್ಯವಾದ ವ್ಯವಸ್ಥೆಯಾಗಿದ್ದು, ಹಲವಾರು ವರ್ಷಗಳಿಂದ ಉಪ್ಪಿನಂಗಡಿಯಲ್ಲಿ ಕಾರ್ಯ ನಡೆಯುತ್ತಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಕಾರಣಕ್ಕೆ ಅದು ಸ್ಥಳಾಂತರಗೊಳ್ಳುವುದು ಅನಿವಾರ್ಯ. ಸ್ಥಳಾಂತರಗೊಳ್ಳದೆ ಅವ್ಯವಸ್ಥೆಯಿಂದ ಹಾನಿಗೀಡಾಗಿ ಉಪಯೋಗಕ್ಕಿಲ್ಲದಂತೆ ಆಗಬಾರದು. ಈ ದಿಶೆಯಲ್ಲಿ ಸಂಬಂಧಪಟ್ಟ ಇಲಾಖೆ ಕಾಳಜಿಯುಕ್ತ ಗಮನಹರಿಸಬೇಕೆಂದು ಉಪ್ಪಿನಂಗಡಿ ವರ್ತಕ ಸಂಘದ ಅಧ್ಯಕ್ಷ ಪ್ರಶಾಂತ್‌ ಡಿಕೋಸ್ಟಾ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.