ಇಂದು ದ.ಕ., ಉಡುಪಿ, ಕಾಸರಗೋಡು ಶಾಲೆಗಳಿಗೆ ರಜೆ
ಭಾರೀ-ಮಳೆ-ಮುನ್ನೆಚ್ಚರಿಕೆ
Team Udayavani, Jul 23, 2019, 6:00 AM IST
ಮಂಗಳೂರು: ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜು. 23ರಂದು ದ. ಕನ್ನಡ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಅಂಗನವಾಡಿ ಮತ್ತು ಕಾಲೇಜುಗಳಿಗೆ (ಪದವಿಪೂರ್ವ ತರಗತಿವರೆಗೆ) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ತಿಳಿಸಲಾಗಿದೆ. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉಡುಪಿಯಲ್ಲೂ ರಜೆ
ಉಡುಪಿ: ಭಾರೀ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಜುಲೈ 23ರ ಮಂಗಳವಾರದಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಕಾಸರಗೋಡು: ಶಾಲಾ ಕಾಲೇಜುಗಳಿಗೆ ಇಂದು ರಜೆ
ಕಾಸರಗೋಡು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನೆಲೆ ಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಡಾ| ಡಿ.ಸಜಿತ್ ಬಾಬು ತಿಳಿಸಿದ್ದಾರೆ.
ಕರಾವಳಿಯಾದ್ಯಂತ ರೆಡ್ ಅಲರ್ಟ್
ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ದ.ಕ., ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜು. 24ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.23 ಮತ್ತು ಜು.24ರಂದು ತಲಾ 205 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ